Home ಜಿಲ್ಲೆ ಕಲಬುರಗಿ ಜಿಲ್ಲೆಯಲ್ಲಿ ಪೆಟ್ರೋಲ್-ಡಿಸೇಲ್ ಹಾಗೂ ಎಲ್.ಪಿ.ಜಿ ಸಿಲಿಂಡರ್ ಕೊರತೆಯಿಲ್ಲ:ಸುಳ್ಳು ಸುದ್ಧಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ:ಬಿ. ಫೌಜಿಯಾ...

ಜಿಲ್ಲೆಯಲ್ಲಿ ಪೆಟ್ರೋಲ್-ಡಿಸೇಲ್ ಹಾಗೂ ಎಲ್.ಪಿ.ಜಿ ಸಿಲಿಂಡರ್ ಕೊರತೆಯಿಲ್ಲ:ಸುಳ್ಳು ಸುದ್ಧಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ:ಬಿ. ಫೌಜಿಯಾ ತರನ್ನುಮ್

ಕಲಬುರಗಿ,ಎ.1: ಜಿಲ್ಲೆಯಲ್ಲಿ ಪೆಟ್ರೋಲ್, ಡಿಸೇಲ್ ಮತ್ತು ಎಲ್.ಪಿ.ಜಿ ಸಿಲಿಂಡರ್‍ಗಳ ಯಾವುದೇ ಕೊರತೆ ಇಲ್ಲ. ಎಲ್ಲವು ಸಮರ್ಪಕವಾಗಿ ಪೂರೈಕೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿ ಸಾರ್ವಜನಿಕರು ಕೊವಿಗೊಡಬಾರದು ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಜಿಲ್ಲೆಯಾದ್ಯಂತ ಎಲ್ಲಾ ತೈಲ ಕಂಪನಿ ಬಳಿ ಮತ್ತು ಪೆಟ್ರೋಲ್ ಬಂಕ್‍ಗಳಲ್ಲಿ ಸಾಕಷ್ಟು ಪ್ರಮಾಣದ ಇಂಧನ ದಾಸ್ತಾನು ಲಭ್ಯವಿದೆ. ಪೆಟ್ರೋಲ್ ಬಂಕ್‍ಗಳಿಗೆ ನಿರಂತರವಾಗಿ ಇಂಧನ ಪೂರೈಕೆಯಾಗುತ್ತಿದೆ. ಅದೇ ರೀತಿ ಗೃಹ ಬಳಕೆ ಮತ್ತು ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗಿಲ್ಲ. ಜನರು ಆತಂಕಗೊಳ್ಳಬಾರದು. ಇನ್ನು ಸಿಲಿಂಡರ್, ಇಂಧನ ಅಭಾವ ಕುರಿತು ಸುಳ್ಳು ಸುದ್ದಿ ಹರಡುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‍ಗಳ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ. ಗೃಹ ಬಳಕೆ ಸಿಲಿಂಡರ್‍ಗಳನ್ನು ಪಡೆಯಲು ಈ ಹಿಂದೆ ಪಡೆದ ದಿನಂಕದಿಂದ 25 ದಿನಗಳ ಬಳಿಕವೇ ನಗರ ಪ್ರದೇಶದÀ ಗ್ರಾಹಕರು ಬುಕ್ಕಿಂಗ್ ಮಾಡಬೇಕಾಗುತ್ತದೆ. ಅದೇ ರೀತಿ ಗ್ರಾಮಾಂತರ ಪ್ರದೇಶದ ಗ್ರಾಹಕರು 45 ದಿನಗಳ ಬಳಿಕವೇ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ವಾಸ್ತವದ ವಿಷಯವನ್ನು ಅರಿಯದೆ ಗ್ರಾಹಕರು ಗ್ಯಾಸ್ ಏಜೆನ್ಸಿಗಳಿಗೆ ಮುಗಿಬೀಳುತ್ತಿರುವುದರಿಂದ ಅನಗತ್ಯ ಜನಸಂದಣಿಯಾಗಿ ಗೊಂದಲು ಸೃಷ್ಟಿಯಾಗುತ್ತಿದೆ ಎಂದಿದ್ದಾರೆ.

ಹೆಚ್ಚುವರಿ ದಾಸ್ತಾನು ಬೇಡ: ಗೃಹ ಬಳಕೆಯ ಅಡುಗೆ ಅನಿಲ ಗ್ರಾಹಕರು ಹಾಗೂ ವಾಣಿಜ್ಯ ಬಳಕೆಯ ಗ್ರಾಹಕರಾದ ಹೋಟೇಲ್, ರೆಸ್ಟೋರೆಂಟ್ ಇತ್ಯಾದಿ ಬಳಕೆದಾರರು ಯಾವುದೇ ಆತಂಕಕ್ಕೆ ಒಳಗಾಗಬಾರದು. ಜಿಲ್ಲಾಡಳಿತವು ಎಚ್‍ಪಿಸಿ, ಐಓಸಿ ಮತ್ತು ಬಿಪಿಸಿ ತೈಲ ಕಂಪನಿಗಳ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದು, ಪೆಟ್ರೋಲ್, ಡಿಸೇಲ್ ಮತ್ತು ಎಲ್.ಪಿ.ಜಿ ಸಿಲಿಂಡರ್‍ಗಳ ಕೊರತೆ ಉಂಟಾಗದೇ ಬೇಡಿಕೆಗೆ ಅನುಗುಣವಾಗಿ ಅಗತ್ಯವಾದ ದಾಸ್ತಾನನ್ನು ಸಂಗ್ರಹಿಸಿಟ್ಟಿಕೊಳ್ಳಲು ಸೂಕ್ತ ಸೂಚನೆಗಳನ್ನು ನೀಡಲಾಗಿದೆ. ಹೀಗಾಗಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಮತ್ತು ಹೆಚ್ಚುವರಿಯಾಗಿ ದಾಸ್ತಾನು ಮಾಡಿಟ್ಟುಕೊಳ್ಳಬಾರದೆಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಮನವಿ ಮಾಡಿದ್ದಾರೆ.