
ಬೀದರ್,ಜೂ.೧೨- ಮನೆಯಲ್ಲಿ ಊಟದ ನಂತರ ಮಾವು ತಿಂದ ಇಬ್ಬರು ಸಹೋದರಿಯರು ತೀವ್ರವಾಗಿ ಅಸ್ವಸ್ಥಗೊಂಡ ಇಬ್ಬರನ್ನು ಹೈದರಾಬಾದ್‌ನ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಔರಾದ್ ತಾಲೂಕಿನ ಶೆಂಬಳ್ಳಿ ಗ್ರಾಮದ ನಿವಾಸಿಗಳಾದ ಭವಾನಿ ವೈಜಿನಾಥ್ ಮೈತ್ರೆ (೧೭) ಮತ್ತು ಸಂಧ್ಯಾರಾಣಿ ಮೈತ್ರೆ (೧೪) ಎನ್ನಲಾಗಿದೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಶೆಂಬಳ್ಳಿ ಗ್ರಾಮದ ಇಂದುಮತಿ ಮತ್ತು ಅವರ ಮೂವರು ಹೆಣ್ಣುಮಕ್ಕಳು ಮನೆಯಲ್ಲಿ ಊಟದ ನಂತರ ಮಾವು ಸೇವಿಸಿದ್ದು. ಮಾವು ತಿಂದ ತಕ್ಷಣ, ತಾಯಿ ಮತ್ತು ಮೂವರು ಹೆಣ್ಣುಮಕ್ಕಳು ತೀವ್ರ ವಾಂತಿ ಮತ್ತು ಅತಿಸಾರದಿಂದ ಬಳಲಿದ್ದಾರೆ ಕುಟುಂಬ ಸದಸ್ಯರು ತಕ್ಷಣ ಎಲ್ಲರನ್ನೂ ಚಿಕಿತ್ಸೆಗಾಗಿ ಹೈದರಾಬಾದ್‌ನ ನಾರಾಯಣ್ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಆದಾಗ್ಯೂ, ಭವಾನಿ ಮತ್ತು ಸಂಧ್ಯಾರಾಣಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಅವರ ಸಹೋದರಿ ವಿಜಯಶ್ರೀ ಮತ್ತು ತಾಯಿ ಇಂದುಮತಿ ಅವರ ಸ್ಥಿತಿಯೂ ಗಂಭೀರವಾಗಿದ್ದು, ಅವರು ಪ್ರಸ್ತುತ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾರ್ವಜನಿಕರಲ್ಲಿ ಮನವಿ: ಮಾರುಕಟ್ಟೆಯಲ್ಲಿ ಲಭ್ಯವಿರುವ ಮಾವಿನ ಹಣ್ಣುಗಳನ್ನು ರಾಸಾಯನಿಕಗಳನ್ನು ಬಳಸಿ ಹಣ್ಣಾಗಿಸುವ ಸಾಧ್ಯತೆ ಇರುವುದರಿಂದ ಅವುಗಳನ್ನು ತಿನ್ನುವ ಮೊದಲು ಚೆನ್ನಾಗಿ ತೊಳೆದು ಹಣ್ಣನ್ನು ಸೇವನೆ ಮಾಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

























