ಸಮಾಜದ ಬೆಳವಣಿಗೆಯಲ್ಲಿ ಪತ್ರಕರ್ತರ ಪಾತ್ರ ಹಿರಿದು

ಹುಮನಾಬಾದ್:ಅ.1: ನಾಗರಿಕ ಸಮಾಜದ ಬೆಳವಣಿಗೆಯಲ್ಲಿ ಪತ್ರಕರ್ತರ ಪಾತ್ರ ಹಿರಿದಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಹೇಳಿದರು.

ಪಟ್ಟಣದ ಸರ್ವೋದಯ ಪದವಿ ಕಾಲೇಜಿನ ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಯ ಕರ್ನಾಟಕ ಜನಪರ ವೇದಿಕೆ ಹಾಗೂ ಯಲಾಲ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಿತ್ಯ ಜೀವನದಲ್ಲಿ ಸಮಾಜದ ಬೆಳವಣಿಗೆಗೆ ಪೂರಕವಾಗಿ ಪತ್ರಿಕೆಗಳು ಮತ್ತು ಪತ್ರಕರ್ತರು ಶ್ರಮಿಸುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಕೂಡಾ ಪತ್ರಿಕೆಗಳನ್ನು ನಿತ್ಯ ಜೀವನದಲ್ಲಿ ಓದುವ ಹವ್ಯಾಸ ಮೈಗೂಡಿಸಿಕೊಂಡು ಸಮಾಜದ ಬೆಳವಣಿಗೆಗೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

ಪತ್ರಕರ್ತರು ಅನೇಕ ಸಮಸ್ಯೆಗಳ ನಡುವೆಯೂ ಜ್ವಲಂತ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪತ್ರಕರ್ತರ ಹಿತ ಕಾಪಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ. ಪತ್ರಕರ್ತರು ಇದರ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.

ಈ ವೇಳೆ ಯಲಾಲ ಶಿಕ್ಷಣ ಸಂಸ್ಥೆಯ ನಿರ್ದೇಶಕ ನವೀನ ಬತಲಿ ನೇತೃತ್ವದಲ್ಲಿ ಹುಮನಾಬಾದ್ ತಾಲೂಕಿನ ಪತ್ರಕರ್ತರಿಗೆ ಸನ್ಮಾನಿಸಿ, ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸರ್ವೋದಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಾಂತವೀರ ಯಲಾಲ, ದುರ್ಯೋಧನ ಹೂಗಾರ, ಶೈಲೇಂದ್ರ ಕಾವಡಿ, ವೆಂಕಟೇಶ ಜಾಧವ, ಸಂಜೀವಕುಮಾರ ಜುನ್ನಾ, ದಿಲೀಪ ಮೇತ್ರೆ, ಪ್ರಶಾಂತ ಹೊಸಮನಿ, ಸಂಜಯ ದಂತಕಾಳೆ, ಶಿವಶರಣ ಚಾಂಗಲೇರಿ,ಸೈಯದ್ ರಿಜ್ವಾನ್, ರಾಜು ಪೂಜಾರಿ, ಗುಂಡು ಅತಿವಾಳ, ಸಜ್ಜೀಶ ಲಂಬೂನೋರ್, ಮಲ್ಲಿಕಾರ್ಜುನ್ ರೆಡ್ಡಿ ಸೇರಿ ಅನೇಕರಿದ್ದರು.