Home ಜಿಲ್ಲೆ ತಂತ್ರಜ್ಞಾನವಿಲ್ಲದೆ ಭವಿಷ್ಯವಿಲ್ಲ :ಡಾ. ಬಿ.ಎಸ್. ಬಿರಾದರ

ತಂತ್ರಜ್ಞಾನವಿಲ್ಲದೆ ಭವಿಷ್ಯವಿಲ್ಲ :ಡಾ. ಬಿ.ಎಸ್. ಬಿರಾದರ

ಬೀದರ:ಮೇ.21:ಇಂದಿನ ಜಗತ್ತಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ತಂತ್ರಜ್ಞಾನ ಅತ್ಯಂತ ಪ್ರಮುಖವಾದ ಪಾತ್ರವಹಿಸುತ್ತಿದೆ “ತಂತ್ರಜ್ಞಾನವಿಲ್ಲದೆ ಭವಿಷ್ಯವಿಲ್ಲ” ಎಂಬುದು ಇಂದಿನ ಕಾಲಘಟ್ಟದ ಸತ್ಯವಾಗಿದ್ದು, ಹೊಸ ತಂತ್ರಜ್ಞಾನಗಳ ಅಭಿವೃದ್ಧಿಗೆ ಹೆಚ್ಚಿನ ಹೂಡಿಕೆ ಅಗತ್ಯವಾಗಿದೆ. ಆದರೆ ಅದರ ಲಾಭ-ನಷ್ಟಗಳ ಬಗ್ಗೆ ಸಮಾಜ ಜಾಗೃತಿಯಾಗಬೇಕೆಂದ ಎಂದು ಬೀದರ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಬಿ.ಎಸ್. ಬಿರಾದಾರ ಎಂದರು.

ಅವರು ನಗರದ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಬೀದರದ ವಾಣಿಜ್ಯ ವಿಭಾಗದ ವತಿಯಿಂದ “ವಿಕಸಿತ ಭಾರತ @ 2047 ಕನಸಿನ ಸಾಕಾರಕ್ಕಾಗಿ ವಾಣಿಜ್ಯ ಮತ್ತು ನಿರ್ವಹಣೆಯಲ್ಲಿ ಇತ್ತೀಚಿನ ಪ್ರವೃತ್ತಿಗಳು ಹಾಗೂ ನವೀನತೆಗಳು”ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರಮಟ್ಟದ ಸಮ್ಮೇಳನವು ಮಹಾವಿದ್ಯಾಲಯದ ಸಭಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ತಂತ್ರಜ್ಞಾನದಿಂದಾಗುವ ಅನಾಹುತಗಳಿಗೆ ಯಾರು ಹೊಣೆಗಾರರು ಎಂಬ ಪ್ರಶ್ನೆ ಇಂದಿನ ಸಮಾಜದ ಮುಂದೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಅಭಿಪ್ರಾಯಪಟ್ಟ ಅವರು, ಇತ್ತೀಚಿನ ದಿನಗಳಲ್ಲಿ ಪ್ರಾಧ್ಯಾಪಕರು ಹಾಗೂ ಸಂಶೋಧಕರು ತಂತ್ರಜ್ಞಾನದ ನೆರವಿನಿಂದ ಅನೇಕ ಲೇಖನಗಳನ್ನು ಪ್ರಕಟಿಸುತ್ತಿದ್ದರೂ, ಸ್ವಂತ ಚಿಂತನೆ ಮತ್ತು ಬೌದ್ಧಿಕ ಸಾಮಥ್ರ್ಯವನ್ನು ಬೆಳೆಸಿಕೊಳ್ಳುವುದು ಅಗತ್ಯವೆಂದು ಹೇಳಿದರು. ಸ್ವಂತ ಸಂಶೋಧನೆ ಹಾಗೂ ಆವಿಷ್ಕ್ಕಾರಗಳ ಮೂಲಕ ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಕರೆ ನೀಡಿದರು.

ಆಧುನಿಕ ಯುಗಕ್ಕೆ ತಕ್ಕಂತೆ ತರಗತಿ ಬೋಧನೆ ಹಾಗೂ ಪ್ರಾಯೋಗಿಕ ಅಧ್ಯಯನವನ್ನು ವಾಣಿಜ್ಯ ಶಿಕ್ಷಣದಲ್ಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದ ಅವರು, ವಿದ್ಯಾರ್ಥಿಗಳು ತಮ್ಮ ಪಾಲಕರ ಕನಸುಗಳನ್ನು ನನಸಾಗಿಸುವ ದಿಕ್ಕಿನಲ್ಲಿ ಶ್ರಮಿಸಬೇಕೆಂದು ಪ್ರೇರೇಪಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಲಘು ಉದ್ಯೋಗ ಭಾರತಿ, ಬೀದರ ಘಟಕದ ಅಧ್ಯಕ್ಷರಾದ ಶ್ರೀ ಸಚ್ಚಿದಾನಂದ ಚಿದ್ರಿ ಅವರು, ದೇಶದ ಜನಸಂಖ್ಯೆಗೆ ಅನುಗುಣವಾಗಿ ಕೈಗಾರಿಕೆಗಳು ಹಾಗೂ ತಂತ್ರಜ್ಞಾನ ಅಭಿವೃದ್ಧಿಯಾಗಬೇಕಿದೆ ಎಂದು ಅಭಿಪ್ರಾಯಪಟ್ಟರು. ಕೈಗಾರಿಕೆ ಮತ್ತು ಶಿಕ್ಷಣ ಪರಸ್ಪರ ಪೂರಕವಾಗಿದ್ದು, ಯುವಜನತೆ ಉದ್ಯಮಶೀಲತೆಯತ್ತ ಮುಖ ಮಾಡಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಸವರಾಜ ಜಾಬಶೆಟ್ಟಿ ಅವರು, ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸಿದ ನಂತರ ಉದ್ಯೋಗಕ್ಕಾಗಿ ಅಲೆದಾಡುವವರಾಗದೆ, ಸ್ವಂತ ಉದ್ಯೋಗ ಸೃಷ್ಟಿಸಿ ಇತರರಿಗೆ ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆಯಬೇಕು ಎಂದು ಕರೆ ನೀಡಿದರು. ಆತ್ಮನಿರ್ಭರತೆ ಮತ್ತು ಉದ್ಯಮಶೀಲತೆಯ ಮನೋಭಾವವೇ ದೇಶದ ಅಭಿವೃದ್ಧಿಗೆ ಬುನಾದಿಯಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಉಸ್ಮಾನಿಯಾ ವಿಶ್ವವಿದ್ಯಾಲಯದ ಹಿರಿಯ ವಾಣಿಜ್ಯ ಪ್ರಾಧ್ಯಾಪಕರಾದ ಡಾ. ಡಿ. ಚೆನ್ನಪ್ಪ ತಮ್ಮ ಅಮುಲ್ಯವಾದ ಉಪನ್ಯಾಸ ನೀಡಿದರು, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಸತೀಶ ಪಾಟೀಲ, ಜಂಟಿ ಕಾರ್ಯದರ್ಶಿಗಳಾದ ಶ್ರೀ ಶಿವಾನಂದ ಗಾದಗಿ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ವೀರಭದ್ರಪ್ಪಾ ಬುಯ್ಯ, ಶ್ರೀ ರವಿ ಹಾಲಹಳ್ಳಿ, ಶ್ರೀ ಕಮಲಾಪುರ ಸಿದ್ದರಾಜ ಪಾಟೀಲ, ಡಾ. ಧುಳಪ್ಪ ಪಾಟೀಲ ಸೇರಿದಂತೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ವಿವಿಧ ಕಾಲೇಜುಗಳ ಪ್ರಾಚಾರ್ಯರು, ಸಂಶೋಧಕರು ಹಾಗೂ 200 ಕ್ಕಿಂತ ಹೆಚ್ಚಿನ ಪ್ರತಿನಿಧಿಗಳು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ಸೋಮನಾಥ ಬಿರಾದಾರ, ಎಲ್ಲರನ್ನ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರು ಹಾಗೂ ಸಮ್ಮೇಳನದ ರುವಾರಿಗಳಾದ ಡಾ. ಶಶಿಧರ ಪಾಟೀಲ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದು. ಸ್ವಾತಿ ಅಡ್ಡೆ ವಾಣಿಜ್ಯ ವಿಭಾಗದ ಪ್ರಾಧ್ಯಪಕರು ವಂದಿಸಿದರು, ಐಕ್ಯೂಎಸಿ ಸಂಯೋಜಕರಾದ ಡಾ. ಸೋಮೇಶ್ವರಿ ಮುದ್ದಾ, ಪ್ರಾಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.