
ಕಲಬುರಗಿ: ಫೆ 25:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಕಲ್ಯಾಣ ಕರ್ನಾಟಕ ಪ್ರದೇಶದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋ (ಖಉPಖ) ಗಳಿಗಾಗಿ ಫೆಬ್ರವರಿ 20 ಹಾಗೂ 21 ರಂದು ಆಯೋಜಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮವು ಕಲಬುರಗಿ ಜಿಲ್ಲಾ ಪಂಚಾಯತ್ ಹೊಸ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.
ಈ ತರಬೇತಿ ಕಾರ್ಯಕ್ರಮವು ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಟಿ.ಎಂ. ವಿಜಯ ಭಾಸ್ಕರ್ ಅವರ ಮಾರ್ಗದರ್ಶನದಲ್ಲಿ ಹಾಗೂ ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ (ಐಐಪಿಎ) – ಕರ್ನಾಟಕ ಪ್ರಾದೇಶಿಕ ಶಾಖೆ ಹಾಗೂ ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ ಕಲಬುರಗಿ ಸ್ಥಳೀಯ ಶಾಖೆ ಇವುಗಳ ಸಹಯೋಗದಲ್ಲಿ ಆಯೋಜಿಸಲಾಗಿತ್ತು.
ಗ್ರಾಮ ಪಂಚಾಯಿತಿ ಆಡಳಿತ, ನೀರು ಸರಬರಾಜು, ಘನ ತ್ಯಾಜ್ಯ ನಿರ್ವಹಣೆ, ಉಪ ಸಮಿತಿಗಳು, ಮಕ್ಕಳ, ಮಹಿಳಾ ಮತ್ತು ಅಂಗವಿಕಲ ವ್ಯಕ್ತಿಗಳ ಉದ್ದೇಶಿತ ಆಯವ್ಯಯ ಮತ್ತು ಪಂಚಾಯಿತಿಗಳಿಗೆ ಸಂಬಂಧಿಸಿದ ತಂತ್ರಾಂಶಗಳ ಒಳಗೊಂಡ ವಿಷಯಗಳ ಕುರಿತು ತಜ್ಞರು ಉಪನ್ಯಾಸ ನೀಡಿದರು. ಈ ತರಬೇತಿ ಕಾರ್ಯಕ್ರಮವು ಫೆಲೋಗಳ ಸಾಮಥ್ರ್ಯವರ್ಧನೆಗೆ ಹಾಗೂ ಪರಿಣಾಮಕಾರಿ ಕ್ಷೇತ್ರ ಕಾರ್ಯಾಚರಣೆಗೆ ದಾರಿಯಾಯಿತು.
ಈ ತರಬೇತಿ ಕಾರ್ಯಕ್ರಮದಲ್ಲಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತ ಉಮಾಮಾದೇವನ್, ಎನ್.ಜಿ.ಎಮ್.ಎ. (ಓಉಒಂ) ನಿರ್ದೇಶಕರಾದ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಶಿಂದೆ, ಕಾರವಾರ ಜಿಲ್ಲಾ ಪಂಚಾಯತ್ ಸಿಇಓ ಡಾ. ದಿಲೀಷ ಶಶಿ ಅವರು ವಿಡಿಯೋ ಸಂವಾದದ ಮೂಲಕ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ ಮತ್ತು ವಿವಿಧ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ತಜ್ಞರುಗಳು ಶಿಬಿರಾರ್ಥಿಗಳಿಗೆ ಉಪನ್ಯಾಸ ನೀಡಿದರು.
ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ನಳಿನ್ ಅತುಲ್ ಅವರು ಭಾಗವಹಿಸಿ ಮಾತನಾಡಿದರು.



























