Home ಜಿಲ್ಲೆ ಸೈಕಲ್ ಪೋಲೋ ಕ್ರೀಡೆಯಲ್ಲಿ ವಿದ್ಯಾರ್ಥಿಗಳ ಕೌಶಲ್ಯ ವೃದ್ಧಿಗೆ ಮೂರು ದಿನಗಳ ತರಬೇತಿ ಶಿಬಿರ

ಸೈಕಲ್ ಪೋಲೋ ಕ್ರೀಡೆಯಲ್ಲಿ ವಿದ್ಯಾರ್ಥಿಗಳ ಕೌಶಲ್ಯ ವೃದ್ಧಿಗೆ ಮೂರು ದಿನಗಳ ತರಬೇತಿ ಶಿಬಿರ

ಸಂಜೆವಾಣಿ ವಾರ್ತೆ,
ವಿಜಯಪುರ, ಜು. ೨೨: ನಗರದ ಲೋಕ ಕಲ್ಯಾಣ ಶಾಲೆಯಲ್ಲಿ ಜುಲೈ ೧೯ರಿಂದ ೨೧ರವರೆಗೆ ಮೂರು ದಿನಗಳ ಕಾಲ ಸೈಕಲ್ ಪೋಲೋ ಕ್ರೀಡೆಯ ವಿಶೇಷ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳಲ್ಲಿ ಕ್ರೀಡಾ ಕೌಶಲ್ಯ, ದೈಹಿಕ ಸಾಮರ್ಥ್ಯ ಹಾಗೂ ತಂಡದ ಮನೋಭಾವ ಬೆಳೆಸುವ ಉದ್ದೇಶದಿಂದ ಈ ತರಬೇತಿಯನ್ನು ಆಯೋಜಿಸಲಾಗಿತ್ತು.
ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ದಾನಪ್ಪ ಸೂರಗೊಂಡ, ಮುಖ್ಯಗುರು ದಯಾಸಾಗರ ಸೂರಗೊಂಡ, ಮುಖ್ಯ ಆಡಳಿತಗಾರ ಪ್ರಭು ಕೋಟ್ಯಾಳ, ವಿಜಯಪುರ ಜಿಲ್ಲಾ ಸೈಕಲ್ ಪೋಲೋ ಸಂಸ್ಥೆಯ ಸಂಸ್ಥಾಪಕ ಹಾಗೂ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ, ಉತ್ನಾಳ, ಗೋಪಾಲ ಹಡಲಗೇರಿ, ಬಸಿಂಗವರ, ರಾಜಶೇಖರ ಪಾಟೀಲ, ಶ್ರೀಮತಿ ಅನಿತಾ ರಜಪೂತ ಸೇರಿದಂತೆ ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ಪೋಲೋ ಕ್ರೀಡೆಯ ಮೂಲಭೂತ ನಿಯಮಗಳು, ಆಟದ ತಂತ್ರಗಳು, ಸುರಕ್ಷತಾ ಕ್ರಮಗಳು ಹಾಗೂ ಪ್ರಾಯೋಗಿಕ ತರಬೇತಿಯನ್ನು ನೀಡಲಾಯಿತು. ಇಂತಹ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಾಸಕ್ಕೆ ನೆರವಾಗಲಿದ್ದು, ಭವಿಷ್ಯದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಪ್ರೇರಣೆಯಾಗಲಿವೆ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಾಯಿತು ಎಂದು ಸಂಪತ್ ಸೂರಗೊಂಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.