
ಕೋಲಾರ: ೫-ಬಿಜೆಪಿ ಪಕ್ಷದ ಸಾಧನೆಗಳನ್ನು ಮತ್ತು ನರೇಂದ್ರ ಮೋದಿಯವರ ೧೨ ವರ್ಷಗಳ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸಲು ಪಕ್ಷದಿಂದ ಸರಳ ಆಪ್ ಬಳಸುತ್ತಿದೆ. ಈ ಅಪ್ಲಿಕೇಶನ್ ಅನ್ನು ಪ್ರತಿಯೊಬ್ಬರೂ ಬಳಸುವ ಮೂಲಕ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಸರ್ಕಾರದ ಜನಪರ ಯೋಜನೆಗಳ ವಿವರಗಳನ್ನು ನೇರವಾಗಿ ತಿಳಿಯಬಹುದಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ತಿಳಿಸಿದರು.
ನಗರದ ಹೊರವಲಯದ ಜಿಲ್ಲಾ ಬಿಜೆಪಿ ಪಕ್ಷದ ಕಛೇರಿಯಲ್ಲಿ ಶನಿವಾರ ನಡೆದ ಜಿಲ್ಲಾ ರೈತ ಮೋರ್ಚಾ ಪದಾಧಿಕಾರಿಗಳ ಹಾಗೂ ಮಂಡಲ ಅಧ್ಯಕ್ಷರ ಸಭೆಯಲ್ಲಿ ಮಾಹಿತಿ ನೀಡಿದ ಅವರು ಬಿಜೆಪಿ ಪಕ್ಷವು ರಾಷ್ಟ್ರೀಯ ಅಧ್ಯಕ್ಷರಿಂದ ಬೂತ್ ಮಟ್ಟದ ಸಾಮಾನ್ಯ ಕಾರ್ಯಕರ್ತರಿಗೂ ಮಾಹಿತಿ ತಲುಪಿಸುವ ಉದ್ದೇಶದಿಂದ ಈ ಆಫ್ ಬಳಸಬೇಕು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಜೊತೆಗೆ ಮಾಹಿತಿ ಕೊರತೆ ಇರುವವರಿಗೂ ಮಾಹಿತಿ ರವಾನಿಸುವ ಜವಾಬ್ದಾರಿ ನಮ್ಮ ರೈತ ಮೋರ್ಚಾ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಮೇಲಿದೆ ಎಂದರು.
ದೇಶಾದ್ಯಂತ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದ್ದು ಪಕ್ಷದ ವತಿಯಿಂದ ನೇಮಕವಾಗಿರುವ, ಬಿಎಲ್‌ಓ ೨ ಎಸ್‌ಐಆರ್ ಅರ್ಜಿ ಪಡೆದು ಎಲ್ಲ ಮತದಾರರು ಗಣತಿ ನಮೂನೆ ಭರ್ತಿ ಮಾಡಿ ಸಹಿ ಮಾಡಿಸಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾನದಿಂದ ವಂಚಿತರಾಗದಂತೆ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು ಗಮನ ಹರಿಸಬೇಕು ಜೊತೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಲಕ್ಷ್ಮಣಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಣ್ಣ, ಉಪಾಧ್ಯಕ್ಷ ವಿಜಯ ಭಾಸ್ಕರ್ ನಾಯ್ಡು, ವಿವಿಧ ಮಂಡಲ ಅಧ್ಯಕ್ಷರು ಪದಾಧಿಕಾರಿಗಳಾದ ಲಕ್ಷ್ಮಣರೆಡ್ಡಿ, ಲಕ್ಷ್ಮೀನಾರಾಯಣ ಶೆಟ್ಟಿ, ಚಂದ್ರಶೇಖರ್, ಒಹಿಲೇಶ್, ಅಂಬರೀಶ್, ಚಂದ್ರಶೇಖರ್ ಗೌಡ, ವೇಣು, ಸತೀಶ್, ರಂಗೇಶ್, ಮುಂತಾದವರು ಇದ್ದರು.






























