Home ಜಿಲ್ಲೆ ಕಲಬುರಗಿ ವಚನಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಚಿಂತನೆ:ಎಚ್ ಕೆ.ಪಾಟೀಲ

ವಚನಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಚಿಂತನೆ:ಎಚ್ ಕೆ.ಪಾಟೀಲ

ಗದಗ :ಫೆ.22: ಬಸವಾದಿ ಶರಣರ ವಚನಗಳನ್ನು
ಸಮಾಜದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಅವುಗಳಿಗೆ ಕಾನೂನಿನ ಬಲ ತಂದು ಸಶಕ್ತಿಕರಣಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕಾನೂನು ಸಚಿವ ಡಾ.ಎಚ್. ಕೆ.ಪಾಟೀಲ ಪ್ರಕಟಿಸಿದರು.
ಶನಿವಾರ ನಗರದ ತೋಂಟದಾರ್ಯ ಮಠದಲ್ಲಿ ಲಿಂ.ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳ 77 ಜಯಂತಿ ಅಂಗವಾಗಿ ಭಾವೈಕ್ಯತಾ ದಿನಾಚರಣೆ, ಗ್ರಂಥಗಳ ಬಿಡುಗಡೆ ಹಾಗೂ ವಚನ ಪಾಠಶಾಲೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಚನಗಳು ಸಾರ್ವತ್ರಿಕ ಮನ್ನಣೆ ಪಡೆದಿರುವ ಸರ್ವಸಮ್ಮತ ಮೌಲ್ಯಗಳಾಗಿವೆ ಎಂದರು.ಇಂದು ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳು ನಮ್ಮ ನಡುವೆ ಇದ್ದಲ್ಲಿ ಸರ್ಕಾರ ವಚನಗಳಿಗೆ ಕಾನೂನಿನ ಬಲತುಂಬಲು ಹೊರಟಿರುವ ನಡೆ ಶ್ಲಾಘಿಸುತ್ತಿದ್ದರು. ಬಸವತತ್ವಗಳ ಕಟ್ಟುನಿಟ್ಟಿನ ಪರಿಪಾಲಕರಾಗಿದ್ದ ಲಿಂಗೈಕ್ಯ ಸಿದ್ಧಲಿಂಗ ಶ್ರೀಗಳು ತೋಂಟದಾರ್ಯ ಮಠದ ಜಾತ್ರೆಗೆ ಹೊಸ ಭಾಷ್ಯ ಬರೆದು ಜಾತ್ರೆಗಳನ್ನು
ಜನೋಪಯೋಗಿ ಹಾಗೂ ಸಮಾಜಮುಖಿಯಾಗಿ ಆಚರಿಸುವ ಪರಂಪರೆ ಹಾಕಿಕೊಟ್ಟರು. ಪುಸ್ತಕ ಪ್ರಕಟಿಸಿ ಹಂಚುವ ಮೂಲಕ ಕೇವಲ ಧಾರ್ಮಿಕತೆಗೆ ಸೀಮಿತವಾಗಿದ್ದ ಜಾತ್ರೆಗಳನ್ನು ಸಾಂಸ್ಕøತಿಕವಾಗಿ ಮಾರ್ಪಡಿಸಿದರು. ಇಂದಿನ ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಸಹ ಅದೇ ಪರಂಪರೆ ಮುಂದುವರೆಸಿದ್ದಾರೆ. ವಚನಗಳು ಕೇವಲ ಸಭೆ-ಸಮಾರಂಭಗಳ ಭಾಷಣದ ಉಲ್ಲೇಖಕ್ಕೆ ಸೀಮಿತವಾಗದೇ ಪ್ರತಿಯೊಬ್ಬರ ಬದುಕಿನಲ್ಲಿ ಜಾರಿಯಾದಾಗ ನಮ್ಮಷ್ಟು ಸುಸಂಸ್ಕೃತ ಸಮಾಜ ಬೇರೆಲ್ಲೂ ಇರುವುದಿಲ್ಲ ಎಂದರು.
ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ಮಾತನಾಡಿ, ಸಿದ್ದಲಿಂಗ ಶ್ರೀಗಳ ಜಯಂತಿ ಶ್ರೀಗಳ ಸಾಧನೆ ಮೆಲುಕು ಹಾಕಲು ಇರುವ ಅವಕಾಶವಾಗಿದೆ. ಸಿದ್ದಲಿಂಗ ಶ್ರೀಗಳು ತಮ್ಮ ಸಾಧನೆಗಳೊಂದಿಗೆ ಅಜರಾಮರರಾಗಿದ್ದಾರೆ. ನೂರಾರು ಶಿಕ್ಷಣ ಸಂಸ್ಥೆ ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ನೀಡಿದ್ದಾರೆಂದು ಬಣ್ಣಿಸಿದರು.
ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಪೆÇ್ರ.ಎಸ್.ಎಸ್. ಪಟ್ಟಣಶೆಟ್ಟರ ಪ್ರಾಸ್ತಾವಿಕ ಮಾತನಾಡಿದರು. ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಭೈರನಹಟ್ಟಿಮಠದಶಾಂತಲಿಂಗಮಹಾಸ್ವಾಮಿಗಳು, ಆಳಂದದ ಕೋರಣೇಶ್ವರ ಮಹಾಸ್ವಾಮಿಗಳು ಸಮ್ಮುಖ ವಹಿಸಿದ್ದರು.
ಮಾಜಿ ಸಚಿವ ಎಸ್.ಎಸ್ ಪಾಟೀಲ, ಮಾಜಿ ಸಂಸದ ಪೆÇ್ರ.ಐ.ಜಿ. ಸನದಿ, ಮಾಜಿ ಶಾಸಕಿ ಸೀಮಾ ಮಸೂತಿ, ಬಾಲಚಂದ್ರ ಭರಮಗೌಡರ, ತೋಂಟದಾರ್ಯ ಜಾತ್ರಾ ಸಮಿತಿ ಅಧ್ಯಕ್ಷ ವಿನಾಯಕ ಮಾನ್ವಿ, ಶಶಿ ಸಾಲಿ, ಹೇಮಾ ಪಟ್ಟಣಶೆಟ್ಟಿ, ಗ್ರಂಥಗಳ ಲೇಖಕರಾದ ಶಶಿಧರ ತೋಡಕರ, ವಿದ್ಯಾವತಿ ಅಕ್ಕಿ, ವೆಂಕಟಾಪೂರ ಶರಣರು ಮುಂತಾದವರು ಹಾಜರಿದ್ದರು. ಡಾ. ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳ ಭಕ್ತರು- ಅಪಾರ ಅಭಿಮಾನಿಗಳು ಪಾಲ್ಗೊಂಡಿದ್ದರು.