Home ಕ್ರೈಂ ಸುದ್ದಿಗಳು ವಿಜಯಪುರ ಪೊಲೀಸರ ಭರ್ಜರಿ ಬೇಟೆ: 1.60 ಕೋಟಿ ರೂ. ಮೌಲ್ಯದ ಸ್ವತ್ತು ಜಪ್ತಿ:ಎಸ್ಪಿ ನಿಂಬರಗಿ

ವಿಜಯಪುರ ಪೊಲೀಸರ ಭರ್ಜರಿ ಬೇಟೆ: 1.60 ಕೋಟಿ ರೂ. ಮೌಲ್ಯದ ಸ್ವತ್ತು ಜಪ್ತಿ:ಎಸ್ಪಿ ನಿಂಬರಗಿ

ವಿಜಯಪುರ, ಏ. 25: ನಗರ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಹಲವಾರು ಪ್ರಕರಣಗಳನ್ನು ಬೇಧಿಸಿ 28 ಆರೋಪಿಗಳನ್ನು ಬಂಧಿಸಿ 1,60,32,000 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತು ಮಾಡಲಾಗಿದೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ 17 ಪ್ರಕರಣಗಳಿಗೆ ಸಂಬಂಧಿಸಿದಂತೆ 28 ಆರೋಪಿಗಳನ್ನು ಹಾಗೂ ಪ್ರಸಕ್ತ ವರ್ಷ 13 ಪ್ರಕರಣಗಳಿಗೆ ಸಂಬಂಧಿಸಿದಂತೆ 15 ಜನ ಆರೋಪಿಗಳನ್ನು ಬಂಧಿಸಿ ಒಟ್ಟು 1.60 ಕೋಟಿ ರೂ.ಗೂ ಅಧಿಕ ಸ್ವತ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾಗಿರುವ ಸ್ವತ್ತುಗಳಲ್ಲಿ ಬಂಗಾರ-ಬೆಳ್ಳಿ ಆಭರಣ, ಕಾರು ಹಾಗೂ ವಿವಿಧ ಇಲೆಕ್ಟ್ರಾನಿಕ್ಸ್ ಉಪಕರಣಗಳು ಸೇರಿವೆ ಎಂದರು.
ಗಾಂಧಿಚೌಕ್ ಪೆÇಲೀಸ್ ಠಾಣೆಯಲ್ಲಿ 2026 ನೇ ಸಾಲಿನಲ್ಲಿ ಏಳು ಪ್ರಕರಣಗಳನ್ನು ಬೇಧಿಸಿ 6 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, 27.25 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ ಎಂದರು.
ಗೋಳಗುಮ್ಮಟ ಪೆÇಲೀಸ್ ಠಾಣೆಯಲ್ಲಿ ಕಳೆದ ಸಾಲಿನಲ್ಲಿ 6 ಪ್ರಕರಣಗಳಿಗೆ ಸಂಬಂಧಿಸಿದಂತೆ 6 ಜನ ಆರೋಪಿಗಳನ್ನು ಹಾಗೂ ಪ್ರಸಕ್ತ ವರ್ಷದಲ್ಲಿ 1 ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅರೋಪಿಗಳನ್ನು ಬಂಧಿಸಲಾಗಿದ್ದು, ಒಟ್ಟಾರೆಯಾಗಿ 33.02 ಲಕ್ಷ ರೂ. ಜಪ್ತು ಮಾಡಿಕೊಳ್ಳಲಾಗಿದೆ ಎಂದರು.
ಎಪಿಎಂಸಿ ಯಾರ್ಡ್ ಪೆÇಲೀಸ್ ಠಾಣೆಯಲ್ಲಿ ಪ್ರಸಕ್ತ ವರ್ಷದಲ್ಲಿ 2 ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, 9.20 ಲಕ್ಷ ರೂ.ಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ. ಆದರ್ಶ ನಗರ ಪೆÇಲೀಸ್ ಠಾಣಾ ವ್ಯಾಫ್ತಿಯಲ್ಲಿ 2025 ನೇ ಸಾಲಿನಲ್ಲಿ 10 ಪ್ರಕರಣಗಳಲ್ಲಿ 21 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 74.55 ಲಕ್ಷ ರೂ. ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ. ಜಲನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ 2025 ರಲ್ಲಿ ಒಂದು ಪ್ರಕರಣಕ್ಕೆ ಸಂಬಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯಿಂದ 6.30 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ ಎಂದರು.

ಕೊಲೆ ಆರೋಪಿಗಳ ಬಂಧನ

ಅಲಿಯಾಬಾದ್ ಕೈಗಾರಿಕಾ ಪ್ರದೇಶದ ಬಳಿ ಕಾರಿಗೆ ಟಿಪ್ಪರ್ ಹಾಯಿಸಿ ನಂತರ ಗುಂಡಿನ ದಾಳಿ ನಡೆಸಿ ಕೊಲೆ ಮಾಡಿದ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುವ ಪೆÇಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏ. 14 ರಂದು ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಕೊಲೆಗೀಡಾಗಿರುವ ದುರ್ದೈವಿ ರಾಜು ಬಾಫು ಖರೆ (42) ಅವರ ಕಾರಿಗೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆಯಿಸಿ ಪಿಸ್ತೂಲ್ ಮೂಲಕ ಗುಂಡಿನ ದಾಳಿ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಿಯಾಬಾದ್ ಸಮೀಪದ ಪಾಂಗ್ರೂನ್ ದೊಡ್ಡಿಯ ಅಬುಶ್ಯಾ ಸೋಪಾನ್ ಕೊಡ್ಲೆಕರ, ಅಬಶ್ಯಾ ಬಾಳು ಮಾನೆ, ವಾಗೀಶ ಶಂಕರ ಪೆÇೀಳ, ಜಾಲಿಂದರ್ ಉರ್ಫ್ ಪೆÇೀಪಟ್ ಮಲ್ಲಾರಿ, ಖಂಡೂಬಾ ಉರ್ಫ್ ಅಜೀತ್ ತಾಂಬೆ, ಮರುಗು ಉರ್ಫ್ ಹಕ್ಕೆ ಎಂದು ಗುರುತಿಸಲಾಗಿದೆ ಎಂದು ಎಸ್.ಪಿ. ನಿಂಬರಗಿ ವಿವರಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಂದ 2 ಕಂಟ್ರಿ ಪಿಸ್ತೂಲ್, 2 ಮೊಬೈಲ್, ಕೃತ್ಕೆಕ್ಕೆ ಬಳಸಿದ 2 ಮೋಟಾರ್ ಸೈಕಲ್‍ಗಳು, ಕೃತ್ಯಕ್ಕೆ ಬಳಸಿದ ಟಿಪ್ಪರ ವಾಹನವನ್ನು ಜಪ್ತು ಮಾಡಿಕೊಳ್ಳಲಾಗಿದೆ ಎಂದರು.
ಸಂಶಯಾಸ್ಪದ ಆರೋಪಿಗಳು ಬಬಲೇಶ್ವರ ತಾಲೂಕಿನ ಖಿಲಾರಹಟ್ಟಿ, ಇಂಡಿ ತಾಲೂಕಿನ ಕ್ಯಾತನಕೇರಿಯಲ್ಲಿರುವುದನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.
ಎಎಸ್‍ಪಿ ರಾಮನಗೌಡ ಹಟ್ಟಿ, ಪೆÇ್ರಬೇಷನರಿ ಐಪಿಎಸ್ ಅಧಿಕಾರಿ ಇಷಿತಾ ಗುಪ್ತಾ, ಡಿವೈಎಸ್‍ಪಿಗಳಾದ ತುಳಜಪ್ಪ ಸುಲ್ಫಿ, ಜಿ. ನಾಗರಾಜ್ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.