ತಂಬಾಕು ಮುಕ್ತ ಯುವ ಅಭಿಯಾನ 3.0 ಕ್ಕೆ ಚಾಲನೆ

ಗದಗ,ನ20 : ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಂಬಾಕು ಮುಕ್ತ ಯುವ ಅಭಿಯಾನ 3.0 ಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಚಾಲನೆ ನೀಡಿದರು.

ನಂತರ ಅವರು ಮಾತನಾಡಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 3.0 ವನ್ನು ಅಕ್ಟೋಬರ್ 9 ರಿಂದ ಡಿಸೆಂಬರ್ 9 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಪರಿಣಾಮಕಾರಿ ಅನುಷ್ಟಾನಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ವಿವಿಧ ಇಲಾಖೆಗಳು ಸಮನ್ವಯತೆ ಹಾಗೂ ಸಹಕಾರ ಅಗತ್ಯವಾಗಿದೆ. ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯಾಗಿಸುವುದು, ಯುವಜನರಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದು ಹಾಗೂ ತಂಬಾಕು ವ್ಯಸನಕ್ಕೆ ಒಳಗಾಗಿರುವ ಯುವಜನರನ್ನು ವ್ಯಸನದಿಂದ ಹೊರಬರಲು ಪೆÇ್ರೀತ್ಸಾಹಿಸುವುದು ಈ ಅಭಿಯಾನದ ಮುಖ್ಯ ಉದ್ದೇಶಗಳಾಗಿವೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಮಾತನಾಡಿ ತಂಬಾಕು ಸೇವನೆಯಿಂದ ಕ್ಯಾನ್ಸರ್, ಹೃದಯ ಹಾಗೂ ಶ್ವಾಸ ಸಂಬಂಧಿ ಇತ್ಯಾದಿ ಅನೇಕ ಕಾಯಿಲೆಗಳು ಬರುತ್ತವೆ. ಜಿಲ್ಲೆಯಲ್ಲಿ 400 ಶಾಲಾ /ಕಾಲೆಜುಗಳನ್ನು ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಯನ್ನಾಗಿ ಘೋಷಿಸುವ ಗುರಿ ಹೊಂದಲಾಗಿದೆ ಎಂದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಠೋಡ ಮಾತನಾಡಿ ಜಿಲ್ಲೆಯ ಶಾಲೆ ಕಾಲೇಜುಗಳಲ್ಲಿ ತಂಬಾಕುಮುಕ್ತ ಯುವ ಅಭಿಯಾನ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪೆÇಲೀಸ ಇಲಾಖೆ ಸಹಕಾರದೊಂದಿಗೆ ಕೋಟ್ಪಾ ದಾಳಿ ಹಾಗೂ ಸಮುದಾಯ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳಾದ ಡಾ. ಮೀನಾಕ್ಷಿ, ಡಾ.ವೈ.ಕೆ.ಭಜಂತ್ರಿ, ಡಾ.ರಾಜೇಂದ್ರ ಬಸರಿಗಿಡದ, ಡಾ. ಗಿರಡ್ಡಿ , ಡಾ. ಅರುಂಧತಿ ಕುಲಕರ್ಣಿ, ತಾಲೂಕಾ ವೈದ್ಯಾಧಿಕಾರಿಗಳು, ಗೋಪಾಲ ಸುರಪುರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.