Home ಜಿಲ್ಲೆ ಕಲಬುರಗಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಕಲಬುರಗಿ,ಅ.24-ಮಣ್ಣು ಗಣಿಗಾರಿಕೆಯಿಂದ ನಿರ್ಮಾಣವಾಗಿದ್ದ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಂಚೋಳಿ ತಾಲ್ಲೂಕಿನ ಕುಂಚಾವರಂ ಸಮೀಪದ ತೆಲಂಗಾಣ ಗಡಿ ಪ್ರದೇಶದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಮೃತರನ್ನು ಕುಂಚಾವರಂ ಗ್ರಾಮದ ಅಜಯ್ (15) ಮತ್ತು ಸುರೇಂದ್ರ (15) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಹೊಂಡದ ಬಳಿ ತೆರಳಿದ್ದ ಇಬ್ಬರು ಬಾಲಕರು ನೀರಿಗಿಳಿದು ಈಜಲು ಹೋಗಿದ್ದಾರೆ ಎನ್ನಲಾಗಿದೆ. ಹೊಂಡದಲ್ಲಿ ನೀರು ಆಳವಾಗಿದ್ದರಿಂದ ಇಬ್ಬರೂ ಮುಳುಗಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿದ ಸ್ಥಳೀಯರು, ಪೆÇಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬಾಲಕರ ಶವಗಳನ್ನು ಹೊರತೆಗೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.