Home ಜಿಲ್ಲೆ ಕಲಬುರಗಿ ಯುವಕರು ವಿಶ್ವದ ಭವಿಷ್ಯ, ಯುವಶಕ್ತಿ ಸದುಪಯೋಗವಾಗಲಿ

ಯುವಕರು ವಿಶ್ವದ ಭವಿಷ್ಯ, ಯುವಶಕ್ತಿ ಸದುಪಯೋಗವಾಗಲಿ

ಕಲಬುರಗಿ : ಯಾವುದೇ ಒಂದು ರಾಷ್ಟ್ರದ ಅಭಿವೃದ್ದಿಯಲ್ಲಿ ಅಲ್ಲಿನ ಯುವಕರ ಪಾತ್ರ ಮಹತ್ತರವಾಗಿದೆ. ಯುವಶಕ್ತಿ ಸದುಪಯೋಗ ಮಾಡಿಕೊಂಡು, ಅದನ್ನು ದೇಶದ ಪ್ರಗತಿಗೆ ಬಳಸಿಕೊಳ್ಳಬೇಕು. ಯುವಕರು ವಿಶ್ವದ ಭವಿಷ್ಯವಾಗಿದ್ದಾರೆ ಎಂದು ಉಪನ್ಯಾಸಕ ಹಾಗೂ ಸಮಾಜ ಸೇವಕ ಎಚ್.ಬಿ.ಪಾಟೀಲ್ ಹೇಳಿದರು.
ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಏರ್ಪಡಿಸಿದ್ದ ‘ಅಂತಾರಾಷ್ಟ್ರೀಯ ಯುವ ದಿನಾಚರಣೆ’ಯಲ್ಲಿ ಅವರು ಮಾತನಾಡುತ್ತಿದ್ದರು.
ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಎಷ್ಟು ಮುಖ್ಯ ಎಂಬುದನ್ನು ಸಾರಲು ಈ ದಿನಾಚರಣೆ ಪೂರಕವಾಗಿದೆ. ಯುವಕರನ್ನು ಒಗ್ಗೂಡಿಸುವುದು ಮತ್ತು ಸಾಮಾಜಿಕ, ಆರ್ಥಿಕ ಮತ್ತು ಎಲ್ಲಾ ರೀತಿಯ ಅಭಿವೃದ್ಧಿಯಲ್ಲಿ ಅವರು ಕೊಡುಗೆಯನ್ನು ಗುರುತಿಸುವುದು ಮತ್ತು ಎಲ್ಲಾ ಕ್ಷೇತ್ರದಲ್ಲೂ ಅವರ ಭಾಗವಹಿಸುವಿಕೆಯನ್ನು ಉತ್ತೇಜಿಸಿ, ಪೆÇ್ರೀತ್ಸಾಹಿಸಿದರೆ, ಯುವಜರು ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಉದ್ಘಾಟಿಸಿ ಮಾತನಾಡಿದ ಯುವ ಸಮಾಜ ಸೇವಕ ನಾಗೇಶ್ ಪೂಜಾರಿ, ಪ್ರಪಂಚದಾದ್ಯಂತ ಯುವಕರು ಎದುರಿಸುತ್ತಿರುವ ಸವಾಲುಗಳನ್ನು ಗುರುತಿಸುವುದು ಮತ್ತು ಅವುಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುಬೇಕು. ಯುವಕರನ್ನು ಸಬಲೀಕರಣಗೊಳಿಸಬೇಕು. ದೇಶದ ಜನಸಂಖ್ಯೆಯಲ್ಲಿ ಬಹುಪಾಲು ಯುವಕರಿದ್ದರೆ, ಆ ದೇಶದ ಅಭಿವೃದ್ಧಿ ಅತ್ಯಂತ ವೇಗವಾಗಿ ಸಾಗುತ್ತದೆ. ನಮ್ಮ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯುವ ಹೋರಾಟಗಾರರ ಪಾತ್ರ ಅವಿಸ್ಮರಣೀಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಡಾ.ರಾಜಶೇಖರ ಪಾಟೀಲ್, ಶಿವಯೋಗೆಪ್ಪ ಎಸ್.ಬಿರಾದಾರ, ದಿನೇಶ್ ಮಿಶ್ರಾ, ಭೀಮಾಶಂಕರ ಸೇರಿದಂತೆ ಇನ್ನಿತರರಿದ್ದರು.