ಬಾಲಕನ ಬೈಕ್ ಸವಾರಿ ವಿಡಿಯೋ ವೈರಲ್

ಬೆಂಗಳೂರು,ಜ.೨೪- ಬೆಂಗಳೂರಿನಲ್ಲಿ ಪುಟ್ಟ ಬಾಲಕನೊಬ್ಬ ಆರ್‌ಎಕ್ಸ್ ಬೈಕ್ ಸವಾರಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಬೆಂಗಳೂರು ಪೊಲೀಸರ ಕಾರ್ಯವೈಖರಿಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
bhevin_simha ಎಂಬ ಇನ್‌ಸ್ಟಾಗ್ರಾಮ್ ಖಾತೆಯಿಂದ ಕೆಲವು ವೀಡಿಯೊಗಳು ವೈರಲ್ ಆಗಿದ್ದು, ಅದರಲ್ಲಿ ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಬಾಲಕನಿಗೆ ಆಕ್ಸಿಲರೇಟರ್ ಜೋರಾಗಿ ಹೊಡೆಯಲು ಹೇಳುತ್ತಿರುವುದು ಕಂಡುಬರುತ್ತದೆ. ಈ ಅಪಾಯಕಾರಿ ದೃಶ್ಯವನ್ನು ಒಂದು ವರ್ಷದ ಹಿಂದೆ ಚಿತ್ರೀಕರಿಸಲಾಗಿದ್ದು, ಬೆಂಗಳೂರು ಪೊಲೀಸರ ಗಮನಕ್ಕೆ ಬಂದಿಲ್ಲ ಎಂಬುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂತಹ ವಿಡಿಯೋಗಳು ಸಾಮಾನ್ಯವಾಗಿದೆ. ಮಗುವಿಗೆ ಬೈಕ್ ನೀಡುವ ಮೂಲಕ ಸಮಾಜಕ್ಕೆ ಕೆಟ್ಟ ಸಂದೇಶ ರವಾನಿಸುತ್ತಿರುವ ಈ ವ್ಯಕ್ತಿಯ ವಿರುದ್ಧ ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.