Home ಜಿಲ್ಲೆ ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಣ ಇಲಾಖೆ ಕಾರ್ಯ ಮಹತ್ವದ್ದು : ಸಚಿವ ಈಶ್ವರ ಖಂಡ್ರೆ

ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಣ ಇಲಾಖೆ ಕಾರ್ಯ ಮಹತ್ವದ್ದು : ಸಚಿವ ಈಶ್ವರ ಖಂಡ್ರೆ

ಭಾಲ್ಕಿ:ಜೂ.೨೭: ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಣ ಇಲಾಖೆಯ ಕಾರ್ಯ ಮಹತ್ವದ್ದಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ ರಾಜ್ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಸಚಿವರ ನಿವಾಸ ಕಚೇರಿಯಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಣಮಂತ ಕಾರಾಮುಂಗೆ ನೇತೃತ್ವದಲ್ಲಿ ನೀಡಲಾದ ಮನವಿ ಪತ್ರ ಸ್ವೀಕರಿಸಿ ಅವರು ಮಾತನಾಡಿದರು. ರಾಜ್ಯದ ಶೈಕ್ಷಣಿಕ ಬೆಳವಣಿಗೆಗೆ ಶಿಕ್ಷಣ ಇಲಾಖೆ ಮಹತ್ವದ ಕಾರ್ಯನಿರ್ವಹಿಸುತ್ತಲಿದೆ. ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಲಿರುವ ನೌಕರರು ಮತ್ತು ಶಿಕ್ಷಕರು ಸದಾ ಮಕ್ಕಳ ಏಳ್ಗೆಗಾಗಿ ದುಡಿಯುವ ಕಾರ್ಯಮಾಡಬೇಕು ಎಂದರು. ತಾಲೂಕು ಮಟ್ಟದಲ್ಲಿ ಗುರುಭವನ ನಿರ್ಮಾಣಕ್ಕಾಗಿ ಶಿಕ್ಷಣ ಇಲಾಖೆ ನೌಕರರು ಮನವಿ ಸಲ್ಲಿಸಿದ್ದು, ಆದಷ್ಟು ಬೇಗ ಗುರುಭವನ ನಿರ್ಮಾಣ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು. ಇದೇವೇಳೆ ಸಚಿವರು ಮೂರನೆ ಸಲ ರಾಜ್ಯದಲ್ಲಿ ಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಾರಣ ಶಾಲಾ ಶಿಕ್ಷಣ ಇಲಾಖೆಯ ನೌಕರರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಣಮಂತ ಕಾರಾಮುಂಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಪತ್ರಾಂಕಿತ ವ್ಯವಸ್ಥಾಪಕ ಶಿವಕುಮಾರ ಫುಲಾರಿ, ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ದೇವಿದಾಸ ಮೇತ್ರೆ, ಉಪಾಧ್ಯಕ್ಷ ಪರಮೇಶ್ವರ ಕರಡ್ಯಾಳೆ, ರತ್ನಮ್ಮಾ ಹಾಲಕೂಡೆ, ಸಂಘದ ಜಿಲ್ಲಾ ಪರಿಷತ್ ಸದಸ್ಯೆ ಮುಕ್ತಾಬಾಯಿ ಎಕಲೂರೆ, ರಮೇಶ ಸಂಗಮೆ, ಆಂತರಿಕಕ ಲೆಕ್ಕ ಪರಿಶೋಧಕ ಮಹೇಶ ಮೇತ್ರೆ, ನಿರ್ದೇಶಕರಾದ ಚಂದ್ರಕಾAತ ತಳವಾಡೆ, ಆನಂದ ಹಳೆಂಬರೆ, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ ಹುಸೇನ ಉಪಸ್ಥಿತರಿದ್ದರು.

ತಾಲೂಕು ಮಟ್ಟದಲ್ಲಿ ಸದ್ಯದಲ್ಲಿ ಎಲ್ಲಾ ಸಮುದಾಯಗಳಿಗೆ ಭವನಗಳನ್ನು ನಿರ್ಮಿಸಿಕೊಡಲಾಗಿದೆ. ಉತ್ತಮವಾದ ಸ್ಥಳಾವಕಾಶವನ್ನು ನೋಡಿಕೊಂಡು ಆದಷ್ಟುಬೇಗ ಗುರುಭವನ ನಿರ್ಮಿಸಿಕೊಡಲಾಗುವುದು. – ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವರು, ಬೀದರ.