Home ಜಿಲ್ಲೆ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ನೀಡುವುದೆ ಸಭೆಯ ಉದ್ದೇಶ

ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ನೀಡುವುದೆ ಸಭೆಯ ಉದ್ದೇಶ

ಸೈದಾಪುರ:ಮೇ.೧೬: ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲಾಗುವ ದೌರ್ಜನ್ಯಗಳನ್ನು, ಆರ್ಥಿಕ, ಸಾಮಾಜಿಕ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ನೀಡುವುದೆ ಸಭೆಯ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ ಅಭಿಪ್ರಾಯಪಟ್ಟರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿನ ದಲಿತರ ಮೇಲಾಗುವ ದೌರ್ಜನ್ಯಗಳನ್ನು ತಡೆಯಲು ಪ್ರತಿ ತಿಂಗಳಿಗೊಮ್ಮೆ ಜನರ ಬಳಿ ನೇರವಾಗಿ ಹೋಗಿ ಅವರ ಕುಂದು ಕೊರತೆಗಳನ್ನು ಆಲಿಸಿ ನಿಯಮಿತವಾಗಿ ಪರಿಹಾರ ನೀಡುವುದೆ ಸಭೆಯ ಮೂಲ ಉದ್ದೇಶವಾಗಿದೆ. ಅದರಂತೆ ನಿಮ್ಮ ನಿಮ್ಮ ಗ್ರಾಮಗಳಲ್ಲಿನ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಸ್ಯೆಗಳನ್ನು ನಮಗೆ ತಿಳಿಸಿದರೆ ನಾವು ಸಂಬAಧಿಸಿದ ಇಲಾಖೆಯ ಗಮನಕ್ಕೆ ತಂದು ತಕ್ಷಣವೇ ಸ್ಪಂದಿಸಿ ಸಂಬAಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡುವುದು ಮತ್ತು ಕಾನೂನು ಕ್ರಮ ಕೈಗೊಳ್ಳುವಂತೆ ತಿಳಿಸಲಾಗುವುದು. ಪ್ರತಿಯೊಬ್ಬರು ಇಂತಹ ಸಭೆಯಲ್ಲಿ ಭಾಗವಹಿಸಿ ನಿಮ್ಮಲ್ಲಿನ ವಾಸ್ತವ ಸ್ಥಿತಿಗತಿಯನ್ನು ಮತ್ತು ಸಮಸ್ಯೆಗಳನ್ನು ಹೇಳಿ ಪರಿಹಾರವನ್ನು ಕಂಡುಕೊಳ್ಳುವುದರ ಜೊತೆಗೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ದೌರ್ಜನ್ಯ ಸಲಹಾ ಸಮಿತಿಯ ಸದಸ್ಯ ಮರೆಪ್ಪ ಚಟ್ಟೇರಕರ್ ಮಾತನಾಡಿದರು. ಇದಕ್ಕೂ ಮೊದಲು ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣಗಳ ಪರಿಶೀಲನೆ, ಜಮೀನು ಸಮಸ್ಯೆಗಳು, ಅಂಬೇಡ್ಕರ್ ಭವನ ನಿರ್ಮಾಣ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಚೆನ್ನಬಸಪ್ಪ, ಡಿವೈಎಸ್ಪಿ ಸುರೇಶ, ಪಿಐ ರಾಜಶೇಖರ ಹಳಿಗೇರಾ, ಶಿವಾನಂದ ಎಂ.ಮರಡಿ, ಪಿಎಸ್‌ಐ ಭೀಮರಾಯ ಕೂಡ್ಲೂರು, ಪೇದೆ ರಾಜಕುಮಾರ್ , ಕಂದಾಯ ಇಲಾಖೆಯ ಉಪ ತಹಶೀಲ್ದಾರ್ ದಸ್ತಗಿರಿ ನಾಯಕ, ಪಿಡಿಓ ವಿಜಯಲಕ್ಷ್ಮೀ ಸೇರಿದಂತೆ ವಿವಿಧ ಗ್ರಾಮಗಳ ಸಾರ್ವಜನಿಕರು ಉಪಸ್ಥಿತರಿದ್ದರು.