Home ಜಿಲ್ಲೆ ತೃತೀಯ ಸ್ಥಾನ

ತೃತೀಯ ಸ್ಥಾನ

ಚನ್ನಮ್ಮನ ಕಿತ್ತೂರ,ನ೨೩: ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ, ಶ್ರೀ ಸಿದ್ದರಾಮೇಶ್ವರ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ನಾಗನೂರು ಶ್ರೀ ಪ್ರಭುದೇವ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಸಿದ್ದರಾಮೇಶ್ವರ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ `ಸ್ಪರ್ಧಾ ಸಂಗಮ’ ರೀಲ್ಸ್ ಸ್ಪರ್ಧೆಯಲ್ಲಿ ಜ್ಞಾನಗಂಗಾ ಶಿಕ್ಷಣ ಸಂಸ್ಥೆಯ ೯ನೇ ತರಗತಿ ವಿದ್ಯಾರ್ಥಿ ಕುಮಾರ ಸಂಕಲ್ಪ ಕಂಬಿ ತೃತೀಯ ಸ್ಥಾನ ಪಡೆದಿದ್ದಾನೆ.


ವಿದ್ಯಾರ್ಥಿಗಳಲ್ಲಿ ಅಡಗಿರುವ ಸೃಜನಶೀಲತೆ, ಪ್ರತಿಭೆ ಹಾಗೂ ಆಧುನಿಕ ಡಿಜಿಟಲ್ ಮಾಧ್ಯಮಗಳ ಮೂಲಕ ತಮ್ಮ ಅಭಿವ್ಯಕ್ತಿ ಸಾಮರ್ಥ್ಯವನ್ನು ಪ್ರದರ್ಶಿಸಲು ಈ ರೀಲ್ಸ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಜಿಲ್ಲೆಯಾದ್ಯಂತ ವಿವಿಧ ಪ್ರೌಡಶಾಲೆಯ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.