Home ಮುಖಪುಟ ಸುದ್ದಿ ಯುಪಿಐ ಬಳಕೆದಾರರಿಗೆ ಯಾವುದೇ ಶುಲ್ಕವಿಲ್ಲ ; ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟನೆ

ಯುಪಿಐ ಬಳಕೆದಾರರಿಗೆ ಯಾವುದೇ ಶುಲ್ಕವಿಲ್ಲ ; ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟನೆ

ಹೊಸದೆಹಲಿ.ಆ೮: ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ಮೂಲಕ ವಹಿವಾಟು ನಡೆಸುವ ಗ್ರಾಹಕರಿಗೆ ಯಾವುದೇ ಹೆಚ್ಚುವರಿ ಶುಲ್ಕವನ್ನು ವಿಧಿಸಲಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ೨,೦೦೦ ಕ್ಕಿಂತ ಹೆಚ್ಚಿನ ಯುಪಿಐ ವಹಿವಾಟುಗಳಿಗೆ ಶುಲ್ಕ ವಿಧಿಸಲಾಗುತ್ತದೆ ಎಂಬ ವದಂತಿಗಳು ಹರಡಿದ ಬೆನ್ನಲ್ಲೇ ಸರ್ಕಾರ ಈ ಕುರಿತು ಸ್ಪಷ್ಟನೆ ನೀಡಿದೆ.

ಸಣ್ಣ ವ್ಯಾಪಾರಿಗಳು ಮತ್ತು ಸಾಮಾನ್ಯ ಬಳಕೆದಾರರಿಗೆ ಯುಪಿಐ ಸೇವೆ ಸಂಪೂರ್ಣವಾಗಿ ಉಚಿತವಾಗಿರಲಿದೆ. ವ್ಯಕ್ತಿಯಿಂದ ನಡೆಯುವ ಎಲ್ಲಾ ವಹಿವಾಟುಗಳಿಗೂ ಯಾವುದೇ ಶುಲ್ಕ ಇರುವುದಿಲ್ಲ.

ಯುಪಿಐ ಮೂಲಕ ಪಾವತಿ ಮಾಡುವ ಗ್ರಾಹಕರಿಂದ ಯಾವುದೇ ರೀತಿಯ ಟ್ರಾನ್ಸಾಕ್ಷನ್ ಶುಲ್ಕವನ್ನು ವಸೂಲಿ ಮಾಡುವುದಿಲ್ಲ. ಸಣ್ಣ ಪ್ರಮಾಣದ ವ್ಯಾಪಾರಸ್ಥರಿಗೆ ಯುಪಿಐ ಪಾವತಿಗಳು ಉಚಿತವಾಗಿಯೇ ಮುಂದುವರಿಯಲಿವೆ.


ಕೇವಲ ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ವಹಿವಾಟು ನಡೆಸುವ ಆಯ್ದ ದೊಡ್ಡ ವ್ಯಾಪಾರಿಗಳಿಗೆ ಮಾತ್ರ ನಾಮಮಾತ್ರದ ಮರ್ಚೆಂಟ್ ಡಿಸ್ಕೌಂಟ್ ರೇಟ್ ಅನ್ವಯವಾಗಬಹುದು. ಇದು ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್‌ಗಳ ಎಂಡಿಆರ್ ದರಕ್ಕಿಂತ ಗಣನೀಯವಾಗಿ ಕಡಿಮೆಯಿರಲಿದೆ.


ಸಂಸತ್ತಿನಲ್ಲಿ ಹೊಸ ಮಸೂದೆಗೆ ಅನುಮೋದನೆ ದೊರೆತ ನಂತರ, ಉದ್ಯಮದ ನಿರ್ದಿಷ್ಟ ವಹಿವಾಟುಗಳಿಗೆ ಎಂಡಿಆರ್ ವಿಧಿಸಬೇಕೇ ಅಥವಾ ಬೇಡವೇ ಎಂಬುದನ್ನು ಎನ್‌ಪಿಸಿಐ ನೇತೃತ್ವದ ಸಮಿತಿ ತೀರ್ಮಾನಿಸಲಿದೆ.ಇದರಿಂದಾಗಿ ದೈನಂದಿನ ಯುಪಿಐ ವಹಿವಾಟು ನಡೆಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಹಾಗೂ ಸಣ್ಣ ವ್ಯಾಪಾರಿಗಳಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.