ಮೂವರಿಗೆ ಒಡೆಯರ್ ಪ್ರಶಸ್ತಿ

ಬೆಂಗಳೂರು, ಡಿ. ೬- ಹಿರಿಯ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ, ರಾಜ್ಯ iಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎ. ಅಮೃತರಾಜ್ ಹಾಗೂ ಕೆ.ಎಸ್.ಆರ್.ಟಿ.ಸಿ. ಕೇಂದ್ರೀಯ ಕನ್ನಡ ಕ್ರಿಯಾ ಸಮಿತಿ ಗೌರವಾಧ್ಯಕ್ಷ ವ.ಚ. ಚನ್ನೇಗೌಡ ಅವರನ್ನು ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ಕಲಾನಿಕೇತನದ ರಾಜರ್ಷಿ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಈ ಪ್ರಶಸ್ತಿಯು ೧೦ ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರ, ಪದಕ ನೀಡಿ ಗೌರವಿಸಲಾಗುತ್ತದೆ. ಡಿ. ೧೦ ರಂದು ಸಂಜೆ ೫.೩೦ಕ್ಕೆ ನಗರದ ಕನ್ನಡ ಭವನದ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕಲಾನಿಕೇತನದ ರಾಜ್ಯಾಧ್ಯಕ್ಷ ಕುವೆಂಪು ಪ್ರಕಾಶ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.