ಟ್ರಂಪ್-ಪುಟೀನ್ ಮಾತುಕತೆ ವಿಫಲ

ವಾಷಿಂಗ್ಟನ್, ಆ.೧೬- ರಷ್ಯಾ ಮತ್ತು ಉಕ್ರೇನ್ ನಡುವೆ ಕದನ ವಿರಾಮ ಜಾರಿ ಮಾಡುವ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವೆ ಅಲಾಸ್ಕಾದಲ್ಲಿ ಸುಮಾರು ಮೂರು ಗಂಟೆಗಳ ಕಾಲ ಮಾತುಕತೆ ಪ್ರಲಫ್ರದವಾಗದೆ ಮುಕ್ತಾಯವಾಗಿದೆ.


ಕದನ ವಿರಾಮಜಾರಿ ವಿಶ್ವಾಸದೊಂದಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದೊಗೆ ಮಾತುಕತೆ ನಡೆಸಿದ್ದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಯಾವುದೇ ಅಂತಿಮ ಒಪ್ಪಂದಕ್ಕೆ ಬರಲು ಸಾಧ್ಯವಾಗದೆ ಮಾತುಕತೆ ಮುಗಿಸಿದ್ದಾರೆ.


ಯುರೋಪ್‌ನಲ್ಲಿ ನಾಲ್ಕನೇ ವರ್ಷಕ್ಕೆ ಕಾಲಿಟ್ಟಿರುವ ರಷ್ಯಾ- ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ಅಥವಾ ತಕ್ಷಣ ಕದನ ವಿರಾಮ ಜಾರಿ ಮಾಡಲು ಡೊನಾಲ್ಡ್ ಟ್ರಂಪ್ ವಿಶ್ವಾಸದಲ್ಲಿದ್ದರು, ಆದರೆ ಮಾತುಕತೆ ಅಪೂರ್ಣಗೊಂಡಿದೆ.


ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆದ ಮಾತುಯಕತೆ ಯಶಸ್ಸು ಕಂಡಿದೆ, ಆದರೆ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.


ಅಲಾಸ್ಕಾದ ಆಂಕಾರೇಜ್‌ನಲ್ಲಿ ಸುಮಾರು ಮೂರು ಗಂಟೆಗಳ ಕಾಲ ನಡೆದ ಶೃಂಗಸಭೆಯ ನಂತರ ಉಕ್ರೇನ್‌ನಲ್ಲಿನ ಯುದ್ಧದ ಮೇಲೆ ಕೇಂದ್ರೀಕರಿಸಿದ ನಂತರ ಯಾವುದೇ ಅಂತಿಮ ಒಪ್ಪಂದಕ್ಕೆ ಬರಲಿಲ್ಲ. ಈ ನಿಟ್ಟಿನಲ್ಲಿ ಮತ್ತೆ ಮಾತುಕತೆ ನಡೆಯಲಿದೆ ಎಂದು ಹೇಳಿದ್ದಾರೆ.


ರಷ್ಯಾ ಮತ್ತು ಉಕ್ರೇನ್ ನಡುವೆ ನಡೆದ ತಪ್ಪುಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದ್ದೇವೆ ಆದರೆ ತಕ್ಷಣ ಕದನ ವಿರಾಮ ಜಾರಿ ಮಾಡುವ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿದಿದೆ ಎಂದು ತಿಳಿಸಿದ್ದಾರೆ.


ಉಭಯ ದೇಶಗಳ ನಡುವೆ ಮಹತ್ವದ ವಿಷಯದ ಬಗ್ಗೆ ಇನ್ನೂ ಚರ್ಚೆ ಮಾಡಬೇಕಾಗಿದೆ. ಅವುಗಳ ಬಗ್ಗೆ ಮಾತುಕತೆ ಬಳಿಕ ಅಂತಿಮ ನಿರ್ಧಾರಕ್ಕೆ ಬರಬಹುದು ಎಂದು ತಿಳಿಸಿದ್ದಾರೆ.


ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಾತನಾಡಿ ಡೊನಾಲ್ಡ್ ಟ್ರಂಪ್ ಜೊತೆ ನಡೆದ ಮಾತುಕತೆ ಫಲಪ್ರದವಾಗಿಲ್ಲ, ಉಕ್ರೇನ್ ಜೊತೆ ಹಲವು ಸಮಸ್ಯೆಗಳಿವೆ ಅವುಗಳನ್ನು ಬಗೆಹರಿಸಿಕೊಳ್ಳುವ ತನಕ ಕದನ ವಿರಾಮ ಜಾರಿ ಇಲ್ಲ ಎನ್ನುವುದನ್ನು ಅಮೇರಿಕಾ ಅಧ್ಯಕ್ಷರಿಗೆ ತಿಳಿಸಿರುವುದಾಗಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಉಭಯ ದೇಶಗಳ ನಡುವೆ ಕದನ ವಿರಾಮದ “ಪರಿಹಾರಕ್ಕಾಗಿ ನಡೆದ ಆರಂಭಿಕ ಹಂತ” , ರಷ್ಯಾ ಮತ್ತು ಉಕ್ರೇನ್ ನಡುವೆ ಸಂಘರ್ಷ ನಡೆಯುತ್ತಿರುವುದು “ದುರಂತ” ಎಂದು ತಿಳಿಸಿದ್ದಾರೆ.


ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಜೊತೆ ಮಾತನಾಡಿಲ್ಲ ಆದರೆ ಯುರೋಪಿಯನ್ ನಾಯಕರೊಂದಿಗೆ ಶೀಘ್ರದಲ್ಲೇ ಅವರನ್ನು ಭೇಟಿ ಮಾಡುವ ನಿರೀಕ್ಷೆ ಇದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.