
ವಿಜಯಪುರ, ಏ. 10: ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ಅನುದಾನದ ಕೊರತೆಯಿಲ್ಲ. ಅದರಂತೆ,ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಲ್ಬಣಿಸಬಹುದಾದ 11 ತಾಲೂಕುಗಳ 38 ಗ್ರಾಮ ಪಂಚಾಯತಿ ವ್ಯಾಪ್ತಿಯ 65 ಗ್ರಾಮಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ನೀರಿನ ಯಾವುದೇ ಸಮಸ್ಯೆ ಉಂಟಾಗದಂತೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಆಲಮಟ್ಟಿ ಜಲಾಶಯದಲ್ಲಿ ಕಳೆದ ವರ್ಷ ಇದೇ ದಿನಾಂಕದಂದು 29.712 ಟಿಎಂಸಿ ನೀರಿತ್ತು. ಪ್ರಸ್ತುತ 34.895 ಟಿಎಂಸಿ ಅಂದರೆ ಅಂದಾಜು 5.183 ಟಿಎಂಸಿ ನೀರು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ ತಿಳಿಸಿದರು.
ನಾರಾಯಣಪುರ ಜಲಾಶಯದಲ್ಲಿ ಕಳೆದ ವರ್ಷ 19.595 ಟಿಎಂಸಿ, ಪ್ರಸ್ತುತ 21.269 ಟಿಎಂಸಿ ಅಂದರೆ ಅಂದಾಜು 1.674 ಟಿಎಂಸಿ ನೀರು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ ಎಂದು ಹೇಳಿದರು.
ಜಿಲ್ಲೆಯ ಬೇಡಿಕೆಯಂತೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು, ಇಂಡಿ ತಾಲೂಕಿನ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಲುವಾಗಿ ಇಂಡಿ ಶಾಖಾ ಕಾಲುವೆಯಿಂದ 1.00 ಟಿಎಂಸಿ ನೀರನ್ನು ಏ. 11 ರಿಂದ ಏ. 23 ರವರೆಗೆ (12 ದಿನಗಳು) ನಿತ್ಯ ಒಂದು ಸಾವಿರ ಕ್ಯೂಸೆಕ್ ನಂತೆ ಹರಿಸಲು ಆದೇಶಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 160 ಕೆರೆಗಳಿದ್ದು, ಅವುಗಳಲ್ಲಿ 66 ಕೆರೆಗಳು ಶೇ. 30 ರಷ್ಟು , 43 ಕೆರೆಗಳು ಶೇ. 31 ರಿಂದ 50 ರವರೆಗೆ ಹಾಗೂ 51 ಕೆರೆಗಳು ಶೇ. 51 ರಿಂದ 99 ರವರೆಗೆ ಭರ್ತಿಯಾಗಿವೆ ಎಂದರು.
ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ 40 ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳಿದ್ದು , ಆಲಮಟ್ಟಿ ಜಲಾಶಯದ ಮೇಲೆ 10, ನಾರಾಯಣಪುರ ಜಲಾಶಯದ ಮೇಲೆ 8, ಭೀಮಾ ನದಿ ಮೂಲಕ 5 ಹಾಗೂ ಕಾಲುವೆ ಮುಖಾಂತರ 17 ಬಹು ಹಳ್ಳಿ ಕುಡಿಯುವ ನೀರಿನ ಯೋಜನೆ (ಎಂವಿಎಸ್) ಗಳು ಅವಲಂಬಿತವಾಗಿರುತ್ತವೆ. ಈ ಯೋಜನೆಗಳಡಿ ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದರು.
ಜಿಲ್ಲೆಯ ನಗರ ಪ್ರದೇಶಗಳಿಗೆ ಸರಬರಾಜು ಮಾಡುತ್ತಿರುವ ನೀರಿನ ಮೂಲಗಳಲ್ಲಿ ಪ್ರಸ್ತುತ ಸಾಕಷ್ಟು ನೀರು ಲಭ್ಯವಿರುತ್ತದೆ. ಹಾಗಾಗಿ ಎಲ್ಲಿಯೂ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳನ್ನು, ತಾಲ್ಲೂಕು ಮಟ್ಟದಲ್ಲಿ ಕಾರ್ಯ ಪಡೆ
(ಟಾಸ್ಕ್ ಫೆÇೀರ್ಸ್) ಸಭೆಗಳನ್ನು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮ ಪಂಚಾಯತಿ ವಿಪತ್ತು ನಿರ್ವಹಣಾ ಸಮಿತಿ ಸಭೆಗಳನ್ನು ಜರುಗಿಸಿ ಕುಡಿಯುವ ನೀರಿನ ಯಾವುದೇ ಸಮಸ್ಯೆಯಾಗದಂತೆ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಸಾರ್ವಜನಿಕರು ಕುಡಿಯುವ ನೀರಿನ ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಮಟ್ಟದಲ್ಲಿ ಸ್ಥಾಪಿತ ಉಚಿತ ಸಹಾಯವಾಣಿ ಸಂಖ್ಯೆ 1077 ಕ್ಕೆ ಮಾಹಿತಿ ನೀಡಬಹುದಾಗಿದೆ ಎಂದು ನುಡಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಯಾವುದೇ ನೀರಿನ ಸಮಸ್ಯೆ ಇಲ್ಲ ಎಂದರು.
ಜನಗಣತಿ
ಗಣತಿದಾರರು ಮತ್ತು ಮೇಲ್ವಿಚಾರಕರು ಸರಿಯಾದ ರೀತಿಯಲ್ಲಿ ತರಬೇತಿ ಪಡೆದುಕೊಂಡು ಗಣತಿ ಕಾರ್ಯವನ್ನು ಯಶಸ್ವಿಗೊಳಿಸಬೇಕು. ಜೊತೆಗೆ ಸಾರ್ವಜನಿಕರೂ ಜನ ಗಣತಿ ಕಾರ್ಯದ ಯಶಸ್ಸಿಗೆ ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ.ಅವರು ಹೇಳಿದರು.
ಜನಗಣತಿಯು ದೇಶದ ಜನಸಂಖ್ಯೆಯ ಗಣತಿಯ ಜೊತೆಗೆ, ದೇಶದ ಸಾಮಾಜಿಕ, ಆರ್ಥಿಕ ಸ್ಥಿತಿಗಳು ಮತ್ತು ಸಾಂಸ್ಕøತಿಕ ವೈವಿಧ್ಯತೆಯನ್ನು ದಾಖಲಿಸುವ ವೈಜ್ಞಾನಿಕ ಪ್ರಕ್ರಿಯೆಯಾಗಿದ್ದು, ಹಾಗಾಗಿ ಜನಗಣತಿ-2027ರ ಮೇಲ್ವಿಚಾರಕರ ಮತ್ತು ಗಣತಿದಾರರಿಗೆ ಹಮ್ಮಿಕೊಳ್ಳಲಾದ ತರಬೇತಿಯನ್ನು ಸರಿಯಾಗಿ ಪಡೆದುಕೊಂಡು, ಗಣತಿ ಕಾರ್ಯಕ್ಕೆ ತೆರಳಿದಾಗ ಸಾರ್ವಜನಿಕರಿಗೆ ಸೂಕ್ತ ತಿಳಿವಳಿಕೆ ನೀಡಿ, ಗಣತಿ ಕಾರ್ಯಕ್ಕೆ ಒಳಪಡಿಸುವ ಮೂಲಕ ಜನಗಣತಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಜಿಲ್ಲೆಯ ಜನತೆ ಜನಗಣತಿಯಿಂದ ಹೊರುಗುಳಿಯಬಾರದು ಎಂದರು.
ಡಿಜಿಟಲ್‍ಗಣತಿ
ಇದೇ ಮೊದಲ ಬಾರಿಗೆ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯಕ್ಕೆ ಈಗಾಗಲೇ ಚಾಲನೆ ಸಿಕ್ಕಿದೆ ಎಂದು ತಿಳಿಸಿದರು.
2 ಹಂತಗಳಲ್ಲಿ ನಡೆಯಲಿರುವ ಗಣತಿ ಕಾರ್ಯವನ್ನು ಸ್ವತಃ ಗಣತಿದಾರರು ವಿಶೇಷ ಕಾಳಜಿ ವಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದರು.
ಈಗಾಗಲೇ ಸ್ವಯಂ ಗಣತಿ ಕಾರ್ಯ ಆರಂಭವಾಗಿದೆ. ಜನಗಣತಿಯ ಸುರಕ್ಷಿತ ವೆಬ್ ಪೆÇೀರ್ಟಲ್: https://se.census.gov.in ಗೆ ಮೊಬೈಲ್ ಸಂಖ್ಯೆ ಮತ್ತು ಒಟಿಪಿ ಬಳಸಿ ಲಾಗಿನ್ ಆಗಿ. ಬಳಿಕ ನಿಮ್ಮ ಸ್ಥಳ ಆಯ್ಕೆ ಮಾಡಿ. ನಕ್ಷೆಯಲ್ಲಿ ನಿಮ್ಮ ಮನೆ ಗುರುತಿಸಿ. ಬಳಿಕ ಮನೆಯ ಇಲ್ಲವೇ ಕುಟುಂಬದ ವಿವರ ಭರ್ತಿ ಮಾಡಿ, ನಿಮ್ಮ Sಇ ಖeಜಿeಡಿeಟಿಛಿe Iಆ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದರು.
ನಿಮ್ಮ Sಇ Iಆ ಅನ್ನು ಸುರಕ್ಷಿತವಾಗಿ ಇಟ್ಟು, ಇಟಿumeಡಿಚಿಣoಡಿ ಮನೆಗೆ ಬಂದಾಗ ಅದನ್ನು ಅವರೊಂದಿಗೆ ಹಂಚಿಕೊಳ್ಳಬೇಕು ಎಂದರು.
ಏ. 16 ರಿಂದ ಮೇ 15 ರವರೆಗಿನ ಅವಧಿಯಲ್ಲಿ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ವಿವರಗಳನ್ನು ಪರಿಶೀಲಿಸಬೇಕು ಎಂದರು.
ಒಂದು ವೇಳೆ ಸಾರ್ವಜನಿಕರು
ಸ್ವಯಂ ಗಣತಿ ಪೂರ್ಣಗೊಳಿಸದಿದ್ದರೆ, ಅಂತವರ ಸ್ವಯಂ ಗಣತಿಯನ್ನು ಗಣತಿದಾರರೇ ಮಾಹಿತಿ ಸಂಗ್ರಹಿಸಿ ಗಣತಿ ಕಾರ್ಯ ಯಶಸ್ವಿಗೊಳಿಸಲಿದ್ದಾರೆ ಎಂದರು.
ಈ ಹಂತದಲ್ಲಿ ಸಾರ್ವಜನಿಕರ ಮಾಹಿತಿಯನ್ನು ಶೇ.100ರಷ್ಟು ಗೌಪ್ಯತೆ ಇದ್ದು, ಸ್ವಯಂ ಗಣತಿಯನ್ನು ಪೂರ್ಣಗೊಳಿಸುವಂತೆ ಗಣತಿದಾರರಿಗೆ ಸೂಚನೆ ನೀಡಲಾಗಿದೆ.
ಆಯಾ ಕುಟುಂಬದ ಮುಖ್ಯಸ್ಥರು ತಮ್ಮ ಕುಟುಂಬದ ಮಾಹಿತಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ, ಅವರಿಗೆ ಒಂದು ವಿಶಿಷ್ಟ ಸ್ವಯಂ-ಗಣತಿ ಐಡಿ (Seಟಜಿ-ಇಟಿumeಡಿಚಿಣioಟಿ Iಆ) ನೀಡಲಾಗುತ್ತದೆ. ಈ ಐಡಿಯನ್ನು ಎಸ್ ಎಂಎಸ್ ಮತ್ತು ಇಮೇಲ್ ಮೂಲಕ ಕಳುಹಿಸಲಾಗುತ್ತದೆ. ಅದನ್ನು ಮನೆಗೆ ಭೇಟಿ ನೀಡುವ ಗಣತಿದಾರರಿಗೆ (ಇಟಿumeಡಿಚಿಣoಡಿ) ಆ ಐಡಿಯನ್ನು ಹಂಚಿಕೊಂಡು ಜನಗಣತಿ ಯಶಸ್ವಿಗೊಳಿಸಬೇಕು ಎಂದರು.
ಒಂದು ವೇಳೆ ಸಾರ್ವಜನಿಕರು ತಮ್ಮ ಸ್ವಯಂ ಗಣತಿ ಪೂರ್ಣಗೊಳಿಸದಿದ್ದರೆ, ಗಣತಿದಾರರೇ ಮಾಹಿತಿ ಸಂಗ್ರಹಿಸಬೇಕು ಎಂದರು.
ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಯುತ್ತಿದ್ದು,ಇದು ಸಂಪೂರ್ಣ ಡಿಜಿಟಲ್ ಪ್ರಥಮ ಜನಗಣತಿಯಾಗಿದೆ. ದಿನಾಂಕ: 01-04-2026 ರಿಂದ 15-4-2026ರವರೆಗೆ ಸ್ವಯಂ ಗಣತಿ ಕಾರ್ಯ ಪ್ರಗತಿಯಲ್ಲಿದೆ. ದಿನಾಂಕ:16-04-2026 ರಿಂದ 16-05-2026 ರವರೆಗೆ ಮನೆ ಪಟ್ಟಿ ಕ್ಷೇತ್ರ ಕಾರ್ಯ ನಡೆಇದೆ. ಎರಡನೇ ಹಂತದಲ್ಲಿ ಫೆಬ್ರವರಿ 2027 ರಿಂದ ಜನಸಂಖ್ಯಾ ಗಣತಿ ಕಾರ್ಯ ನಡೆಯಲಿದೆ ಎಂದು ಹೇಳಿದರು .
ಜನಗಣತಿ ಸಲುವಾಗಿ ಬ್ಲಾಕ್ ರಚಿಸಲಾಗುತ್ತಿದ್ದು, 150 ರಿಂದ 200 ಮನೆಗಳು ಅಥವಾ 700 ರಿಂದ 800 ಜನಸಂಖ್ಯೆಗನುಗುಣವಾಗಿ ಓರ್ವ ಗಣತಿದಾರರನ್ನು ಪ್ರತಿ 6 ಜನ ಗಣತಿದಾರರಿಗೆ ಓರ್ವ ಮೇಲ್ವಿಚಾರಕರನ್ನು ನೇಮಿಸಲಾಗುವುದು. ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲಿ 2846, ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 624 ಹಾಗೂ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 565 ಬ್ಲಾಕ್ ಸೇರಿದಂತೆ ಒಟ್ಟಾರೆ ಜಿಲ್ಲೆಯಲ್ಲಿ 4,035 ಬ್ಲಾಕ್ ಗಳ ರಚನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 4405 ಗಣತಿದಾರರನ್ನು ಹಾಗೂ 767 ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ಹೇಳಿದರು.
ಜನಗಣತಿ ಅಧಿಕಾರಿಯು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಸರಿಯಾದ ಮಾಹಿತಿ ನೀಡುವ ಮೂಲಕ ಸಹಕರಿಸುವಂತೆಯೂ ಹಾಗೂ ಜಿಲ್ಲೆಯಲ್ಲಿ ಭಾರತ ಜನಗಣತಿ 2027 ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.





















