Home ಜಿಲ್ಲೆ ವಿಜಯಲಕ್ಷ್ಮಿಗೆ ಒಲಿದ ಬಂಜಾರಾ ಅಕಾಡೆಮಿ ವಾರ್ಷಿಕ ಪ್ರಶಸ್ತಿ

ವಿಜಯಲಕ್ಷ್ಮಿಗೆ ಒಲಿದ ಬಂಜಾರಾ ಅಕಾಡೆಮಿ ವಾರ್ಷಿಕ ಪ್ರಶಸ್ತಿ

ಬೀದರ:ಮಾ.25: ಬಸವಕಲ್ಯಾಣ ತಾಲೂಕಿನ ಹಾರಕೂಡ ತಾಂಡಾದ ಬಂಜಾರಾ ನೃತ್ಯ ಕಲಾವಿದೆ ವಿಜಯಲಕ್ಷ್ಮಿ ಅವರಿಗೆ ಬಂಜಾರಾ ಸಂಸ್ಕøತಿ ಹಾಗೂ ಭಾಷಾ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಒಲಿದು ಬಂದಿದೆ. ಮಾ. 27 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ರೂ. 25 ಸಾವಿರ ನಗದು ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಿದ್ದಾರೆ ಎಂದು ಅಕಾಡೆಮಿ ಅಧ್ಯಕ್ಷ ಡಾ. ಮೋತಿಲಾಲ್ ಚವ್ಹಾಣ ಆದೇಶ ಹೊರಡಿಸಿದ್ದಾರೆ ಎಂದು ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಡಾ. ರಾಜಕುಮಾರ ಹೆಬ್ಬಾಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು ವಿಜಯಲಕ್ಷ್ಮಿ ಅವರು ಕಳೆದ ಹಲವು ದಶಕಗಳಿಂದ ಬಂಜಾರಾ ನೃತ್ಯ, ಭಜನೆ, ನಾಟಕಗಳನ್ನು ಮಾಡುತ್ತ ಅಪ್ರತಿಮ ಸೇವೆ ಸಲ್ಲಿಸಿದ್ದಾರೆ. ಅವರ ಈ ಪ್ರಶಸ್ತಿಗೆ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ಜಗನ್ನಾಥ ಹೆಬ್ಬಾಳೆ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಲ್ಲಮ್ಮ ಸಂತಾಜಿ, ಭಾಲ್ಕಿ ತಾಲೂಕಾಧ್ಯಕ್ಷೆ ಆಶಾ ರಾಠೋಡ, ಪ್ರಮುಖರಾದ ಪೆÇ್ರ. ಎಸ್.ಬಿ.ಬಿರಾದಾರ, ನಿಜಲಿಂಗಪ್ಪ ತಗಾರೆ, ಡಾ. ಸುನಿತಾ ಕೂಡ್ಲಿಕರ್, ಡಾ.ಸಾವಿತ್ರಿಬಾಯಿ ಹೆಬ್ಬಾಳೆ, ಎಸ್.ಬಿ.ಕುಚಬಾಳ, ಶಿವಶರಣಪ್ಪ ಗಣೇಶಪುರ, ಮಹಾರುದ್ರ ಡಾಕುಳಗೆ ಸೇರಿದಂತೆ ಕರ್ನಾಟಕ ಸಾಹಿತ್ಯ ಸಂಘ, ಕರ್ನಾಟಕ ಜಾನಪದ ಪರಿಷತ್ತು, ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಸಂಘ, ಕದಂಬ ಸೇನೆ, ಕರುಣಾಮಯ ಯುವಕ ಸಂಘದ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.