Home ಜಿಲ್ಲೆ ವಾಲ್ಮೀಕಿ ಅವರ ಆದರ್ಶ ಇಂದಿನ ಸಮಾಜಕ್ಕೆ ದಾರಿದೀಪ:ಬಿರಾದಾರ

ವಾಲ್ಮೀಕಿ ಅವರ ಆದರ್ಶ ಇಂದಿನ ಸಮಾಜಕ್ಕೆ ದಾರಿದೀಪ:ಬಿರಾದಾರ

ಮುದ್ದೇಬಿಹಾಳ : ಮಹರ್ಷಿ ವಾಲ್ಮೀಕಿ ಅವರ ಜೀವನ, ತತ್ವಾದರ್ಶಗಳು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಾಲೂಕ ಪಂಚಾಯತ ಇಒ ಸಂಗನಗೌಡ ಬಿರಾದಾರ ಹೇಳಿದರು.
ಪಟ್ಟಣದ ಪುರಸಭೆ ಸಮೀಪದ ಸೋಮವಾರ ತಾಲ್ಲೂಕು ಆಡಳಿತ, ತಾಲೂಕ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಪುರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಾಲ್ಮಿಕಿಯವರು ಜ್ಞಾನ, ಸಾಹಿತ್ಯದ ಮೂಲಕ ಜಗತ್ತಿಗೆ ಅಮೂಲ್ಯವಾದ ಕೊಡುಗೆಯನ್ನು ನೀಡಿದ್ದಾರೆ ಅವರ ಆದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿವೆ ಎಂದರು.
ಪ್ರೊ.ಗಿರೀಶ ಗುಳಗಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಅಧಿಕಾರಿ ಶ್ರೀಮತಿ ಬಸಂತಿ ಮಠ, ಪಂಚಗ್ಯಾರAಟಿ ತಾಲೂಕ ಅಧ್ಯಕ್ಷ ಶಂಕರಗೌಡ ಹಿರೇಗೌಡರ, ಮುಖಂಡ ಹರೀಶ ನಾಟೀಕಾರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಗೌರವಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್ ಬಡದಾನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಸಿಪಿಐ ಮಹಮ್ಮದ್ ಫಸಿವುದ್ದೀನ್, ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮುಖಂಡರಾದ ವಾಯ್.ಎಚ್.ವಿಜಯಕರ, ಸಿ.ಜಿ ವಿಜಯಕರ, ವಕೀಲರ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ತಿಪ್ಪಣ್ಣ ದೊಡಮನಿ, ಭಗವಂತ ಕಬಾಡೆ, ವಾಲ್ಮೀಕಿ ಸಮಾಜದ ಅಧ್ಯಕ್ಷ ಬಲಭೀಮ ನಾಯಕಮಕ್ಕಳ, ಹುಲಗಪ್ಪ ನಾಯಕಮಕ್ಕಳ, ಯಲ್ಲಪ್ಪ ನಾಯಕಮಕ್ಕಳ, ಸಂತೋಷ ನಾಯ್ಕೋಡಿ, ಮಹ್ಮದರಫಿಕ್ ಶಿರೋಳ, ರಾಮಣ್ಣ ರಾಜನಾಳ, ಹಣಮಂತ ತಿಡಗುಂದಿ, ನಿಂಗಪ್ಪ ಪೂಜಾರಿ ಸೇರಿದಂತೆ ಸಮಾಜದ ಮುಖಂಡರುಗಳು ಸರಕಾರಿ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಗವಾಯಿ ಸಂಗಮೇಶ ಶಿವಣಗಿ ಬಳಗ ವಂದೇಮಾತರA ಗೀತೆ ಹಾಡಿದರು. ಶಿಕ್ಷಕ ಟಿ.ಡಿ.ಲಮಾಣಿ ನಿರೂಪಿಸಿ ವಂದಿಸಿದರು.
ಕಾರ್ಯಕ್ರಮಕ್ಕೂ ಮೊದಲು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ನಡೆಸಲಾಯಿತು.