
ಜೇವರಗಿ,ಡಿ.16:ರಸ್ತೆ ದಾಟುವ ಸಂದರ್ಭದಲ್ಲಿ ಟ್ರ್ಯಾಕ್ಟರ್ ಹರಿದು ಸ್ಥಳದಲ್ಲಿಯೇ ವ್ಯಕ್ತಿ-ಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಪಟ್ಟಣದ ಬಸವೇಶ್ವರ ನಗರದ ನಿವಾಸಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ವಾರ್ಡನ್ ನಬಿಸಾಬ ದಸ್ತಗೀರಸಾಬ ನಾಯ್ಕೋಡಿ (65) ಮೃತಪಟ್ಟವರು. ಪಟ್ಟಣದ ಬಸವೇಶ್ವರ ಸರ್ಕಲ್ ಬಳಿ ಮಧ್ಯಾಹ್ನ ನಬಿಸಾಬ ಮನೆಗೆ ತೆರಳುವ ಸಂದರ್ಭದಲ್ಲಿ ರಸ್ತೆ ದಾಟುವ ವೇಳೆ ಎದುರಿಗೆ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎಂದು ಪೆÇಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್‍ಐ ಗಜಾನಂದ ಬಿರಾದಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜೇವರ್ಗಿ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.
























