Home ಜಿಲ್ಲೆ ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯ

ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯ

ಚನ್ನಮ್ಮನ ಕಿತ್ತೂರ,ಏ 13: ಇಂದಿನ ದಿನಗಳಲ್ಲಿ ಡಿಜಿಟಲ್ ತಂತ್ರಜ್ಞಾನ ಹಾಗೂ ಶೈಕ್ಷಣಿಕ ತಂತ್ರಜ್ಞಾನ ಮುಖ್ಯವಾಗಿದೆ ಎಂದು ಮಾಜಿ ಸಚಿವ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.


ಸಮೀಪದ ಚಿಕ್ಕದಿನಕೊಪ್ಪ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಕೇಂದ್ರ ಸರ್ಕಾರದ ತೈಲ ಮತ್ತು ನೈಸರಗಿಕ ಅನಿಲ ನಿಗಮ ನಿಯಮಿತ ಸಂಸ್ಥೆ ಸಿಎಸ್‍ಆರ್ ಯೋಜನೆ ಅಡಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಸ್ಮಾರ್ಟ್ ಬೋರ್ಡ ಮತ್ತು ಶಿಕ್ಷಾ ಟ್ಯಾಬ್ಲೆಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಕೌಶಲ್ಯ ಮತ್ತು ಪ್ರತಿಭೆಯನ್ನು ಅಭಿವೃದ್ಧಿಪಡಿಸಿಕೊಂಡು ರಾ?À್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಮತ್ತು ಈ ತಂತ್ರಜ್ಞಾನ ಬಳಿಸಿಕೊಂಡು ತಮ್ಮ ಬದುಕು ಕಟ್ಟಿಕೊಳ್ಳಬೇಕೆಂದರು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ವಿಠ್ಠಲ ಹಲಗೇಕರ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದು ತಮ್ಮ ಕನಸು ಸಾಕಾರಗೊಳಿಸಿ, ಜ್ಞಾನ, ಶಿಸ್ತು ಮತ್ತು ನೈತಿಕ ಮೌಲ್ಯಗಳಿಂದ ಸಮೃದ್ಧರಾಗಿ ದೇಶದ ಉನ್ನತಿಗೆ ಶ್ರಮಿಸಬೇಕೆಂದರು.


ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಅರವಿಂದ ಪಾಟೀಲ, ಸಮಾಜಸೇವಕ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಮೋದ ಕೋಚೆರಿ, ಧನಶ್ರೀ ದೇಸಾಯಿ, ಬಿಇಒ ಪಿ.ರಾಮಪ್ಪ, ಮಂಜುನಾಥ ಹತ್ತಿ, ಸಂತೋ?À ನಾಯಕ, ಶಂಕರ ಕಮ್ಮಾರ, ಪ್ರಭಾರಿ ಮುಖ್ಯಾಧ್ಯಾಪಕ ಪ್ರಶಾಂತ ಪಾರಿಧಿ, ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು. ಮಂಜುನಾಥ ಅಂಬಡಗಟ್ಟಿ ನಿರೂಪಿಸಿದರು. ಎಸ್.ವಿ.ಕಲ್ಮಠ ವಂದಿಸಿದರು.