ವಾಲ್ಮೀಕಿ ಜಯಂತಿ : ಪಲ್ಲಕ್ಕಿಗಳ ಮೆರವಣಿಗೆ

ಕೋಲಾರ,ಅ,೮-ನಗರದ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿ ಅನಿಲ್ ಕುಮಾರ್ ಪಲ್ಲಕ್ಕಿಗಳ ಮೆರವಣಿಗೆಯನ್ನು ಡೊಳ್ಳು ಹೊಡೆಯುವ ಮೂಲಕ ಚಾಲನೆ ನೀಡಿದರು.


ವಿವಿಧ ಇಲಾಖೆಗಳು ಹಾಗೂ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಿಂದ ಬಂದ ೫೦ಕ್ಕೂ ಹೆಚ್ಚು ಪಲ್ಲಕ್ಕಿಗಳು ಹಾಗೂ ಜಾನಪದ ಕಲಾ ತಂಡಗಳು ನೋಡುಗರ ಗಮನ ಸೆಳೆಯಿತು.


ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ, ಜಿಪಂ ಸಿಇಒ ಪ್ರವೀಣ್ ಬಾಗೇವಾಡಿ, ಎಸ್ಪಿ ಬಿ.ನಿಖಿಲ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಬಾಲಗೋವಿಂದ್, ಮಾಲೂರು ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಬೈರಂಡಹಳ್ಳಿ ನಾಗೇಶ್, ಮಂಜುಳಾ ಶ್ರೀನಿವಾಸ್, ಡಿಪಿಎಸ್ ಮುನಿರಾಜು, ಪಂಡಿತ್ ಮುನಿವೆಂಕಟಪ್ಪ, ಮೈಲಾಂಡಹಳ್ಳಿ ಮುರಳಿ, ಅಪ್ಸರ್, ಗಂಗಣ್ಣ, ಅಮರನಾಥ, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಏಜಾಜ್, ರಾಮಯ್ಯ, ವ್ಯಾಪಲಪಲ್ಲಿ ನರೇಶ್, ವಾಸು, ಸಿಂಗಹಳ್ಳಿ ಮುರಳಿ ಇದ್ದರು.