
ಚಿತ್ತಾಪುರ; ತಾಲೂಕಿನ ಬೆಳಗುಂಪಾ ಗ್ರಾಮದ ಸಮೀಪದಲ್ಲಿರುವ ಹಳ್ಳದ ಮೇಲಿಂದ ದ್ವಿಚಕ್ರ ವಾಹನದೊಂದಿಗೆ ಬಿದ್ದು ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತ ಪಟ್ಟಿರುವ ಘಟನೆ ಜರುಗಿದೆ.
ವಿಶ್ವರಾಧ್ಯ ಸಾಬಣ್ಣ ಸಂಗಾವಿ 35 ಮೃತಪಟ್ಟ ದುರ್ದೈವಿ. ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಇವಣಿ ಕಡೆಯಿಂದ ಸ್ವಂತ ಗ್ರಾಮ ಬೆಳಗುಂಪಾಗೆ ಹೋಗುತ್ತಿದ್ದಾಗ ಈ ಘಟನೆ ಜರುಗಿದೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸಿಪಿಐ ಜಗದೇವಪ್ಪ ಪಾಳಾ, ಪಿಎಸ್’ಐ ಗೌತಮ್, ಸಿಬ್ಬಂದಿಗಳಾದ ವೀರಶೆಟ್ಟಿ, ಸಂತೋಷ, ಬಸವಣ್ಣ ಅವರು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದರು.
ಈ ಕುರಿತು ಮಾಡಬೂಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.































