
ಕೆ.ಆರ್.ಪುರ,ಅ.೬-ಕೆ.ಆರ್.ಪುರ ಕ್ಷೇತ್ರದಲ್ಲಿ ಸಂಚಾರ ದಟ್ಟಣೆ ಸಮಸ್ಯೆಪರಿಹರಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಬೈರತಿ ಬಸವರಾಜ ವಿಫಲಾಗಿದ್ದಾರೆ ಎಂದು ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಮೋಹನ್ ಅವರು ಆರೋಪಿಸಿದರು.
ಕ್ಷೇತ್ರದ ದೇವಸಂದ್ರದ ಗೃಹಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮೂರು ಬಾರಿ ಶಾಸಕ ಹಾಗೂ ಒಂದು ಬಾರಿ ಸಚಿವರಾದರೂ ಒಂದು ಮೇಲ್ ಸೇತುವೆ ಸೇರಿದಂತೆ ಶಾಶ್ವತ ಯೋಜನೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಂಸದರಾಗಿ ಇದ್ದರು ಸಹ ಶಾಶ್ವತ ಯೋಜನೆಗಳಿಗೆ ಅನುದಾನ ತರಲು ವಿಫಲರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಶೇಷಮತ ಪರಿಷ್ಕರಣೆಯನ್ನು ಸಮರ್ಪಕ ವಾಗಿ ಮಾಡಲು ವಿಫಲರಾಗಿರುವ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ನಾಗೇಶ್,ಬ್ಲಾಕ್ ಅಧ್ಯಕ್ಷರಾದ ಸಿ.ವೆಂಕಟೇಶ್,ಅರುಳಪ್ಪ,ಕೊದಂಡರಾಮ ಗ್ಯಾರಂಟಿ ಅಧ್ಯಕ್ಷ ಜಯರಾಮ್ ಇದ್ದರು.






















