
ಕೋಲಾರ,ಡಿ.೨೦- ಜಿಲ್ಲೆಯಲ್ಲಿನ ವಿಕಲಚೇತನರು ಹಾಗೂ ಹಿರಿಯ ನಾಗರಿಕರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಭದ್ರ ಬುನಾದಿ ಹಾಕುವುದಾಗಿದೆ ಮತ್ತು ಅವರಿಗೆ ಸಮಾನ ಅವಕಾಶವನ್ನು ಕಲ್ಪಿಸಿ ಹಕ್ಕುಗಳನ್ನು ರಕ್ಷಿಸಲು ಮುಂದಾಗಿರುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ನಾಗರತ್ನ ಅಭಿಪ್ರಾಯಪಟ್ಟರು.
ನಗರದ ಪತ್ರಕರ್ತ ಭವನದಲ್ಲಿಂದು ಎಪಿಡಿ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ವಿಕಲಚೇತನರ ದಿನಾಚರಣೆ ಅಂಗವಾಗಿ ಹಿರಿಯ ನಾಗರೀಕರಿಗೆ ಹಾಗೂ ಶ್ರವಣ ವಿಕಲಚೇತನರಿಗೆ ಮೌಲ್ಯಮಾಪನ ಶಿಭಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣವೇ ಇಲಖೆಯ ಗುರಿಯಾಗಿದೆ ಎಂದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಆರ್. ಮಂಜುಳ ಮಾತನಾಡಿ, ಹಿರಿಯ ನಾಗರೀಕರಿಗೆ ಸಿಗಬೇಕಾದ ಸೌಲತ್ತುಗಳನ್ನು ದೊರಕಿಸಿಕೊಡುವುದು ಮತ್ತು ವಿಕಲಚೇತನರಿಗೆ ಸರ್ಕಾರದಿಂದ ಮತ್ತು ಹಲವು ಸಂಸ್ಥೆಗಳ ಕೊಡೆಯಿಂದ ನೆರವು ಒದಗಿಸಿ ಅವರನ್ನು ಪ್ರೋತ್ಸಾಹಿಸುವಂತಹ ಕೆಲಸ ಮಾಡಲಾಗುತ್ತಿದೆ. ಮೇಲು ಕೀಳೆಂಬ ಭಾವನೆಯನ್ನು ಹೋಗಲಾಡಿಸಿ ಆತ್ಮಸ್ಥೈರ್ಯ, ನಂಬಿಕೆ, ಛಲವನ್ನು ಮೈಗೂಡಿಸಿಕೊಳ್ಳುವಂತೆ ಮಾಡುವ ಮೂಲಕ ತಾನು ಏನಾದರೂ ಸಾಧಿಸಬಲ್ಲೆ ಎಂಬ ಆತ್ಮವಿಶ್ವಾಸವನ್ನು ಬೆಳೆಸುವಂತಹ ಕೆಲಸ ಮಾಡಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರವಿಕುಮಾರ್, ಎ.ಪಿ.ಡಿ ಸಂಸ್ಥೆಯ ರಾಜ್ಯ ಸಂಯೋಜಕ ಮನುಕುಮಾರ್, ಆಡಿಯಾಲಜಿಸ್ಟ್ ಸುಮತಿ, ಜೋರಾ ಸಂದ್ಯ, ಸೋನಿಯಾ, ಗೀತಾಂಜಲಿ, ಸುಪ್ರೀಂ ಸೇವಾ ಸಂಸ್ಥೆಯ ಅಧ್ಯಕ್ಷ ಸುಪ್ರೀಂ, ಜಿಲ್ಲೆಯ ಎಲ್ಲಾ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ ಹಾಗೂ ಯುಆರ್‌ಡಬ್ಲ್ಯೂಗಳು ಆಗಮಿಸಿದ್ದರು.
ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ೨೦೦ ಮಂದಿ ಹಿರಿಯ ನಾಗರೀಕರು ಮತ್ತು ವಿಕಲಚೇತನರು ಶ್ರವಣ ಮೌಲ್ಯಮಾಪನ ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು.



























