Home ಜಿಲ್ಲೆ ಬೆಂಗಳೂರು ನಾಳೆ ವ್ಯಸನಮುಕ್ತ ದಿನಾಚರಣೆ

ನಾಳೆ ವ್ಯಸನಮುಕ್ತ ದಿನಾಚರಣೆ

ಕೋಲಾರ, ಜು,೩೦- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸುವರ್ಣಗಂಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಜಿಲ್ಲಾ ಪೊಲೀಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೋಲಾರ ಇವರ ಸಹಯೋಗದಲ್ಲಿ ನಡೆಯಲಿರುವ ಡಾ|| ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಜುಲೈ ೩೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಮಂಗಸಂದ್ರ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸುವರ್ಣಗಂಗೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಸಾರಿಗೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ (ಪಕೃತಿ ವಿಕೋಪ) ಬಿ.ಎಸ್. ಸುರೇಶ್ ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಕೊತ್ತೂರು ಜಿ.ಮಂಜುನಾಥ್ ಅವರು ವಹಿಸುವರು.


ಮುಖ್ಯ ಅತಿಥಿಗಳಾಗಿ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷರು ಮತ್ತು ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಕೆ.ಎಂ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಕೆ.ಜಿ.ಎಫ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ರೂಪಕಲ ಎಂ. ಶಶಿಧರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಂ.ಮಲ್ಲೇಶ್ ಬಾಬು, ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ವೈ.ನಂಜೇಗೌಡ, ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಕೆ ವೆಂಕಟಶಿವಾರೆಡ್ಡಿ, ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಮೃದ್ಧಿ ವಿ. ಮಂಜುನಾಥ್. ವಿಧಾನ ಪರಿಷತ್ ಶಾಸಕರಾದ ನಸೀರ್ ಅಹಮದ್, ಚಿದಾನಂದ ಎಂ.ಗೌಡ, ಎಂ.ಎಲ್ ಅನಿಲ್ ಕುಮಾರ್, ಡಾ|| ಡಿ.ಟಿ. ಶ್ರೀನಿವಾಸ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಭು. ಎನ್ ಬಡಿಗೇರ್, ಅಪರ ಜಿಲ್ಲಾಧಿಕಾರಿ ಎಸ್.ಎಂ. ಮಂಗಳ, ಅಪರ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಸಿ ಜಗದೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರಾದ ವೈ.ಶಿವಕುಮಾರ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಹನೀಫ್, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ ರವಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವರಾದ ಶ್ರೀ ಸಿ.ಎನ್ ಶ್ರೀಧರ್, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ಹಾಗೂ ಮಂಗಸಂದ್ರ ಸುವರ್ಣಗಂಗೆ ಕ್ಯಾಂಪಸ್ ನಿರ್ದೇಶಕ ಪ್ರೊ.ಡಿ ಕುಮುದ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಿ.ಶ್ರೀನಿವಾಸ್, ಆರ್.ಸಿ.ಹೆಚ್ ಅಧಿಕಾರಿ ಡಾ. ಚಾರಿಣಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಪ್ರೊ. ಬಿ.ಪಿ ಬಾಹುಬಲಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರಮೇಶ್ ಎಂ.ಎನ್ ಅವರು ಭಾಗವಹಿಸುವರು.