
ಕಲಬುರಗಿ;ಜೂ.14: ತಾಂತ್ರಿಕ ಸ್ಪರ್ಧೆಗಳು ಮತ್ತು ಉತ್ಸವಗಳನ್ನು ನಿಯಮಿತವಾಗಿ ಆಯೋಜಿಸುವುದರಿಂದ, ವಿದ್ಯಾರ್ಥಿಗಳಲ್ಲಡಗಿರುವ ಪ್ರತಿಭೆಗಳನ್ನು ಬಹಿರಂಗಪಡಿಸಲು ಮತ್ತು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಹಾಗೂ ಶಿಸ್ತಿನ ಮನೋಭಾವವನ್ನು ಅಳವಡಿಸಿಕೊಳ್ಳಲು ಪರಿಪೂರ್ಣ ಅವಕಾಶವನ್ನು ಒದಗಿಸಿದಂತಾಗುತ್ತದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ್ ಹೇಳಿದರು.
ಕಲಬುರಗಿ ನಗರದ ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ಶನಿವಾರದಂದು, ಈ ಹಿಂದೆ ಅಪ್ಪಾ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಎಂದು ಕರೆಯಲ್ಪಡುತ್ತಿದ್ದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗ ಆಯೋಜಿಸಿದ್ದ 2 ದಿನಗಳ ತಾಂತ್ರಿಕ-ಸಾಂಸ್ಕೃತಿಕ “ಅವಿರತ್” ಉತ್ಸವವನ್ನು ಉದ್ಘಾಟಿಸಿದ ಶ್ರೀ ದೇಶಮುಖ್, ವಿಶ್ವವಿದ್ಯಾಲಯವು ಇಂತಹ ಸ್ಪರ್ಧೆಗಳನ್ನು ನಿಯಮಿತವಾಗಿ ಆಯೋಜಿಸುತ್ತಿರುವುದು ಶರಣಬಸವ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಇತರ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸಿರುವುದು ತಿಳಿದು ಅತೀವ ಸಂತೋಷವಾಗಿದೆ ಎಂದು ಹೇಳಿದರು.
ಸ್ಪರ್ಧೆಗಳು ತಾಂತ್ರಿಕ ಅಂಶಕ್ಕೆ ಮಾತ್ರ ಸೀಮಿತವಾಗಿಲ್ಲ, ಸಾಂಸ್ಕೃತಿಕ ಇತರ ಕಾರ್ಯಕ್ರಮಗಳು ಸೇರಿದಂತೆ ತಮ್ಮ ವೈವಿಧ್ಯಮಯ ಪ್ರತಿಭೆಗಳನ್ನು ಪ್ರದರ್ಶಿಸಲು ಅವಕಾಶವನ್ನು ಒದಗಿಸಲಾಗಿದೆ ಎಂದು ಶ್ರೀ ದೇಶಮುಖ್ ಹೇಳಿದರು.
ವಿಶ್ವವಿದ್ಯಾಲಯದ ಉಪಕುಲಪತಿ ಪೆÇ್ರ. ಅನಿಲಕುಮಾರ ಬಿಡವೆ ತಮ್ಮ ಅಧ್ಯಕೀಯ ಭಾಷಣದಲ್ಲಿ, ವಿದ್ಯಾರ್ಥಿಗಳು ಇಂತಹ ತಾಂತ್ರಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಶಿಸ್ತು, ಸಮಯಪ್ರಜ್ಞೆ ಮತ್ತು ಸ್ಪರ್ಧಾತ್ಮಕ ಸ್ವಭಾವವನ್ನು ಮೈಗೂಡಿಸಿಕೊಳ್ಳುತ್ತಾರೆ ಎಂದು ಹೇಳಿದರು. ಅದೇ ರೀತಿ ಇಂತಹ ಸ್ಪರ್ಧೆಗಳು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಸಂಬಂಧಗಳು ಮತ್ತು ಒಡನಾಟವನ್ನು ಬೆಳೆಸಲು ಸಹಾಯ ಮಾಡುತ್ತವೆ ಹಾಗೂ ಅವರ ಅನುಭವಗಳನ್ನು ಹಂಚಿಕೊಳ್ಳಲು ಮತ್ತು ಬಾಂಧವ್ಯವನ್ನು ಬೆಳೆಸಲು ಅವಕಾಶವನ್ನು ಒದಗಿಸಿತ್ತವೆ ಎಂದರು.
ಈ ಉತ್ಸವದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಮತ್ತು ಅವರ ಕೌಶಲ್ಯಗಳನ್ನು ಸುಧಾರಿಸಲು ಅವಕಾಶವನ್ನು ಪಡೆಯುತ್ತಾರೆ. ತಾಂತ್ರಿಕ-ಸಾಂಸ್ಕೃತಿಕ ಉತ್ಸವದ ಭಾಗವಾಗಿ ಅನೇಕ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ ಎಂದು ಗಮನಿಸಿ ಸಂತೋಷವಾಗಿದೆ ಮತ್ತು ವಿದ್ಯಾರ್ಥಿಗಳು ಕ್ರೀಡಾ ಮತ್ತು ಹಬ್ಬದ ವಾತಾವರಣದಲ್ಲಿ ಎರಡು ದಿನಗಳ ಸ್ಪರ್ಧೆಗಳನ್ನು ಆನಂದಿಸುತ್ತಾರೆ ಎಂದು ಆಶಿಸಿದರು.
ವಿಶ್ವವಿದ್ಯಾಲಯದ ಕುಲಸಚಿವ ಡಾ. ಎಸ್. ಜಿ. ಡೊಳ್ಳೇಗೌಡರ್ ತಮ್ಮ ಭಾಷಣದಲ್ಲಿ, ಇಂತಹ ಸ್ಪರ್ಧೆಗಳು ತಮ್ಮ ವಿವೇಕವನ್ನು ಬಳಸಿಕೊಳ್ಳಲು ಮತ್ತು ಎಲ್ಲಾ ಪ್ರಯತ್ನಗಳಲ್ಲಿ ಪರಿಪೂರ್ಣತೆಯನ್ನು ಸಾಧಿಸಲು ಅವಕಾಶವನ್ನು ಒದಗಿಸುತ್ತವೆ. ಈ ಸ್ಪರ್ಧೆಯು ವಿದ್ಯಾರ್ಥಿಗಳ ಸಮಯ ನಿರ್ವಹಣಾ ಕೌಶಲ್ಯಗಳನ್ನು ಉತ್ತಮಗೊಳಿಸಲು ಮತ್ತು ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಅವಕಾಶವನ್ನು ಒದಗಿಸುತ್ತದೆ ಎಂದು ಹೇಳಿದರು.
ಎರಡು ದಿನಗಳ ಕಾಲ ನಡೆಯುವ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಹ್ಯಾಕಥಾನ್, ರೋಬೋಟ್ ರೇಸ್, ಪ್ರಾಜೆಕ್ಟ್ ಎಕ್ಸ್‍ಪೆÇೀ, ಕ್ಯಾಡ್-ವಾರ್, ಟೆಕ್-ಟೈಟಾನ್, ಸ್ವರ-ಸಂಗಮ, ನೃತ್ಯಸಂಗಮ, ಸ್ಟ್ಯಾಂಡ್‍ಅಪ್ ಕಾಮಿಡಿ ಮತ್ತು ಛಾಯಾಗ್ರಹಣದಂತಹ ತಾಂತ್ರಿಕ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ಪರೀಕ್ಷಿಸಿಕೊಳ್ಳಲಿದ್ದಾರೆ.
ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಡಾ. ಎಸ್. ಎಚ್. ಹೊನ್ನಳ್ಳಿ, ಡೀನ್ ಡಾ. ಲಕ್ಷ್ಮಿ ಪಾಟೀಲ್ ಮಾಕಾ, ಹಣಕಾಸು ಅಧಿಕಾರಿ ಡಾ. ಕಿರಣ್ ಮಾಕಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಉದ್ಘಾಟನೆ ಕಾರ್ಯಕ್ರಮದಲ್ಲಿ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗದ ಡೀನ್ ಡಾ. ಶಿವಕುಮಾರ ಜವಳಿಗಿ ಸ್ವಾಗತಿಸಿದರು ಮತ್ತು ಇಸಿಇ ವಿಭಾಗದ ಚೇರಪರ್ಸನ್ ಡಾ. ಶಶಿಧರ್ ಸೊನ್ನಾದ ವಂದಿಸಿದರು.