
ಭಾಲ್ಕಿ: ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಶಾಲಾ ಕಾಲೇಜುಗಳ ಮುಖ್ಯೋಪಾಧ್ಯಾಯರು ಮತ್ತು ಪ್ರಾಂಶುಪಾಲರಿಗಾಗಿ ಎರಡು ದಿವಸಗಳ ವೃತ್ತಿಪರ ಅಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ
ವಿಡಿಯೋ ಕಾನ್ಫರೆನ್ಸ ಮೂಲಕ ಸಂಸದ ಹಾಗೂ ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸಾಗರ ಖಂಡ್ರೆ ಅವರು ಕಾರ್ಯಕ್ರಮ ಕುರಿತು ಮಾತನಾಡಿದರು.
ಎರಡು ದಿನಗಳ ಕಾರ್ಯಾಗಾರ ಯಶಸ್ವಿಯಾಗಿ ನಡೆಸಿದ್ದಕ್ಕೆ ಅಭಿನಂದನೆಗಳನ್ನು ಸಲ್ಲಿಸಿ, ಸಂಸ್ಥೆಯನ್ನು ಪ್ರಗತಿಯ ಪಥದಲ್ಲಿ ತೆಗೆದುಕೊಂಡು ಹೋಗಬೇಕಾದರೆ ಎಲ್ಲಾ ಸಿಬ್ಬಂದಿ ವರ್ಗದವರ ಸಹಕಾರ ಅತೀ ಮುಖ್ಯವಾದುದ್ದು. ಬಡವಿದ್ಯಾರ್ಥಿಗಳಿಗಾಗಿ ಸಂಸ್ಥೆಯು ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಅಲ್ಲದೆ ವಿಶೇಷವಾಗಿ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಲಾಗುತ್ತಿದೆ. ಸಿಬ್ಬಂದಿಗಳ
ನೇಮಕಾತಿಯಲ್ಲಿ ಪಾರದರ್ಶಕತೆ ತರಬೇಕು. ಎಲ್ಲಾ ಸಿಬ್ಬಂದಿಯವರು ಶಿಕ್ಷಣ ಕ್ಷೇತ್ರಕ್ಕೆ ಪ್ರಾಮಾಣಿಕವಾಗಿ ಮತ್ತು ದಕ್ಷತೆಯಿಂದ ಸೇವೆ ಸಲ್ಲಿಸಬೇಕು ಎಂದು ಹೇಳುತ್ತಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲರಿಗೂ
ಅಭಿನಂದನೆಗಳನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಕಾAತ ಶಾಬಾದಕರ ಅವರು ಶಾಂತಿವರ್ಧಕ ಶಿಕ್ಷಣ ಸಂಸ್ಥೆಯು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು
ಪ್ರಶಂಸಿಸಿದರು. ಶಿಕ್ಷಕರು ಮಾತಿಗಿಂತ ಕೃತಿಯಲ್ಲಿ ಮುಂದುವರೆಯಬೇಕು. ಶಿಕ್ಷಕರ ಮೇಲೆ ಮಹತ್ತರ ಜವಾಬ್ದಾರಿ ಇದೆ. ಈ ಜವಾಬ್ದಾರಿಯನ್ನು ಎಲ್ಲಾ ಶಿಕ್ಷಕರು ನಿರ್ವಹಿಸಿದರೆ ಉತ್ತಮ ಸಮಾಜ ಕಟ್ಟಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶಾಲಾ- ಕಾಲೇಜುಗಳ ಮುಖ್ಯಸ್ಥರಿಗಾಗಿ ನಡೆಸಿದ ೨ ದಿನಗಳ ವೃತ್ತಿಪರ ಅಭಿವೃದ್ಧಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರದಲ್ಲಿ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಆಯಾ ವಿಷಯಗಳ ಅಧ್ಯಾಪಕರಿಗೆ ಸಂಸ್ಥೆ ವತಿಯಿಂದ
ಸನ್ಮಾನಿಸಲಾಯಿತು. ಪ್ರಾರಂಭದಲ್ಲಿ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಸುರೇಂದ್ರನ್ ಆರ್. ಅವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಡಾ.ಗೀತಾ ಈಶ್ವರ ಖಂಡ್ರೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಪ್ರೊ. ಅಂಕುಶ ಢೋಲೆ, ಆಡಳಿತಾಧಿಕಾರಿಗಳು ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಇವರು ಸರ್ವರಿಗೂ
ವಂದನೆಗಳನ್ನು ಸಲ್ಲಿಸಿದರು. ಈ ಸಮಾರೋಪ ಸಮಾರಂಭದಲ್ಲಿ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಎಲ್ಲಾ ಶಾಲಾ-ಕಾಲೇಜುಗಳ ಪ್ರಾಂಶುಪಾಲರು ಹಾಗೂ ಸಮಸ್ತ ಸಿಬ್ಬಂದಿ ವರ್ಗದವರು
ಉಪಸ್ಥಿತರಿದ್ದರು.































