ಬೆಂಗಳೂರು, ನ.೩೦- ಹಿರಿಯನಟ, ಎಂ.ಎಸ್.ಉಮೇಶ್ ದೀರ್ಘಕಾಲದ ಅನಾರೋಗ್ಯಕ್ಕೆ ತುತ್ತಾಗಿ ಇಂದು ಬೆಳಗ್ಗೆ ೮.೩೦ಕ್ಕೆ ನಿಧನರಾಗಿದ್ದಾರೆ. ಉಮೇಶ್ ಅವರಿಗೆ ೮೦ ವರ್ಷವಾಗಿತ್ತು. ಕಳೆದ ತಿಂಗಳು ಮನೆಯಲ್ಲಿ ಕಾಲು ಜಾರಿ ಬಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಎಂಆರ್?ಐ ಹಾಗೂ ಸಿಟಿ ಸ್ಕ್ಯಾನ್ ಮಾಡಿದ ಬಳಿಕ ಲಿವರ್?ನಲ್ಲಿ ದೊಡ್ಡ ಗಾತ್ರದ ಗಡ್ಡೆ ಇರುವುದು ಪತ್ತೆಯಾಗಿತ್ತು. ಲಿವರ್ ಕ್ಯಾನ್ಸರ್ ಆಗಿ ಅದು ಬೇರೆ ಬೇರೆ ಅಂಗಗಳಿಗೆ ಹರಡಿದೆ ಎಂಬುದು ತಿಳಿದುಬಂದಿತ್ತು. ಇಂದು ಅವರು ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ. ಕಳೆದ ಕೆಲ ವರ್ಷಗಳ ಹಿಂದೆ ಉಮೇಶ್ ಅವರ ಪುತ್ರ ಅಕಾಲಮರಣಕ್ಕೀಡಾಗಿದ್ದರು.
ಮೈಸೂರು ಮೂಲದ ಉಮೇಶ್ ಚಿಕ್ಕ ವಯಸ್ಸಿನಲ್ಲೇ ರಂಗ ಭೂಮಿಗೆ ಪ್ರವೇಶ ಮಾಡಿದ್ದರು. ಉಮೇಶ್‌ರವರು ಏಪ್ರಿಲ್ ೨೨, ೧೯೪೫ ರಂದು ಮೈಸೂರಿನಲ್ಲಿ ಜನಿಸಿದರು. ಅವರ ತಂದೆ ಎ.ಎಲ್. ಶ್ರೀಕಂಠಯ್ಯ, ತಾಯಿ ನಂಜಮ್ಮ. ಅನುಸೂಯ ನಾಟಕದ ಮೂಲಕ ತೊಟ್ಟಿಲು ಕೂಸಾಗಿದ್ದಾಗಲೇ ರಂಗಪ್ರವೇಶಿಸಿದ್ದರಿಂದ ರಂಗಭೂಮಿಯತ್ತ ಒಲವು ಅವರಿಗೆ ಹುಟ್ಟಿನಿಂದಲೇ ಬಂತು. ಬಾಲ ಪಾತ್ರಗಳಲ್ಲಿ ತನ್ಮಯತೆಯಿಂದ ಅಭಿನಯಿಸುತ್ತಿದ್ದರು.ಸುಮಾರು ಆರು ದಶಕಗಳ ಕಾಲ ಕಲಾ ಸೇವೆಯಲ್ಲಿದ್ದ ಅವರು, ೫೦೦ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು.
ಗುಬ್ಬಿ ವೀರಣ್ಣ ನಾಟಕ ಕಂಪೆನಿಯಲ್ಲಿ ಬಾಲನಟನಾಗಿ ಗುರುತಿಸಿಕೊಂಡಿದ್ದರು. ಉಮೇಶ್ ಅವರಿಗಿದ್ದ ಪ್ರತಿಭೆಯನ್ನು ಗುರುತಿಸಿ ಪುಟ್ಟಣ್ಣ ಕಣಗಾಲ್ ಅವರು? ಬಿ.ಆರ್.ಪಂತಲು ಸಿನಿಮಾಗೆ ಅಪ್ರೋಚ್ ಮಾಡಿದ್ದರು. ೧೯೬೦ರಲ್ಲಿ ‘ಮಕ್ಕಳ ರಾಜ್ಯ’ ಸಿನಿಮಾದಲ್ಲಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದರು.
ಈ ಸಿನಿಮಾದಲ್ಲಿ ತಮಿಳು ನಟ ಶಿವಾಜಿ ಗಣೇಶನ್ ಅತಿಥಿ ಪಾತ್ರದಲ್ಲಿ ನಟಿಸಿದ್ರು. ನಾಗರಹೊಳೆ, ಗುರು ಶಿಷ್ಯರು, ಕಾಮಮಬಿಲ್ಲು, ಅಪೂರ್ವ ಸಂಗಮ, ಶ್ರುತಿ ಸೇರಿದಾಗ, ಮಲಯ ಮಾರುತ.. ಹೀಗೆ ಹಲವು ಹಿಟ್ ಸಿನಿಮಾಗಳಲ್ಲಿ ನಟಿಸಿದ್ದರು. ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್ ನಟನೆಯ ಹಲವು ಸಿನಿಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು. ವೆಂಕಟ ಇನ್ ಸಂಕಟ ಚಿತ್ರದಲ್ಲಿ ಅಜ್ಜಿ ಪಾತ್ರ ಮಾಡುವ ಮೂಲಕ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ್ದರು. ಇತ್ತೀಚಿನ ದಿನಗಳ ತನಕವೂ ಅವರು ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಉಮೇಶ್ ಅವರು ಅಭಿನಯಿಸಿದ್ದ ‘ಕಮಲ್ ಶ್ರೀದೇವಿ’, ‘ಐ ಆಮ್ ಗಾಡ್’ ಸಿನಿಮಾಗಳು ಇತ್ತೀಚೆಗೆ ಬಿಡುಗಡೆ ಆಗಿದ್ದವು. ಪೋಷಕ ಪಾತ್ರಗಳು ಹಾಗೂ ಹಾಸ್ಯ ಪಾತ್ರಗಳ ಮೂಲಕ ಅವರು ಜನಪ್ರಿಯತೆ ಪಡೆದಿದ್ದರು.
೩೫೦ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಉಮೇಶ್ ಅವರು ಅಭಿನಯಿಸಿದ್ದಾರೆ. ೧೯೪೫ರ ಏಪ್ರಿಲ್ ೨೪ರಂದು ಮೈಸೂರಿನಲ್ಲಿ ಜನಿಸಿದ ಅವರು ೧೯೬೦ರಲ್ಲಿ ಬಿಆರ್ ಪಂಥುಲು ನಿರ್ದೇಶನದ ‘ಮಕ್ಕಳ ರಾಜ್ಯ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದರು. ಬಳಿಕ ಹಲವಾರು ಸಿನಿಮಾಗಳಲ್ಲಿ ನಟಿಸುವ ಅವಕಾಶ ಪಡೆದುಕೊಂಡರು. ‘ನಾಗರ ಹೊಳೆ’, ‘ಗುರು ಶಿಷ್ಯರು’, ‘ಅನುಪಮಾ’, ‘ಕಾಮನ ಬಿಲ್ಲು’, ‘ಅಪೂರ್ವ ಸಂಗಮ’, ‘ಶ್ರುತಿ ಸೇರಿದಾಗ’, ‘ಹಾಲು ಸಕ್ಕರೆ’, ‘ಗೋಲ್?ಮಾಲ್ ರಾಧಾಕೃಷ್ಣ’, ‘ಮಲಯ ಮಾರುತು’, ‘ಗಜಪತಿ ಗರ್ಭಭಂಗ’ ಮುಂತಾದವು ಉಮೇಶ್ ನಟನೆಯ ಪ್ರಮುಖ ಸಿನಿಮಾಗಳು.
ರಂಗಭೂಮಿ: ಕೆ.ಹಿರಣ್ಣಯ್ಯ ಮಿತ್ರ ಮಂಡಲಿಯಲ್ಲಿ ಅ.ನ.ಕೃ. ರವರು ಬರೆದ ಜಗಜ್ಯೋತಿ ಬಸವೇಶ್ವರ ನಾಟಕದಲ್ಲಿ ಬಿಜ್ಜಳನ ಮಗನ ಪಾತ್ರ ಉಮೇಶ್ ಅವರಿಗೆ ಬುದ್ಧಿ ಬಂದ ನಂತರದ ಮೊದಲ ಅನುಭವದ ಪಾತ್ರ. ಇದಕ್ಕೆ ಮೊದಲೇ ಅವರು ಹಲವಾರು ನಾಟಕಗಳಲ್ಲಿ ಬಾಲನಟನ ಪಾತ್ರವಹಿಸಿದ್ದರು. ಗುಬ್ಬಿ ವೀರಣ್ಣನವರ ಕಂಪನಿಯಲ್ಲೂ ಅವರಿಗೆ ಬಾಲನಟನ ಪಾತ್ರಗಳು ದೊರಕಿದವು. ದಶಾವತಾರ ನಾಟಕದಲ್ಲಿ ಇವರ ಪ್ರಹ್ಲಾದನ ಪಾತ್ರದ ಅಭಿನಯವನ್ನು ಮೆಚ್ಚಿದ ಮಾಸ್ತಿಯವರು ಹತ್ತು ರೂಪಾಯಿ ಸಂಭಾವನೆ ನೀಡಿದ್ದರು. ಗುಬ್ಬಿ ವೀರಣ್ಣನವರು ಇವರು ಬಾಲ್ಯದಲ್ಲಿದ್ದಾಗ ರಂಗ ಶಿಕ್ಷಣ ಕೊಡುತ್ತ ಅಭಿನಯವನ್ನು ಕಲಿಸಿದ ಗುರುಗಳು. ಎಂ.ಸಿ.ಮಹಾದೇವ ಸ್ವಾಮಿಯವರ ಕನ್ನಡ ಥಿಯೇಟರ್ಸ್ ಕಂಪನಿಯಲ್ಲೂ ಉಮೇಶ್ ಬಾಲನಟನಾಗಿ ಪಾತ್ರವಹಿಸಿದ್ದರು.. ಉಮೇಶರಿಗೆ ನಟನೆಯ ಜೊತೆಗೆ ಹಲವಾರು ವಾದನ ಕಲೆಗಳೂ ಕರಗತವಾಗಿವೆ. ಮಾಸ್ಟರ್ ಹಿರಣ್ಣಯ್ಯನವರ ಕಂಪನಿಯಲ್ಲಿ ಪಿಯಾನೋ ವಾದಕರಾಗಿ, ಕುಂಚಕಲಾವಿದರಾಗಿ, ಎನ್. ಶ್ರೀಕಂಠ ಮೂರ್ತಿಗಳ ನಾಟಕ ಕಂಪನಿಯಲ್ಲಿ ಹಾರ್ಮೋನಿಯಂ ವಾದಕರಾಗಿ ಹಾಡುಗಾರರಾಗಿ ಉಮೇಶ್ ಖ್ಯಾತಿ ಗಳಿಸಿದ್ದರು.
ಪ್ರಶಸ್ತಿಗಳು: ಕಥಾಸಂಗಮ ಎಂಬ ಮೂರು ಕಥಾನಕಗಳ ಚಿತ್ರವಾದ ಮುನಿತಾಯಿಯಲ್ಲಿ ’ತಿಮ್ಮರಾಯಿ’ ಪಾತ್ರಕ್ಕೆ ಉತ್ತಮ ಪೋಷಕನಟ ಪ್ರಶಸ್ತಿ, ೧೯೯೪ಲ್ಲಿ ನಾಟಕ ಅಕಾಡಮಿ ಪ್ರಶಸ್ತಿ, ೧೯೯೭ರಲ್ಲಿ ಮಹಾನಗರ ಪಾಲಿಕೆ ಪ್ರಶಸ್ತಿ. ಆತ್ಮಚರಿತ್ರೆ ‘ಬಣ್ಣದ ಘಂಟೆ’ಗೆ ವಿಶ್ವೇಶ್ವರಯ್ಯ ಪ್ರತಿಷ್ಠಾನ ಪ್ರಶಸ್ತಿ ಮುಂತಾದ ಹಲವಾರು ಗೌರವಗಳು ಉಮೇಶರನ್ನು ಅರಸಿಬಂದಿವೆ. ಉಮೇಶರ ಐದು ದಶಕಗಳ ಚಿತ್ರರಂಗದಲ್ಲಿನ ಕಾಯಕವನ್ನು ಚಿತ್ರರಂಗವು ಗೌರವಿಸಿತು.
ಉಮೇಶ್ ಹಲವಾರು ಪತ್ರಿಕೆಗಳ ಅಂಕಣ ಬರಹಗಾರ ಕೆಲಸ ಮಾಡಿದ್ದಾರೆ.. ಅಮ್ಮಾವರ ಆಜ್ಞೆ, ಎಲ್ಲರೂ ನಮ್ಮವರೇ ಉಮೇಶರು ರಚಿಸಿದ ನಾಟಕಗಳು. ಕಿರುತೆರೆಗೆ ಬರೆದು ನಿರ್ದೇಶಿಸಿದ್ದು ನಮ್ಮೂರಲ್ಲೊಂದು ನಾಟಕ, ಸಮಸ್ಯೆಯ ಸರಮಾಲೆ, ರಿಜಿಸ್ಟರ್ ಫೋಸ್ಟ್, ಅಂಚು-ಸಂಚು, ಗೌಡತಿ ಗೌರಮ್ಮ, ಸಂಸಾರದಲ್ಲಿ Sಔಒಇಕ್ರಾಂತಿ, ಜೋಕ್ಸ್‌ಫಾಲ್ಸ್, ಗಲಿಬಿಲಿ ಸಂಸಾರ ಮುಂತಾದುವು.
ಅಂತ್ಯಕ್ರಿಯೆ: ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ ಉಮೇಶ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಅವರ ನಿವಾಸದ ಬಳಿ ಇರಿಸಲಾಗಿತ್ತು. ೧೨.೩೦ರ ಬಳಿಕ ರವೀಂದ್ರ ಕಲಾಕ್ಷೇತ್ರದ ಬಳಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಸಂಜೆ ವೇಳೆಗೆ ನಗರದ ವಿಲ್ಸನ್ ಗಾರ್ಡನ್ ನಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲಾಗುವುದೆಂದು ಕುಟುಂಬ ಮೂಲಗಳು ತಿಳಿಸಿವೆ.


























