
ಜಮಖಂಡಿ:ಜೂ.10: ನಗರದ ಬಸ್ ನಿಲ್ದಾಣದ ಸಮೀಪದ ಉಪಹಾರ ಹೋಟೆಲ್ ಮುಂಭಾಗದಲ್ಲಿ ವ್ಯಕ್ತಿಯೊಬ್ಬನಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಉಡುಪಿ ಜಿಲ್ಲೆಯವರಾಗಿರಬಹುದು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಅವರ ಹೆಸರು ಹಾಗೂ ಪೂರ್ಣ ವಿಳಾಸ ಇನ್ನೂ ಖಚಿತವಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ಪೆÇಲೀಸ್ ಮೂಲಗಳಿಂದ ತಿಳಿದು ಬರಬೇಕಾಗಿದೆ.
ಡಿಕ್ಕಿಯ ಪರಿಣಾಮ ಗಾಯಾಳುವಿನ ಕೈಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರ ಸಹಾಯದಿಂದ ಅವರನ್ನು ತಕ್ಷಣ ಜಮಖಂಡಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಘಟನೆ ಕುರಿತು ಪೆÇಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ಅಪಘಾತದ ನಿಖರ ಕಾರಣ ಹಾಗೂ ಗಾಯಾಳುವಿನ ಗುರುತು ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.


























