
ಜಮಖಂಡಿ, ಜೂ 19:ಜಮಖಂಡಿ ನಗರದ ಸ್ಕೈ ಬಾರ್ ಸಮೀಪದಲ್ಲಿರುವ ಪಾಳುಬಿದ್ದ ರಿಲಯನ್ಸ್ ಪೆಟ್ರೋಲ್ ಬಂಕ್ ಕಚೇರಿಯಲ್ಲಿ ಗುರುತು ಪತ್ತೆಯಾಗದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಸ್ಥಳೀಯರು ಕಚೇರಿ ಕಟ್ಟಡದ ಸುತ್ತಮುತ್ತ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಪರಿಶೀಲಿಸಿದ ವೇಳೆ ಒಳಭಾಗದಲ್ಲಿ ವ್ಯಕ್ತಿಯೊಬ್ಬರ ಶವ ಕಂಡುಬಂದಿದೆ. ಇದರಿಂದ ಆತಂಕಗೊಂಡ ಸಾರ್ವಜನಿಕರು ತಕ್ಷಣವೇ ಶಹರ ಪೆÇಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಶಹರ ಪೆÇಲೀಸ್ ಠಾಣೆಯ ಪಿಎಸ್‍ಐ ಅನೀಲ ಕುಂಬಾರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಶೇಖರ ನಾಯಿಕ, ಶಿವಾನಂದ ಪಾಟೀಲ, ಲೋಕೇಶ್ ಯಳಶೆಟ್ಟಿ, ಶಂಕರ ಆಸಂಗಿ, ರಾಜು ಪೂಜೇರಿ, ಮಲ್ಲು ಕೋಲಾರ ಹಾಗೂ ಸದಾಶಿವ ತೇಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪೆÇಲೀಸರು ಸ್ಥಳ ಮಹಜರು ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ವ್ಯಕ್ತಿಯ ಗುರುತು ಹಾಗೂ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಈ ಸಂಬಂಧ ಶಹರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆ ಹಾಗೂ ಸಾವಿನ ಕಾರಣದ ಕುರಿತು ಪೆÇಲೀಸರು ತನಿಖೆ ಮುಂದುವರಿಸಿದ್ದಾರೆ. ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ.






















