Home ಜಿಲ್ಲೆ ರಾಷ್ಟ್ರ ನಿರ್ಮಾಣದಲ್ಲಿ ವಕೀಲರ ಪಾತ್ರ: ಸಂವಾದ

ರಾಷ್ಟ್ರ ನಿರ್ಮಾಣದಲ್ಲಿ ವಕೀಲರ ಪಾತ್ರ: ಸಂವಾದ

ಬೀದರ್: ರಾಷ್ಟ್ರ ನಿರ್ಮಾಣದಲ್ಲಿ ವಕೀಲರ ಪಾತ್ರ ಕುರಿತ ಸಂವಾದ ಇಲ್ಲಿಯ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಇರುವ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಕರ್ನಾಟಕ ಹಾಗೂ ಒಡಿಶಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ವಕೀಲರೊಂದಿಗೆ ಸಂವಾದ ನಡೆಸಿದರು.
ಉತ್ತಮ ರಾಷ್ಟ್ರ ನಿರ್ಮಾಣ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನದ ಆಶಯಗಳ ರಕ್ಷಣೆಯಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.
ಪರಿಶ್ರಮದಿಂದ ಮಾತ್ರ ವೃತ್ತಿಯಲ್ಲಿ ಯಶಸ್ಸು ಕಾಣಬಹುದು ಎಂದು
ಬೆಂಗಳೂರಿನ ವಿಶೇಷ ಸಾರ್ವಜನಿಕ ಅಭಿಯೋಜಕ(ಸಿಬಿಐ, ಇ.ಡಿ, ಎನ್‍ಐಎ ಹಾಗೂ ನಟ ದರ್ಶನ್ ವಿರುದ್ಧ) ಪಿ. ಪ್ರಸನ್ನಕುಮಾರ್ ಯುವ ವಕೀಲರಿಗೆ ಸಲಹೆ ಮಾಡಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಂಜಯ್ ಮಠಪತಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸತ್ರ ನ್ಯಾಯಾಧೀಶ ಸೈಯದ್ ಬಲಿಗುರ್ ರೆಹಮಾನ್, ಕಲಬುರಗಿಯ ಮರತೂರಿನ ವಿಘ್ನೇಶ್ವರ ಪ್ರತಿಷ್ಠಾನ ಟ್ರಸ್ಟ್‍ನ ಅಮಿತಕುಮಾರ ದೇಶಪಾಂಡೆ, ಮಹಾದೇವಯ್ಯ ಕರದಳ್ಳಿ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಸಂಜೀವ್ ಬಾಬಶೆಟ್ಟಿ, ಅಧಿಕಾರಿಗಳು, ವಕೀಲರು ಇದ್ದರು.
ಜಿಲ್ಲಾ ವಕೀಲರ ಸಂಘ ಹಾಗೂ ವಿಜ್ಞಾನೇಶ್ವರ ಪ್ರತಿಷ್ಠಾನ ಟ್ರಸ್ಟ್ ಸಹಯೋಗದಲ್ಲಿ ಸಂವಾದ ಆಯೋಜಿಸಲಾಗಿತ್ತು.