Home ಜಿಲ್ಲೆ ಬೆಂಗಳೂರು ’ಮನೆ ಮನೆಗೆ ವಿಬಿಜಿರಾಮ್ ಜಿ’ ಅಭಿಯಾನ

’ಮನೆ ಮನೆಗೆ ವಿಬಿಜಿರಾಮ್ ಜಿ’ ಅಭಿಯಾನ

ಕೋಲಾರ: ಸೆ.೨-ವಿಕಸಿತ ಭಾರತ ಜಿ-ರಾಮ್ ಗ್ರಾಮೀಣ ಯೋಜನೆಯ ಪರಿಣಾಮಕಾರಿ ಅನು?ನ ಹಾಗೂ ಪ್ರತಿಯೊಂದು ಗ್ರಾಮೀಣ ಕುಟುಂಬಕ್ಕೂ ಸರ್ಕಾರದ ಕೊಡುಗೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಕೋಲಾರ ಜಿಲ್ಲಾದ್ಯಂತ ’ಮನೆ ಮನೆಗೆ ವಿಬಿಜಿರಾಮ್ ಜಿ’ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈ ಮಹತ್ವಾಕಾಂಕ್ಷಿ ಅಭಿಯಾನದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಯೋಜನೆಯ ಪೂರ್ಣ ಪ್ರಯೋಜನ ಪಡೆಯಬೇಕೆಂದು ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಪ್ರವೀಣ್ ಪಿ ಬಾಗೇವಾಡಿ ಕರೆ ನೀಡಿದ್ದಾರೆ.


ಗ್ರಾಮೀಣ ಭಾಗದ ಶೋಷಿತ ಮತ್ತು ಆರ್ಥಿಕವಾಗಿ ಹಿಂದುಳಿದ ಹಾಗೂ ಸಮಾಜದ ಕಟ್ಟಕಡೆಯ ವರ್ಗಗಳಿಗೆ ಆದ್ಯತೆ ನೀಡುವ ಮೂಲಕ, ಸಾರ್ವಜನಿಕರ ಸಹಭಾಗಿತ್ವ ಹೆಚ್ಚಿಸುವುದು ಈ ಅಭಿಯಾನದ ಮುಖ್ಯ ಉದ್ದೇಶ. ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿ, ಗ್ರಾಮ ಕಾಯಕ ಮಿತ್ರರು, ಬಿಎಫ್‌ಟಿಗಳು, ಜಲಗಾರರು ಮನೆ ಮನೆಗೆ ಭೇಟಿ ನೀಡಿ, ಕರಪತ್ರ ವಿತರಣೆ ಮಾಡಬೇಕು. ಹಾಗೂ ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಹಾಕುವುದು, ಸ್ವಚ್ಛತಾ ವಾಹನಗಳಲ್ಲಿ ಆಡಿಯೋಗಳ ಪ್ರಚಾರ ಮಾಡಿ ಜಾಗೃತಿ ಮೂಡಿಸಲು ಕಡ್ಡಾಯವಾಗಿ ಶ್ರಮಿಸಬೇಕು ಎಂದು ಸಿಇಒ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.


ಗ್ರಾಮೀಣ ಪ್ರದೇಶದ ಕೊನೆಯ ವ್ಯಕ್ತಿಗೂ ವಿಬಿಜಿರಾಮ್‌ಜಿ ಯೋಜನೆಯ ಬಗ್ಗೆ ಅರಿವು ಮೂಡಿಸಲು ಸಿಬ್ಬಂದಿ ನೇರವಾಗಿ ಮನೆ ಬಾಗಿಲಿಗೆ ತೆರಳಿ ಮಾಹಿತಿ ಒದಗಿಸಬೇಕು. ಯೋಜನೆಗಳಿಂದ ವಂಚಿತರಾದ ಅರ್ಹ ಕುಟುಂಬಗಳನ್ನು ಗುರುತಿಸುವುದು. ಪ್ರತಿ ಗ್ರಾಮ ಪಂಚಾಯತಿಯಲ್ಲಿ ಜಾಬ್ ಕಾರ್ಡ್ ಮೇಳ ಹಮ್ಮಿಕೊಳ್ಳುವ ಮೂಲಕ, ಅರ್ಹ ಬಡಕುಟುಂಬಗಳಿಗೆ ಗುರತಿಸಿ, ಸ್ಥಳದಲ್ಲೇ ದಾಖಲೆಗಳನ್ನು ಪಡೆದು ನೊಂದಾಯಿಸಿ, ಉದ್ಯೋಗ ಚೀಟಿ ವಿತರಿಸಬೇಕು. ಫಾರಂ ೬ ಮೂಲಕ ಕೆಲಸಕ್ಕೆ ಬೇಡಿಕೆ ಸ್ವೀಕರಿಸಿ, ಕೂಡಲೇ ಉದ್ಯೋಗ ಒದಗಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಸುಸ್ಥಿರ ಮೂಲಸೌಕರ್ಯಗಳನ್ನು ಬಲಪಡಿಸಲು, ಜಲ ಭದ್ರತೆ, ಹಾಗೂ ಜೀವನೋಪಾಯ ಕಾಮಗಾರಿಗಳನ್ನು ಅನು?ನದ ಮೂಲಕ ನಾಗರಿಕರ ನೇರ ಸಲಹೆ ಮತ್ತು ಸಹಭಾಗಿತ್ವವನ್ನು ಉತ್ತೇಜಿಸುವುದು ಅಭಿಯಾನದ ಮುಖ್ಯ ಉದ್ದೇಶವಾಗಿದೆ.


ಕಾರ್ಯಕ್ರಮದ ಯಶಸ್ಸಿಗೆ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು(ಗ್ರಾ.ಉ) ತಾಲ್ಲೂಕು ಐಇಸಿ ಸಂಯೋಜನಕರು ನಿಯಮಿತವಾಗಿ ಗ್ರಾಮಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಬೇಕು. ಅಭಿಯಾನದ ಪ್ರಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸಬೇಕು. ಪ್ರತಿ ಗ್ರಾಮ ಪಂಚಾಯುತಿಯಲ್ಲಿ ಅಭಿಯಾನದ ಪ್ರಚಾರ ಹಾಗೂ ಅರ್ಹರಿಗೆ ಉದ್ಯೋಗ ಒದಗಿಸಿರುವ ಬಗ್ಗೆ ಹಾಗೂ ವೈಯುಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲು ಪ್ರೇರೆಪಿಸಲು, ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಲು ಸೂಚಿಸಿದ್ದಾರೆ.


ಜಲಭದ್ರತೆ, ಜೀವನೋಪಾಯ ಕಾಮಗಾರಿಗಳಿಗೆ ಒತ್ತು ವಿಬಿಜಿರಾಮ್‌ಜಿ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಭಾಗದ ಆರ್ಥಿಕ ಭದ್ರತೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಜಲಭದ್ರತೆ ಹಾಗೂ ಜೀವನೋಪಾಯ ಉತ್ತೇಜಿಸುವ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.


ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಲಭದ್ರತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ, ಕೆರೆಗಳ ಅಭಿವೃದ್ಧಿ, ನಾಲಾಗಳ ಪುನಶ್ಚೇತನ, ಗೋ ಕಟ್ಟೆ ಅಭಿವೃದ್ಧಿ, ಮಳೆನೀರು ಕೊಯ್ಲು, ಕೊಳವೆಬಾವಿ ಮರುಪೂರಣ ಘಟಕ, ಬೋಲ್ಡರ್ ಚೆಕ್, ಕಲ್ಯಾಣಿಗಳ ಜೀರ್ಣೋದ್ಧಾರ, ಚೆಕ್‌ಡ್ಯಾಂನಂತಹ ಜಲಸಂರಕ್ಷಣಾ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೆತ್ತಿಕೊಳ್ಳಬೇಕು. ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೆ ನಿರಂತರ ನೀರಿನ ಲಭ್ಯತೆ ಸಾಧ್ಯವಾಗಲಿದೆ.


ಮತ್ತೊಂದೆಡೆ, ಗ್ರಾಮೀಣ ಜನರ ಜೀವನೋಪಾಯವನ್ನು ಬಲಪಡಿಸಲು ವೈಯಕ್ತಿಕ ಆಧಾರಿತ ಕಾಮಗಾರಿಗಳಿಗೆ ಪ್ರೋತ್ಸಾಹ ನೀಡಬೇಕು. ದನದ ಶೆಡ್, ಕುರಿ/ಮೇಕೆ ಶೆಡ್, ಕೋಳಿ ಶೆಡ್, ಹಂದಿ ಶೆಡ್, ಗೊಬ್ಬರ ಘಟಕ, ಕೃಷಿಹೊಂಡ, ಬಚ್ಚಲು ಗುಂಡಿ, ವಸತಿ ಯೋಜನೆ, ಬಾವಿ ನಿರ್ಮಾಣ ನಿರ್ಮಾಣದಂತಹ ಕಾಮಗಾರಿಗಳ ಮೂಲಕ ಗ್ರಾಮೀಣ ಕುಟುಂಬಗಳು ಸ್ವಾವಲಂಬಿ ಜೀವನ ನಡೆಸಲು ಯೋಜನೆಯು ನೆರವಾಗುತ್ತಿದೆ. ಕಡ್ಡಾಯವಾಗಿ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕನಿ? ೫೦ ಕಾಮಗಾರಿಗಳು ಪ್ರಗತಿಯಲ್ಲಿದ್ದು, ೨೦೦ ಕೂಲಿಕಾರರು ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿರಬೇಕು.


ಹೊಸ ಉದ್ಯೋಗ ಖಾತ್ರಿ ಯೋಜನೆ ಸ್ಥಳೀಯವಾಗಿ ಉದ್ಯೋಗಾವಕಾಶ ಸೃಷ್ಟಿಸುವ ಜೊತೆಗೆ, ಶಾಸನಬದ್ಧ ಹಕ್ಕುಗಳ ವ್ಯಾಪ್ತಿಯಲ್ಲಿ ಮೂಲಸೌಕರ್ಯಗಳನ್ನು ವೃದ್ಧಿಸಿ ಗ್ರಾಮೀಣ ಪ್ರದೇಶದ ಒಟ್ಟಾರೆ ಅಭಿವೃದ್ಧಿಗೆ ಪೂರಕವಾಗಿದೆ. ಈ ಬಗ್ಗೆ ವಿಬಿಜಿರಾಮ್‌ಜಿ ಸಿಬ್ಬಂದಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಹೆಚ್ಚು ಗಮನ ನೀಡಿ, ಪರಿಣಾಮಕಾರಿಯಾಗಿ ಅ?ನಗೊಳಿಸಲು ಸೂಚಿಸಿದ್ದಾರೆ.


“ಗ್ರಾಮೀಣ ಭಾಗದ ಪ್ರತಿಯೊಂದು ಕುಟುಂಬಕ್ಕೂ ವಿಬಿಜಿರಾಮ್ ಜಿ ಯೋಜನೆಯಡಿ ದೊರೆಯುವ ಸೌಲಭ್ಯಗಳು ತಲುಪಬೇಕು ಹಾಗೂ ಯೋಜನೆಯ ಶಾಸನಬದ್ಧ ಹಕ್ಕುಗಳ ಕುರಿತು ಪ್ರತಿಯೊಬ್ಬರಿಗೂ ಸ್ಪ? ಅರಿವು ಮೂಡಬೇಕು ಎಂಬ ಉದ್ದೇಶದಿಂದ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಭಾಗದ ಪ್ರತಿಯೊಬ್ಬ ಅರ್ಹ ನಾಗರಿಕರು, ಸಣ್ಣ ರೈತರು ಹಾಗೂ ಕೂಲಿಕಾರರು ಈ ಅಭಿಯಾನದ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬೇಕು.


-ಡಾ.ಪ್ರವೀಣ್ ಪಿ ಬಾಗೇವಾಡಿ, ಮುಖ್ಯ ಕಾರ್ಯನಿರ್ವಹಾಕ ಅಧಿಕಾರಿಗಳು, ಕೋಲಾರ ಜಿಲ್ಲಾ ಪಂಚಾಯತ್ .