
ಕೋಲಾರ,ಜ.೮- ಸಂಚಾರಿ ನಿಯಮಗಳ ಉಲ್ಲಂಘನೆ, ಮೋಟಾರು ವಾಹನ ಕಾಯ್ದೆಗಳ ಬಗ್ಗೆ ಅಸಡ್ಡೆ ವಹಿಸಿದರೆ ಸಾವು ಕಟ್ಟಿಟ್ಟ ಬುತ್ತಿ ಎಂದು ಯಮ ವೇಷದಾರಿ ದ್ವಿಚಕ್ರವಾಹನ ಚಾಲಕರಿಗೆ ಮತ್ತು ಆಟೋ ಚಾಲಕರಿಗೆ ಎಚ್ಚರಿಕೆ ನೀಡಿ ಬೀದಿ ನಾಟಕ ಪ್ರದರ್ಶನ ಮಾಡಿದರು.
೩೭ನೇ ರಾಷ್ಟ್ರೀಯ ಸುರಕ್ಷತಾ ಸಪ್ತಾಹದ ಉದ್ಘಾಟನೆಯ ಅಂಗವಾಗಿ ಕೋಲಾರ ನಗರದ ಬಂಗಾರಪೇಟೆ ವೃತ್ತದ ಬಳಿ ಕಾನೂನು ಸೇವಾ ಪ್ರಾಧಿಕಾರ, ಆರ್.ಟಿ.ಓ ಇಲಾಖೆ, ತ್ರಿಚಕ್ರ ವಾಹನ ಚಾಲಕರ ಸಂಘ, ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ನಟೇಶ್, ಆರ್.ಟಿ.ಓ ವೇಣುಗೋಪಾಲರೆಡ್ಡಿ, ಹೆಚ್.ಮಂಜುನಾಥ್, ಎಂ.ವಿ.ಸೂಪರಿಂಡೆಂಟ್ ಗುರುಪ್ರಸಾದ್, ರಾಜ್ಯ ಆಟೋ ಯೂನಿಯನ್ ಅಧ್ಯಕ್ಷ ಕೆ.ವಿ.ಸುರೇಶ್ ಕುಮಾರ್, ತಾಲೂಕು ಅಧ್ಯಕ್ಷ ಜೆ.ಮಂಜುನಾಥ್, ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಅಧ್ಯಕ್ಷ ಚಿದಂಬರಂ ಸೇರಿದಂತೆ ಇನ್ನಿತರರು ಇದ್ದರು.
























