Home ಮುಖಪುಟ ಸುದ್ದಿ ಕರ್ನಾಟಕ ಹೈಕೋರ್ಟ್‌ಗೆ ಮೂವರು ಹೊಸ ನ್ಯಾಯಾಧೀಶರ ನೇಮಕ

ಕರ್ನಾಟಕ ಹೈಕೋರ್ಟ್‌ಗೆ ಮೂವರು ಹೊಸ ನ್ಯಾಯಾಧೀಶರ ನೇಮಕ

ಸುಪ್ರೀಂ ಕೋರ್ಟ್ ಕೊಲಿಜಿಯಂ ಅಸ್ತು


ನವದೆಹಲಿ,ಏ೧೪: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಪದೋನ್ನತಿ ಮಾಡುವ ಪ್ರಸ್ತಾವನೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಸ್ತು ಎಂದಿದೆ.
ಏಪ್ರಿಲ್ ೧೪, ೨೦೨೬ ರಂದು ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮೂವರು ಅಧಿಕಾರಿಗಳನ್ನು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.


ನೇಮಕಗೊಂಡ ನ್ಯಾಯಾಂಗ ಅಧಿಕಾರಿಗಳು:
ರಾಜೇಶ್ವರಿ ನಾರಾಯಣ ಹೆಗಡೆ
ಕೆದಂಬಾಡಿ ಗಣೇಶ್ ಶಾಂತಿ
ಮಹದೇವಪ್ಪ ಬೃಂಗೇಶ್

ರಾಜ್ಯದ ಉನ್ನತ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಸಂಖ್ಯೆಯನ್ನು ಹೆಚ್ಚಿಸುವ ಮತ್ತು ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ಪೂರಕವಾಗಿ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಕೊಲಿಜಿಯಂನ ಈ ಶಿಫಾರಸನ್ನು ಈಗ ಕೇಂದ್ರ ಕಾನೂನು ಸಚಿವಾಲಯಕ್ಕೆ ಕಳುಹಿಸಲಾಗುವುದು. ಅಲ್ಲಿಂದ ರಾಷ್ಟ್ರಪತಿಗಳ ಅಂಕಿತ ಬಿದ್ದ ನಂತರ ಅಧಿಕೃತವಾಗಿ ನೇಮಕಾತಿ ಆದೇಶ ಹೊರಬೀಳಲಿದೆ.ಕರ್ನಾಟಕ ಹೈಕೋರ್ಟ್‌ಗೆ ಇಬ್ಬರು ಮಹಿಳಾ ನ್ಯಾಯಾಂಗ ಅಧಿಕಾರಿಗಳು ಶಿಫಾರಸುಗೊಂಡಿರುವುದು ಈ ನೇಮಕಾತಿಯ ವಿಶೇಷತೆಯಾಗಿದೆ.