Home ಜಿಲ್ಲೆ ಕಲಬುರಗಿ ದೇಶದ ಸ್ವಾತಂತ್ರ್ಯದಲ್ಲಿ ಉಪ್ಪಿನ ಸತ್ಯಾಗ್ರಹದ ಪಾತ್ರ ಪ್ರಮುಖ

ದೇಶದ ಸ್ವಾತಂತ್ರ್ಯದಲ್ಲಿ ಉಪ್ಪಿನ ಸತ್ಯಾಗ್ರಹದ ಪಾತ್ರ ಪ್ರಮುಖ

ಕಲಬುರಗಿ:ಮಾ.12: ದೇಶದ ಸ್ವಾತಂತ್ರ ಚಳುವಳಿ ಇತಿಹಾಸದಲ್ಲಿ ಮುಖ್ಯವಾಗಿದೆ. ಮಹಾತ್ಮ ಗಾಂಧೀಜಿಯವರು ಬ್ರಿಟಿಷರ ಆಡಳಿತ ಕಾಲದಲ್ಲಿ ಉಪ್ಪಿನ ಮೇಲೆ ವಿಧಿಸಿ ತೆರಿಗೆಯನ್ನು ವಿರೋಧಿಸಿ ತಮ್ಮ ಅನುಯಾಯಿಗಳೊಡನೆ ಸಾಬರಮತಿ ಆಶ್ರಮದಿಂದ ಮಾ.12,1930ರಿಂದ ಸಮುದ್ರ ದಡದಲ್ಲಿರುವ ದಂಡಿಯವರೆಗಿನ 240 ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿ 1930ರ ಎಪ್ರಿಲ್-6ರಂದು ಉಪ್ಪನ್ನು ತಯಾರಿಸಿ, ಬ್ರಿಟಿಷರಿಗೆ ಬಿಸಿ ಮುಟ್ಟಿಸುವ ಮೂಲಕ ದೇಶದ ಸ್ವಾತಂತ್ರ ಚಳುವಳಿಯಲ್ಲಿ ಪ್ರಮುಖವಾದ ಸ್ಥಾನವನ್ನು ಪಡೆದಿದೆ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಖಾದ್ರಿ ಚೌಕ್‍ನಲ್ಲಿನ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಜರುಗಿದ ‘ದಂಡಿ(ಉಪ್ಪಿನ) ಯಾತ್ರೆ ದಿನಾಚರಣೆ’ ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್ ಮಾತನಾಡಿ, ಸಮುದ್ರ ದಡದಲ್ಲಿರುವ ನಾಗರಿಕರಿಗೆ ಉಪ್ಪು ಉಚಿತವಾಗಿ ದೊರೆಯುತ್ತಿದ್ದರೂ ಕೂಡಾ ಅದನ್ನು ಸರ್ಕಾರದಿಂದ ಖರೀದಿಸುವಂತೆ ಮಾಡಲಾಗಿತ್ತು. ಇದರಿಂದ ಬಡವರು, ಜನಸಾಮಾನ್ಯರಿಗೆ ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದನ್ನು ಗಮನಿಸಿದ ಮಹಾತ್ಮ ಗಾಂಧೀಜಿಯವರು ಉಪ್ಪಿನ ಸತ್ಯಾಗ್ರಹ(ದಂಡಿಯಾತ್ರೆ)ಯನ್ನು ಮಾಡುವ ಮೂಲಕ ಅವರಿಗೆ ನ್ಯಾಯವನ್ನು ಒದಗಿಸಿಕೊಟ್ಟರು. ಇದು ಸ್ವಾತಂತ್ರ್ಯ ಚಳುವಳಿಗೆ ಪ್ರಖರತೆಯ ಹೆಚ್ಚಳಕ್ಕೆ ಕಾರಣವಾಯಿತು ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಶಿಕ್ಷಕಿಯರಾದ ಪೂಜಾ ಹೂಗಾರ, ಕಾವೇರಿ ಹೌದೆ, ಮುಸ್ಕಾನ್ ಶೇಖ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.