ಹುಬ್ಬಳ್ಳಿ,ಆ5: ಅಸಂಘಟಿತ ಕಾರ್ಮಿಕರ ಹಕ್ಕುಗಳಿಗಾಗಿ ನಗರದ ಬಿ.ಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಆಸಂಘಂತ ಕಾರ್ಮಿಕರ ಒಕ್ಕೂಟ ವತಿಯಿಂದ ಬೃಹತ್ ಹೋರಾಟ ನಡೆಸಲಾಯಿತು.
ಇದೇ ವೇಳೆ ಬಿಜೆಪಿ ಯುವ ಮುಖಂಡ ವೆಂಕಟೇಶ್ ಕಾಟವೆ ಮಾತನಾಡಿ ಈ ಹೋರಾಟವು ರಾಜ್ಯದ ಲಕ್ಷಾಂತರ ಅಸಂಘಟಿತ ನಿರ್ಮಾಣ ಕಾರ್ಮಿಕರ ಹಕ್ಕುಗಳ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯುವ ಉದ್ದೇಶವಾಗಿದೆ, ಕಾರ್ಮಿಕ ಮಕ್ಕಳಿಗೆ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ಕಲ್ಪಿಸಬೇಕು,ಕಾರ್ಮಿಕರಿಗೆ ಆರೋಗ್ಯ ಕಾರ್ಡ್‍ಗಳನ್ನು ನೀಡಬೇಕು, ಸರ್ಕಾರಿ ಯೋಜನೆಗಳ ಲಾಭಗಳು ನೇರವಾಗಿ ಕಾರ್ಮಿಕರಿಗೆ ತಲುಪುವಂತಾಗಬೇಕೆಂದು ಮನವಿ ಮಾಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಗೌರವಧ್ಯಕ್ಷರಾದ ಎಸ್. ಪಿ ಕರಿಸೋಮನಗೌಡರ,ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘ. ಬೆಂಗಳೂರು ರಾಜ್ಯಾಧ್ಯಕ್ಷರು ಅಶ್ವಥ್ ಟಿ ಮರೀಗೌಡ್ರು, ಮತ್ತಿತರರು ಉಪಸ್ಥಿತರಿದ್ದರು.





















