
ಜೇವರಗಿ,ಜು 28: ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಹಳ್ಳಕ್ಕೆ ಉರುಳಿ ಬಿದ್ದು ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ಅಂದೋಲಾ ಗ್ರಾಮದಲ್ಲಿ ನಡೆದಿದೆ.
ಆಕಾಶ ಮಹಾಂತೇಶ ರಾಠೋಡ (23) ಮೃತಪಟ್ಟ ಯುವಕ.
ಜಮೀನಿಗೆ ಕ್ರಿಮಿನಾಶಕ ಸಿಂಪಡಿಸಲು ತೆರಳುವಾಗ ಮಾರ್ಗಮಧ್ಯೆ ಹಳ್ಳಕ್ಕೆ ಟ್ರ್ಯಾಕ್ಟರ್ ಉರುಳಿ ಬಿದ್ದಿದ್ದು, ಟ್ರ್ಯಾಕ್ಟರ್ ಕೆಳಗೆ ಸಿಲುಕಿ ಆಕಾಶ ಮೃತಪಟ್ಟಿದ್ದಾನೆ ಎಂದು ಪೆÇಲೀಸರು ತಿಳಿಸಿದ್ದಾರೆ. ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





























