Home ಜಿಲ್ಲೆ ಕಲಬುರಗಿ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿ: ತೀವ್ರ ಶೋಧ

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿ: ತೀವ್ರ ಶೋಧ

ಕಲಬುರಗಿ,ಜು.14-ನಗರದ ಜೇವರ್ಗಿ ರಸ್ತೆಯಲ್ಲಿರುವ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾಗಿರುವ ಘಟನೆ ಇಂದು ಬೆಳಗಿನಜಾವ ನಡೆದಿದೆ.
ಪರಾರಿಯಾದ ಕೈದಿಗಳನ್ನು ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಇಸ್ಲಾಂಪುರದ ಮಸ್ತಾನ್, ಔರಾದ್ ತಾಲ್ಲೂಕಿನ ಸಂತಾಪುರ ಗ್ರಾಮದ ಸಂತೋಷ ಬಸಪ್ಪ ಹಾಗೂ ಬೀದರ್ ತಾಲೂಕಿನ
ಬಕ್ಕಚೌಡಿ ಗ್ರಾಮದ ಸಾಗರ ಭೀಮರಾಯ ಎಂದು ಗುರುತಿಸಲಾಗಿದೆ. ಈ ಮೂವರು ಕೈದಿಗಳಲ್ಲಿ ಇಬ್ಬರು ಪೋಕ್ಸೊ, ಒಬ್ಬ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು ಎಂದು ತಿಳಿದುಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕೈದಿಗಳು ಜೈಲಿನ ಭದ್ರತಾ ಗೋಡೆ ಹಾರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಜೈಲು ಅಧಿಕಾರಿಗಳು ಹಾಗೂ ಪೆÇಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಫರಹತಾಬಾದ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪರಾರಿಯಾದ ಕೈದಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ವ್ಯಾಪಕ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪೋಕ್ಸೊ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಆರೋಪಿಯೊಬ್ಬ ಪೊಲೀಸರಿಗೆ ಚಳ್ಳೆ ಹಣ್ಣು ತಿನಿಸಿ ಅಫಜಲಪುರ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಘಟನೆ ಬೆನ್ನಲ್ಲೇ ಈಗ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾಗಿರುವುದು ಪೆÇಲೀಸ್ ಇಲಾಖೆಗೆ ತೀವ್ರ ಮುಜುಗರ ತಂದಿಟ್ಟಿದೆ. ಸ್ವತಃ ಗೃಹ ಸಚಿವರ ತವರಿನಲ್ಲೇ ಇಂತಹ ದೊಡ್ಡ ಲೋಪಗಳು ಪದೇ ಪದೇ ನಡೆಯುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.