
ಅಥಣಿ :ಸೆ.25: ತಾಲೂಕಿನ ಪಾರ್ಥನಹಳ್ಳಿ ಗ್ರಾಮದಲ್ಲಿರುವ ಉರ್ದು ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಯಾಗಿ ಉನ್ನತೀಕರಿಸಲು ಸರ್ಕಾರದ ಮಟ್ಟದಲ್ಲಿ ಸತತವಾಗಿ ಪ್ರಯತ್ನ ಮಾಡಿದ ಶಾಸಕ ಲಕ್ಷ್ಮಣ ಸವದಿ ಅವರನ್ನು ಗ್ರಾಮದ ಮುಸ್ಲಿಂ ಸಮಾಜದ ಮುಖಂಡರು ಸತ್ಕರಿಸಿ ಅಭಿನಂದಿಸಿದರು. ಗ್ರಾಮದಲ್ಲಿ ಪ್ರೌಢಶಾಲೆ ಮಂಜೂರಾಗಿರುವುದರಿಂದ ಗ್ರಾಮದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಉತ್ತಮ ಶಿಕ್ಷಣ ದೊರೆಯಲು ಅನುಕೂಲವಾಗಿದೆ ಎಂದು ಮುಖಂಡರು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಯಾವ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಪಾರ್ಥನಹಳ್ಳಿ ಗ್ರಾಮದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಈ ಶಾಲೆಯ ಉನ್ನತೀಕರಣ ಅಗತ್ಯವಾಗಿತ್ತು. ಈ ಭಾಗದಲ್ಲಿ ಶಿಕ್ಷಣವನ್ನು ಇನ್ನಷ್ಟು ಸುಲಭ ಮತ್ತು ಗುಣಮಟ್ಟದಿಂದ ಒದಗಿಸುವ ನಿಟ್ಟಿನಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಮಾಜದ ಎಲ್ಲ ವರ್ಗದ ಜನರಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ನನ್ನ ಆದ್ಯತೆ” ಎಂದರು.
ಈ ವೇಳೆ ಮುಖಂಡರಾದ ರಫೀಕ್ ಪಟೇಲ್, ಐನುದ್ದೀನ್ ಬಿರಾದಾರ, ಗ್ರಾಮ ಪಂಚಾಯತ್ ಅಧ್ಯಕ್ಷ ಷರೀಫ್ ಮುಲ್ಲಾ, ಇಲಾಹಿ ಮೋಳೆ, ಇಲಾಹಿ ಬಿರಾದಾರ, ಇಸ್ಮಾಯಿಲ್ ಪಟೇಲ್, ಶಿಕಂದರ್ ಪಟೇಲ್, ತಾಜುದ್ದೀನ್ ಬಿರಾದಾರ, ರಫೀಕ್ ಬಿರಾದಾರ, ರಮೇಶ್ ಕಾಂಬಳೆ, ಅಷ್ಫಾಕ್ ಬಿರಾದಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.