
ವಿಜಯಪುರ, ಜೂ. 16:ಬೈಕಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಡಚಣ ತಾಲೂಕಿನ ಮರಗೂರ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ಧರ್ಮಣ್ಣ ಹೊಸಮನಿ (41), ಬೀರಪ್ಪ ಪೂಜಾರಿ (25) ಮೃತಪಟ್ಟ ದುರ್ದೈವಿಗಳು.
ಮೃತರು ಇಂಡಿ ತಾಲೂಕಿನ ಗೋರನಾಳ ಗ್ರಾಮದವರು.
ಟಿಪ್ಪರ್ ಚಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣವಿರಬಹುದು ಎಂದು ಪೆÇಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಝಳಕಿ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಝಳಕಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























