
ಸಂಜೆ ವಾಣಿ ವಾರ್ತೆ
ಜಮಖಂಡಿ: ನಗರದ ಪೋಸ್ಟ್ ಚೌಕದಿಂದ ಹಳೆ ತಹಶೀಲ್ದಾರ್‌ರ ಕಾರ್ಯಾಲಯಕ್ಕೆ ತೆರಳುವ ಮಾರ್ಗದಲ್ಲಿ ಪದೇಪದೇ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಈ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದ್ದರೂ ಸಂಬAಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ. ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗುತ್ತಿರುವುದರಿಂದ ಅಂಬುಲೆನ್ಸ್ ಸೇರಿದಂತೆ ತುರ್ತು ಸೇವೆಯ ವಾಹನಗಳು ಸಂಚರಿಸಲು ಕೂಡ ತೊಂದರೆಯಾಗುತ್ತಿದೆ.
ಟ್ರಾಫಿಕ್ ಜಾಮ್‌ನಿಂದಾಗಿ ಸಾರ್ವಜನಿಕರು ತಮ್ಮ ಗಮ್ಯಸ್ಥಾನ ತಲುಪಲು ಹೆಚ್ಚಿನ ಸಮಯ ವ್ಯಯಿಸುವಂತಾಗಿದೆ. ವಿಶೇಷವಾಗಿ ತುರ್ತು ಸಂದರ್ಭದಲ್ಲಿ ಅಂಬುಲೆನ್ಸ್ಗಳು ಸಿಲುಕಿಕೊಂಡರೆ ರೋಗಿಗಳ ಜೀವಕ್ಕೂ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಹೀಗಾಗಿ ಸಂಬAಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಟ್ರಾಫಿಕ್ ಜಾಮ್‌ಗೆ ಕಾರಣವಾಗುತ್ತಿರುವ ಸಮಸ್ಯೆಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಜೊತೆಗೆ ತುರ್ತು ವಾಹನಗಳು ಯಾವುದೇ ಅಡೆತಡೆಯಿಲ್ಲದೆ ಸಂಚರಿಸುವAತೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.































