Home ಜಿಲ್ಲೆ ಮಕ್ಕಳ ಸುರಕ್ಷತೆ, ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ

ಮಕ್ಕಳ ಸುರಕ್ಷತೆ, ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ

ಗದಗ,ನ೨೩: ಗದಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗದಗ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ “ಸುರಕ್ಷಿತ ಬಚ್ಚಪನ ಅಭಿಯಾನ ಹಂತ II” ಅಡಿಯಲ್ಲಿ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮವನ್ನು ಗದಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಎಡಿಆರ್ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ನಾಗವೇಣಿ ಅವರು ಉದ್ಘಾಟಿಸಿ, ಮಕ್ಕಳ ಸುರಕ್ಷತೆ ಹಾಗೂ ರಕ್ಷಣೆಯ ಕುರಿತು ಶಿಕ್ಷಕರಿಗೆ ವಿವರವಾದ ಮಾರ್ಗದರ್ಶನ ನೀಡಿದರು. ಮಕ್ಕಳಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್ ನಡುವಿನ ವ್ಯತ್ಯಾಸವನ್ನು ತಿಳಿಸುವುದು, ಅಪರಿಚಿತರು ಹಾಗೂ ಪರಿಚಿತರಿಂದ ಎದುರಾಗಬಹುದಾದ ಅಪಾಯಗಳ ಕುರಿತು ಜಾಗೃತಿ ಮೂಡಿಸುವುದು, ಮಕ್ಕಳಿಗೆ ತಮ್ಮ ದೇಹದ ಸುರಕ್ಷತೆ ಮತ್ತು ವೈಯಕ್ತಿಕ ಮಿತಿಗಳ ಬಗ್ಗೆ ತಿಳಿಸಿಕೊಡುವುದು ಅತ್ಯಂತ ಅಗತ್ಯವೆಂದು ಹೇಳಿದರು. ಅಲ್ಲದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಪಿಒಸಿಎಸ್‌ಒ ಕಾಯ್ದೆ ಕುರಿತು ಮತ್ತು ಮಕ್ಕಳಿಗೆ ತೊಂದರೆಯಾದ ಸಂದರ್ಭದಲ್ಲಿ ಶಿಕ್ಷಕರು ವಹಿಸಬೇಕಾದ ಜವಾಬ್ದಾರಿ, ಹಾಗೂ ಮಕ್ಕಳಿಗೆ ಭಯವಿಲ್ಲದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ವಿಶ್ವಾಸದ ವಾತಾವರಣ ಕಲ್ಪಿಸುವ ಕುರಿತು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ಎಂ.ಎ. ಸಂಗನಾಳ ಅವರು ವಹಿಸಿ ಮಕ್ಕಳ ಸುರಕ್ಷತೆ ಹಾಗೂ ಕಾರ್ಯಕ್ರಮದ ವಿ?Àಯದ ಕುರಿತು ಮಾತನಾಡಿ, ಇಂದಿನ ಮಕ್ಕಳೆ ಇಂದಿನ ನಾಗರಿಕರು, ಮಕ್ಕಳನ್ನು ಈ ದೇಶದ ಭವ್ಯ ನಾಗರಿಕರನ್ನಾಗಿ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ, ಮಕ್ಕಳ ರಕ್ಷಣೆಯಲ್ಲಿ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಇದೆ ಎಂದು ಮಾತನಾಡಿದರು.

ಗದಗ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ಡಿ.ಬಡಿಗೇರ ಅವರು ಮಾತನಾಡಿ, ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಶಿಕ್ಷಕರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಮಕ್ಕಳ ಮೇಲೆ ನಡೆಯುವ ದೌರ್ಜನ್ಯ, ಕಿರುಕುಳ ಹಾಗೂ ಅವರ ಸುರಕ್ಷತೆಗೆ ಧಕ್ಕೆ ಉಂಟುಮಾಡುವ ಘಟನೆಗಳನ್ನು ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಮಕ್ಕಳಲ್ಲಿ ಸುರಕ್ಷತೆಯ ಅರಿವು ಮೂಡಿಸುವುದರ ಜೊತೆಗೆ, ಯಾವುದೇ ಸಮಸ್ಯೆ ಅಥವಾ ದೌರ್ಜನ್ಯಕ್ಕೆ ಒಳಗಾದ ಮಕ್ಕಳು ಮುಕ್ತವಾಗಿ ಶಿಕ್ಷಕರೊಂದಿಗೆ ಹಂಚಿಕೊಳ್ಳುವAತಹ ಸ್ನೇಹಪರ ವಾತಾವರಣವನ್ನು ಶಾಲೆಗಳಲ್ಲಿ ನಿರ್ಮಿಸಬೇಕು. ಮಕ್ಕಳ ರಕ್ಷಣೆಗೆ ಸಂಬAಧಿಸಿದ ಕಾನೂನುಗಳು ಹಾಗೂ ಇಲಾಖೆಯ ಮಾರ್ಗಸೂಚಿಗಳನ್ನು ಶಿಕ್ಷಕರು ತಿಳಿದುಕೊಂಡು, ಮಕ್ಕಳ ಹಿತಾಸಕ್ತಿ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಸಿ.ಎಸ್. ಶಿವನಗೌಡ್ರ ಅವರು ಮಾತನಾಡಿ, ಗೌ. ಸರ್ವೊಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಪೋಕ್ಸೋ ಕಾಯ್ದೆ, ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ ಕುರಿತು ಈಗಾಗಲೇ ಗದಗ ಜಿಲ್ಲಾಯಾದ್ಯಂತ ೧೮೯ ಶಾಲೆಗಳಲ್ಲಿ ಅರಿವು ಮೂಡಿಸಿದ್ದು, ಸದರಿ ಪ್ರತಿ ಶಾಲೆಗಳಿಂದ ಇಬ್ಬರು ಶಿಕ್ಷಕರನ್ನು ಈ ತರಬೇತಿ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿ ಅರಿವು ಮೂಡಿಸಲು ಈ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರ ಸದುಪಯೋಗವನ್ನು ಶಿಕ್ಷಕರು ಪಡೆದುಕೊಂಡು ಮಕ್ಕಳಿಗೆ ಈ ಕಾನೂನುಗಳ ಬಗ್ಗೆ ತಿಳಿ ಹೇಳಬೇಕು ಎಂದು ನುಡಿದರು ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಉದ್ದೇಶ ಹಾಗೂ ಸಾರ್ವಜನಿಕರಿಗೆ ಉಚಿತ ಕಾನೂನು ನೆರವು ಒದಗಿಸುವ ಕಾರ್ಯವಿಧಾನದ ಕುರಿತು ವಿವರಿಸಿದರು.

ಉಪ ಪೊಲೀಸ್ ಅಧೀಕ್ಷಕರಾದ ಮಹಾಂತೇಶ ಸಜ್ಜನ ಅವರು ಪೊಲೀಸ್ ಇಲಾಖೆಯ ವತಿಯಿಂದ ಮಕ್ಕಳ ರಕ್ಷಣೆ, ಮಕ್ಕಳ ಮೇಲಿನ ಅಪರಾಧಗಳ ತಡೆ ಹಾಗೂ ಇಂಟರನೆಟ್ ಬಳಕೆ, ಎ.ಐ, ಸೈಬರ್ ಕ್ರೈಮ್ ಬಗ್ಗೆ ಹಾಗೂ ಮೊಬೈಲ್ ಸೆಫಟಿ ಮೇಜರ್ ಬಗ್ಗೆ ಅರಿವು ಮೂಡಿಸಿ ಜೊತೆಗೆ ಮಕ್ಕಳ ಸುರಕ್ಷತೆಗೆ ಸಂಬAಧಿಸಿದ ಕಾನೂನು ಕ್ರಮಗಳ ಕುರಿತು ಮಾಹಿತಿ ನೀಡಿದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಕಿರುಕುಳ ಹಾಗೂ ಇತರ ಅಪರಾಧಗಳನ್ನು ಗುರುತಿಸುವುದು, ಇಂತಹ ಪ್ರಕರಣಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಪೊಲೀಸರಿಗೆ ಮಾಹಿತಿ ನೀಡುವ ವಿಧಾನ ಹಾಗೂ ಮಕ್ಕಳೊಂದಿಗೆ ಸಂವೇದನಾಶೀಲವಾಗಿ ವರ್ತಿಸುವ ಅಗತ್ಯತೆಯ ಕುರಿತು ಮಾತನಾಡಿದರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಜಯದೇವಿ ಕವಲೂರ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಕ್ಕಳ ರಕ್ಷಣೆ, ಮಕ್ಕಳ ಹಕ್ಕುಗಳು, ಮಕ್ಕಳ ಕಲ್ಯಾಣ ಸಮಿತಿ ಕಾರ್ಯವ್ಯಾಪ್ತಿ, ಬಾಲ ನ್ಯಾಯ ಮಂಡಳಿ, ಬಾಲ ನ್ಯಾಯ ಕಾಯ್ದೆ, ದತ್ತು ಪ್ರಕ್ರಿಯೆ ಕುರಿತು ಮಾತನಾಡಿ ೧೦೯೮ ಮಕ್ಕಳ ಸಹಾಯವಾಣ’ ಜೊತೆಗೆ ೧೫೧೦೦ ಉಚಿತ ಕಾನೂನು ನೆರವು ಸಹಾಯವಾಣ’, ೧೧೨ ಪೊಲೀಸ್ ಸಹಾಯವಾಣ’ ಬಗ್ಗೆ ಎಲ್ಲಾ ಶಾಲೆಗಳಲ್ಲಿ ಪ್ರಚುರಪಡಿಸಬೇಕು. ಮಕ್ಕಳೊಂದಿಗೆ ಸಂವಹನ ನಡೆಸುವ ವಿಧಾನ ಹಾಗೂ ಮಕ್ಕಳಲ್ಲಿ ಆತ್ಮವಿಶ್ವಾಸ ಮತ್ತು ಸುರಕ್ಷತಾ ಅರಿವು ಮೂಡಿಸುವ ಕುರಿತು ಶಿಕ್ಷಕರಿಗೆ ಉಪಯುಕ್ತ ಮಾಹಿತಿ ನೀಡಿದರು. ಮಕ್ಕಳ ಸಮಸ್ಯೆಗಳನ್ನು ಆಲಿಸುವುದು, ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಮಕ್ಕಳಿಗೆ ಸುರಕ್ಷಿತ ಮತ್ತು ಸ್ನೇಹಪರ ವಾತಾವರಣ ಕಲ್ಪಿಸುವ ಕುರಿತು ವಿವರಿಸಿದರು.
ಮುಖ್ಯ ಕಾನೂನು ನೆರವು ಅಭಿರಕ್ಷಕರಾದ ಎಸ್.ವಿ. ಗ್ರಾಮಪುರೋಹಿತ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಬಸವರಾಜ ಕುಕನೂರ ರವರು ನಿರ್ವಹಿಸಿದರು. ಸಹಾಯಕ ಕಾನೂನು ನೆರವು ಅಭಿರಕ್ಷಕರಾದ ಗುರುರಾಜ ಗೌರಿ ಅವರು ಸರ್ವರನ್ನು ಸ್ವಾಗತಿಸಿ ವಂದಿಸಿದರು.