Home ಮುಖಪುಟ ಸುದ್ದಿ ಇದು ಬಿಜೆಪಿ ಗೆಲುವಲ್ಲ, ಒಕ್ಕೂಟದ ಗೆಲುವು

ಇದು ಬಿಜೆಪಿ ಗೆಲುವಲ್ಲ, ಒಕ್ಕೂಟದ ಗೆಲುವು

ಬೆಂಗಳೂರು, ಅ. ೨೮- “ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸಹಜ. ಈ ಬಾರಿ ನಮ್ಮ ಅಭ್ಯರ್ಥಿಗಳು ಸ್ಪರ್ಧಿಸಿದ ನಾಲ್ಕು ಕ್ಷೇತ್ರಗಳ ಪೈಕಿ ಮೂರರಲ್ಲಿ ಭಾರತೀಯ ಜನತಾ ಪಾರ್ಟಿಯವರೇ ಅಭ್ಯರ್ಥಿಗಳಾಗಿದ್ದರು. ನಾಲ್ಕನೇ ಕ್ಷೇತ್ರವೂ ಬಿಜೆಪಿಯಿಂದ ನಮ್ಮ ಪಕ್ಷಕ್ಕೆ ಬಂದ ಅಭ್ಯರ್ಥಿ ಸ್ಪರ್ಧಿಸಿದ್ದರು. ಆದ್ದರಿಂದ ಇದು ಬಿಜೆಪಿಯ ಏಕಪಕ್ಷೀಯ ಗೆಲುವಲ್ಲ, ಎನ್ಡಿಎ ಒಕ್ಕೂಟದ ಗೆಲುವು” ಎಂದು ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಹೇಳಿದ್ದಾರೆ.


ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಾಲ್ಗೊಂಡ ನಾಲ್ಕು ಕ್ಷೇತ್ರಗಳ ಪೈಕಿ ಮೂರರಲ್ಲಿ ಸೋತಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪ್ರತಿಕ್ರಿಯಿಸಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರಿಗೆ ಧನ್ಯವಾದ ಅರ್ಪಿಸಿದ ಅವರು, “ಸೋಲನ್ನು ವಿನಮ್ರವಾಗಿ ಸ್ವೀಕರಿಸಿದ್ದೇವೆ. ಮುಂದಿನ ದಿನಗಳಲ್ಲಿ ಈ ಕ್ಷೇತ್ರಗಳಲ್ಲಿ ಪಕ್ಷವನ್ನು ಬಲಪಡಿಸಲು ಚರ್ಚಿಸಿ ಮುನ್ನಡೆಯುತ್ತೇವೆ” ಎಂದು ತಿಳಿಸಿದ್ದಾರೆ.


” ಕಾರ್ಯಕರ್ತರ ಕಡೆಗಣನೆ, ಚುನಾವಣಾ ಸೋಲಿಗೆ ಕಾರಣವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಕಾರ್ಯಕರ್ತರಲ್ಲಿ ನೋವಿದೆ ಎಂಬುದನ್ನು ಅಲ್ಲಗಳೆಯುವುದಿಲ್ಲ. ಆದರೆ ಅದನ್ನು ದೊಡ್ಡ ವಿಚಾರವಾಗಿ ಮಾಡಬೇಕಾಗಿಲ್ಲ. ಚುನಾವಣಾ ಪ್ರಚಾರದಲ್ಲಿ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ಹಾಗೂ ಕಾರ್ಯಕರ್ತರು ಅವಿರತವಾಗಿ ಶ್ರಮಿಸಿದ್ದಾರೆ. ಅವರೆಲ್ಲರಿಗೂ ಪಕ್ಷದ ಪರವಾಗಿ ಧನ್ಯವಾದಗಳು” ಎಂದರು.

ವಾರಾಣಸಿಯಲ್ಲಿ ನರೇಂದ್ರ ಮೋದಿ ವಿರುದ್ಧ ಮತ ಚಲಾಯಿಸಿದ ಪ್ರಜ್ಞಾವಂತ ಮತದಾರರನ್ನು ಶ್ಲಾಘಿಸಿದ ಅವರು, ಶಿಕ್ಷಕರ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಗೆದ್ದಿರುವುದನ್ನು ಉದಾಹರಣೆಯಾಗಿ ಎತ್ತಿ ತೋರಿಸಿದರು.

“ನಿರಂತರವಾಗಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಜನರ ಸೇವೆಯನ್ನು ಕಾಂಗ್ರೆಸ್ ಪಕ್ಷ ಮಾಡುತ್ತಲೇ ಇರುತ್ತದೆ” ಎಂದು ಅವರು ಭರವಸೆ ನೀಡಿದ್ದಾರೆ.