
ಕಲಬುರಗಿ,ಮೇ.29:ನೂತನ ಮಂತ್ರಿಮಂಡಲದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕನಿಷ್ಠ ಎಂಟಕ್ಕೂ ಮೇಲ್ಪಟ್ಟು ಮಂತ್ರಿ ಸ್ಥಾನಗಳು ನೀಡಬೇಕೆಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಗೌರವಾಧ್ಯಕ್ಷರಾದ ಬಸವರಾಜ ದೇಶಮುಖ ಮತ್ತು ಸಂಸ್ಥಾಪಕ ಅಧ್ಯಕ್ಷರಾದ
ಡಾ. ಲಕ್ಷ್ಮಣ ದಸ್ತಿ ಕಾಂಗ್ರೆಸ್ ಹೈಕಮಾಂಡಗೆ ಒತ್ತಾಯಿಸಿದೆ.
ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ ನೀರಾವರಿ, ಲೋಕೋಪಯೋಗಿ, ಕೈಗಾರಿಕೆ, ಪ್ರೌಢ ಶಿಕ್ಷಣ, ಯೋಜನಾ, ಆರೋಗ್ಯ ಮತ್ತು ವೈದ್ಯಕೀಯ, ಉನ್ನತ ಶಿಕ್ಷಣ ,
ಪ್ರವಾಸೋಧ್ಯಮ ಸೇರಿದಂತೆ ಅಭಿವೃದ್ಧಿಗೆ ಪೂರಕವಾದ ಸ್ಥಾನಗಳು ನೀಡಲು ಸಮಿತಿ ಆಗ್ರಹಿಸಿದೆ.
ಗೋವಿಂದರಾವ ಸಮಿತಿ ವರದಿಯನ್ನು ಆಧಾವಾಗಿಟ್ಟುಕೊಂಡು ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಮತ್ತು 371ನೇ ಜೇ ಕಲಂ ಪರಿಣಾಮಕಾರಿ ಅನುಷ್ಠಾನಕ್ಕೆ ಅದರಂತೆ ಈಗಾಗಲೇ ಸರ್ಕಾರ ತೀರ್ಮಾನಿಸಿರುವಂತೆ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಪ್ರತ್ಯೇಕ ಸಚಿವಾಲಯ ಕಾಲಮಿತಿಯಲ್ಲಿ ಅನುಷ್ಠಾನಕ್ಕೆ
ಸಮಾರೋಪಾದಿಯಲ್ಲಿ ಕ್ರಮ ಕೈಗೊಳ್ಳವುದು ಅತಿ ಅವಶ್ಯಕವಾಗಿದೆ.ಕಲ್ಯಾಣದ ಜನಮಾನಸದ ಬೇಡಿಕೆಯಾದ ಕಲ್ಯಾಣದ ಪ್ರತ್ಯೇಕ ಸಚಿವಾಲಯ ಸ್ಥಾನ ನೀಡಬೇಕು. ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ನೂತನ ಮಂತ್ರಿಮಂಡಲದಲ್ಲಿ ಕಲ್ಯಾಣದ ಸಚಿವರಿಗೆ ಮಾತ್ರ ನೀಡಬೇಕು ಒಟ್ಟಾರೆ ಕಲ್ಯಾಣ ಕರ್ನಾಟಕ ಪ್ರದೇಶದ ಹಿಂದುಳುವಿಕೆಯನ್ನು ಗಮನದಲ್ಲಿಟ್ಟುಕೊಂಡು ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಪ್ರಬಲ ಖಾತೆಗಳು ಕಲ್ಯಾಣಕ್ಕೆ ನೀಡಬೇಕು.
ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಯ ಬಗ್ಗೆ ಸಂಪೂರ್ಣ ಮಾಹಿತಿ ಇರುವ ಮತ್ತು ಅಭಿವೃದ್ಧಿಗೆ ಕೈಗೊಳ್ಳುಬೇಕಾದ ಕ್ರಮಗಳ ಬಗ್ಗೆ ಎಳೆ ಎಳೆಯಾಗಿ ಅರಿತಿರುವ ರಾಷ್ಟ್ರ ಮಟ್ಟದ ನಾಯಕರು ಮತ್ತು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆರವರು ಈ ವಿಷಯಕ್ಕೆ ಸಂಬಂಧಿಸಿ ಗಂಭೀರವಾಗಿ ಪರಿಗಣಿಸಲು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಬಲವಾಗಿ ಒತ್ತಾಯಿಸಿದೆ.























