
ಬೆಂಗಳೂರು,ಏ.೯- ಬಿಸಿಲ ಬೇಗೆಯಿಂದ ಬಳಲುತ್ತಿರುವ ರಾಜ್ಯದ ಜನರಿಗೆ ಹವಾಮಾನ ಇಲಾಖೆ ಮಳೆಯ ಸಾಂತ್ವನದ ಸುದ್ದಿ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಭಾಗಗಳಲ್ಲಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ ಮತ್ತು ಚಾಮರಾಜನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ ೧೧ ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಕರಾವಳಿ ಪ್ರದೇಶಗಳಿಗೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಾಪಮಾನ ಮತ್ತು ತೇವಾಂಶ ಸಾಮಾನ್ಯಕ್ಕಿಂತ ಹೆಚ್ಚಿರುವ ಸಾಧ್ಯತೆಯಿದೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ, ಕರಾವಳಿ ಜಿಲ್ಲೆಗಳಿಗೆ ’ಹಳದಿ’ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಹವಾಮಾನ: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕಳೆದ ಕೆಲವು ದಿನಗಳಿಂದ ನಗರದಲ್ಲಿ ಮೋಡ ಕವಿದಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆಯಿದೆ.
ಕಳೆದ ಒಂದು ತಿಂಗಳಿಂದಲೂ ರಾಜ್ಯಾದ್ಯಂತ ವಿವಿಧೆಡೆ ಮಳೆಯಾಗುತ್ತಲೇ ಇದೆ. ಕೆಲವು ಭಾಗಗಳಲ್ಲಿ ವಿಪರೀತ ಎನ್ನುವಷ್ಟು ಆಲಿಕಲ್ಲು ಮಳೆಯೂ ಆಗಿದೆ. ರಾಜ್ಯಕ್ಕೆ ಜೂನ್‌ನಲ್ಲಿ ಮುಂಗಾರು ಪ್ರವೇಶ ಆಗಲಿದ್ದು, ಅದಕ್ಕೂ ಪೂರ್ವ ಕೂಡ ಅಲ್ಲಲ್ಲಿ ಮಳೆಯಾಗುತ್ತಿದೆ. ಈ ಮಳೆ ನೀರಿನ ಬವಣೆ ತೀರಿಸುತ್ತದೆ..ವಾತಾವರಣದಲ್ಲಿ ತಂಪು ಕೂಡ ಆಗುತ್ತಿದೆ. ಆದರೆ ಅನೇಕ ಬೆಳೆಗಳಿಗೆ ಹಾನಿಕಾರಕವಾಗಿದೆ.
ಮಳೆಯಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ನಿನ್ನೆ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ೩೯ ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ರಾಜ್ಯಾದ್ಯಂತ ಗರಿಷ್ಠ ತಾಪಮಾನ ೩೧ ಡಿಗ್ರಿ ಸೆಲ್ಸಿಯಸ್ ನಿಂದ ೩೯ ಡಿಗ್ರಿ ಸೆಲ್ಸಿಯಸ್ ವರೆಗೆ ಇತ್ತು. ಬಿಸಿಲಿನ ತಾಪ ಇದ್ದರೂ ಮಳೆಯಾಗುತ್ತಿದೆ. ಮಳೆಯ ನಂತರ ಸ್ವಲ್ಪ ಸಮಯದವರೆಗೆ ಹವಾಮಾನ ತಂಪಾಗಿದ್ದರೂ, ಚಳಿ ಮತ್ತೆ ಹೆಚ್ಚುತ್ತಿದ್ದು, ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕರಾವಳಿ ಪ್ರದೇಶದಲ್ಲಿ, ಮಂಗಳೂರು, ಹಾಗ, ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ರಾಯಚೂರು ಮತ್ತು ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳು ಸಾಮಾನ್ಯಕ್ಕಿಂತ ಕಡಿಮೆ ತಾಪಮಾನವನ್ನು ದಾಖಲಿಸಿವೆ. ಉಳಿದೆಲ್ಲ ಸ್ಥಳಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿತ್ತು.























