
ದೊಡ್ಡಬಳ್ಳಾಪುರಆ.೩೧-ರೈಲ್ವೆ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ಸಂಭವಿಸಿದೆ.
ಇರ್ಫಾನಾ (೪೬), ರುಕಿಯಾ(೧೩), ರಾಕಿಯಾ (೮) ಮೃತಪಟ್ಟವರು. ದೊಡ್ಡಬಳ್ಳಾಪುರ ಮತ್ತು ಮುತ್ತೂರು ನಡುವಿನ ರೈಲ್ವೆ ಹಳಿ ಬಳಿ ಇಂದು ಮುಂಜಾನೆ ಘಟನೆ ನಡೆದಿದ್ದು, ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರೈಲು ಡಿಕ್ಕಿ ಹೊಡೆದ ರಭಸಕ್ಕೆ ಮೂವರ ದೇಹಗಳು ಚೆಲ್ಲಾಪಿಲ್ಲಿಯಾಗಿವೆ. ರಜೆ ಇದೆ ಅಂತ ಹಿಂದೂಪರದಿಂದ ಅಜ್ಜಿ ಮನೆಗೆ ಬಂದಿದ್ದ ಮೊಮ್ಮಕ್ಕಳು.
ರಜೆ ಮುಗಿಸಿ ಊರಿಗೆ ವಾಪಸ್ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಮೃತರು ಮುತ್ತೂರು ಕಡೆಯಿಂದ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ,ರೈಲ್ವೆ ಹಳಿಗಳ ಮೇಲೆ ನಡೆದುಕೊಂಡು ಬರುತ್ತಿದ್ದ ವೇಳೆ,ಎರಡು ಹಳಿಗಳಿದ್ದು ತಿರುವಿನಲ್ಲಿ ರೈಲು ಬರುತ್ತಿರುವುದು ಗಮನಕ್ಕೆ ಬಂದಿಲ್ಲ, ವೇಗವಾಗಿ ಬಂದ ಎಕ್ಸ್ ಪ್ರೆಸ್ ರೈಲು ಮೂವರ ಮೇಲೆ ಹರಿದೆ, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ
ಈ ಸಂಬಂಧ ಯಶವಂತಪುರ ರೈಲ್ವೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


































